ಸಾರಾಂಶ
ಮಹಾಶಿವರಾತ್ರಿ ಪ್ರಯುಕ್ತ ಮಾಜಿ ಸಚಿವ ವಿ.ಸೋಮಣ್ಣ ಅವರು ಶುಕ್ರವಾರ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕು ಗೆದ್ಮೇನಹಳ್ಳಿಯ ನಂಜುಂಡೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ಮೋದಿ ಮತ್ತೇ ಪ್ರಧಾನಿ ಆಗಲೆಂದು ಪ್ರಾರ್ಥನೆ ಸಲ್ಲಿಸಿದರು.
ಕನ್ನಡಪ್ರಭ ವಾರ್ತೆ ಹೊಳವನಹಳ್ಳಿ
ಮಹಾಶಿವರಾತ್ರಿ ಪ್ರಯುಕ್ತ ಮಾಜಿ ಸಚಿವ ವಿ.ಸೋಮಣ್ಣ ಅವರು ಶುಕ್ರವಾರ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕು ಗೆದ್ಮೇನಹಳ್ಳಿಯ ನಂಜುಂಡೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ಮೋದಿ ಮತ್ತೇ ಪ್ರಧಾನಿ ಆಗಲೆಂದು ಪ್ರಾರ್ಥನೆ ಸಲ್ಲಿಸಿದರು. ನಂತರ ಸುದ್ದಿಗಾರರ ಜೊತೆ ಮಾತನಾಡಿ, ನಮ್ಮ ದೇಶದ ಸಂಪ್ರದಾಯ ಮತ್ತು ಸಂಸ್ಕೃತಿ ಉಳಿವಿಗೆ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದು ನರೇಂದ್ರ ಮೋದಿ ಪ್ರಧಾನಿ ಆಗಬೇಕು. ಮೋದಿ ಮತ್ತೆ ಪ್ರಧಾನಿ ಆದರೆ ನಮ್ಮ ದೇಶ ಅಭಿವೃದ್ಧಿಯ ಪಥದತ್ತ ಮುನ್ನುಗ್ಗಲಿದೆ ಎಂದರು.ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಹೈಕಮಾಂಡ್ ಯಾರಿಗೆ ಟಿಕೆಟ್ ನೀಡಿದರೂ ನಾನು ಅವರ ಪರವಾಗಿ ಪ್ರಚಾರ ಮಾಡ್ತೀನಿ. ನನಗೆ ದೇಶದ ಭವಿಷ್ಯ ಮುಖ್ಯ ಅಷ್ಟೇ ಎಂದು ತುಮಕೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯೂ ಆಗಿರುವ ವಿ.ಸೋಮಣ್ಣ ತಿಳಿಸಿದರು.