ಸೋಮವಾರಪೇಟೆ ತಾಲೂಕಿನ ಯಡವನಾಡು ಹಾಗೂ ಅತ್ತೂರು ಗ್ರಾಮಗಳನ್ನು ಪುನಃ ಕಂದಾಯ ಗ್ರಾಮಗಳನ್ನಾಗಿ ಮರುಸ್ಥಾಪಿಸುವ ನಿಟ್ಟಿನಲ್ಲಿ ಮರುಸರ್ವೇಕ್ಷಣೆ ನಡೆಸುವಂತೆ ಶಾಸಕ ಡಾ. ಮಂತರ್ ಗೌಡ ನೇತೃತ್ವದಲ್ಲಿ ರೈತರ ನಿಯೋಗವು ವಿಧಾನಸೌಧ ದಲ್ಲಿ ಇಂದು ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ. ನರೇಂದ್ರ ಸ್ವಾಮಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

ಸೋಮವಾರಪೇಟೆ: ಸೋಮವಾರಪೇಟೆ ತಾಲೂಕಿನ ಯಡವನಾಡು ಹಾಗೂ ಅತ್ತೂರು ಗ್ರಾಮಗಳನ್ನು ಪುನಃ ಕಂದಾಯ ಗ್ರಾಮಗಳನ್ನಾಗಿ ಮರುಸ್ಥಾಪಿಸುವ ನಿಟ್ಟಿನಲ್ಲಿ ಮರುಸರ್ವೇಕ್ಷಣೆ ನಡೆಸುವಂತೆ ಶಾಸಕ ಡಾ. ಮಂತರ್ ಗೌಡ ನೇತೃತ್ವದಲ್ಲಿ ರೈತರ ನಿಯೋಗವು ವಿಧಾನಸೌಧ ದಲ್ಲಿ ಇಂದು ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ. ನರೇಂದ್ರ ಸ್ವಾಮಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

ಈ ಹಿಂದೆ ಕಂದಾಯ ಗ್ರಾಮಗಳಾಗಿದ್ದ ಯಡವನಾಡು ಹಾಗೂ ಅತ್ತೂರು ಗ್ರಾಮಗಳು ತದನಂತರ ರದ್ದುಗೊಂಡಿರುವುದರಿಂದ ಇಲ್ಲಿನ ರೈತರು ಕೃಷಿ ಚಟುವಟಿಕೆಗಳು ಹಾಗೂ ವಿವಿಧ ಸರ್ಕಾರಿ ಸೌಲಭ್ಯಗಳನ್ನು ಪಡೆಯುವಲ್ಲಿ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.ಈ ಹಿನ್ನೆಲೆಯಲ್ಲಿ ರೈತರ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದ ಶಾಸಕ ಡಾ. ಮಂತರ್ ಗೌಡ ಅವರು, ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಈ ವಿಚಾರವನ್ನು ಚರ್ಚಿಸಿ, ಎರಡೂ ಗ್ರಾಮಗಳ ಮರುಸರ್ವೇಕ್ಷಣೆ ನಡೆಸುವ ಮೂಲಕ ಪುನಃ ಕಂದಾಯ ಗ್ರಾಮಗಳನ್ನಾಗಿ ಮರುಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಇದರಿಂದ ಸ್ಥಳೀಯ ರೈತರಿಗೆ ಅನುಕೂಲವಾಗುವುದರ ಜೊತೆಗೆ ಹಲವು ವರ್ಷಗಳಿಂದ ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ದೊರಕಿಸಿಕೊಡಬೇಕು ಎಂದು ಮನವಿ ಮಾಡಿದರು.ಯಡವನಾಡು ಗ್ರಾಮ ಸಮಿತಿ ಅಧ್ಯಕ್ಷ ಕೆ.ಎಂ. ಗಣೇಶ್, ಐಗೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಡಿ.ಎಂ. ರಮೇಶ್, ಟಿ.ಕೆ. ರಮೇಶ್, ವಿ.ಎಸ್. ಶರತ್ ಹಾಗೂ ಕೆ.ಸಿ. ಮೋಹನ್ ಕುಮಾರ್ ಇದ್ದರು.