ಸಾರಾಂಶ
ಪಂಚ ಗ್ಯಾರಂಟಿ ಯೋಜನೆಗಳಿಂದ ಅರ್ಹ ಫಲಾನುಭವಿಗಳು ವಂಚಿತರಾಗಿದ್ದರೆ ಅಂತಹ ಫಲಾನುಭವಿಗಳನ್ನು ಪತ್ತೆಹಚ್ಚಿ ಯೋಜನೆಗೆ ಒಳಪಡಿಸಬೇಕು. ಅರ್ಹ ಫಲಾನುಭವಿಗಳು ಈ ಯೋಜನೆಯಿಂದ ವಂಚಿತರಾಗಬಾರದು.
ಕನ್ನಡಪ್ರಭ ವಾರ್ತೆ ನಾಗಮಂಗಲ
ಗೃಹಲಕ್ಷ್ಮಿ ಯೋಜನೆಯಡಿ ಕೆಲವು ದೂರುಗಳು ಕೇಳಿಬರುತ್ತಿವೆ. ಅವುಗಳನ್ನು ಸರಿಪಡಿಸಿ ಈ ಯೋಜನೆಯಲ್ಲಿ ಸಿಗುವ ಸೌಲಭ್ಯ ಪಡೆಯಲು ಮನೆಯೊಡತಿ ಹೆಸರನ್ನು ಪಡಿತರ ಚೀಟಿಯಿಂದ ಕೈ ಬಿಟ್ಟು ಮತ್ತೊಬ್ಬರನ್ನು ಸೇರುಸುತ್ತಿರುವ ಅನೇಕ ನಿದರ್ಶನಗಳು ಕಂಡು ಬರುತ್ತಿವೆ. ಈ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಬೇಕು ಎಂದು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಮೂಡ್ಲಿಗೌಡ ಸೂಚಿಸಿದರು.ಪಟ್ಟಣದ ತಾಪಂ ಸಭಾಂಗಣದಲ್ಲಿ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಮಾಸಿಕ ಸಭೆಯಲ್ಲಿ ಮಾತನಾಡಿ, ಗ್ಯಾರಂಟಿ ಯೋಜನೆಯಡಿ ಬರುವ ಎಲ್ಲಾ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳನ್ನು ಸಮರ್ಪಕವಾಗಿ ತಲುಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಪಂಚ ಗ್ಯಾರಂಟಿ ಯೋಜನೆಗಳಿಂದ ಅರ್ಹ ಫಲಾನುಭವಿಗಳು ವಂಚಿತರಾಗಿದ್ದರೆ ಅಂತಹ ಫಲಾನುಭವಿಗಳನ್ನು ಪತ್ತೆಹಚ್ಚಿ ಯೋಜನೆಗೆ ಒಳಪಡಿಸಬೇಕು. ಅರ್ಹ ಫಲಾನುಭವಿಗಳು ಈ ಯೋಜನೆಯಿಂದ ವಂಚಿತರಾಗಬಾರದು ಎಂದರು.ಯೋಜನೆಗಳನ್ನು ಇನ್ನಷ್ಟ ಪಾರದರ್ಶಕಗೊಳಿಸಲು ಸಚಿವ ಎನ್.ಚಲುವರಾಯಸ್ವಾಮಿ ಅವರ ನಿರ್ದೇಶನದಂತೆ ಇನ್ನು ಮುಂದೆ ತಾಲೂಕಿನ ಗ್ರಾಪಂ ಕೇಂದ್ರಗಳಲ್ಲಿ ಸಭೆ ನಡೆಸಲಾಗುವುದು. ಆ.29ರಂದು ನೆಲ್ಲಿಗೆರೆ ಗ್ರಾಪಂ ಕೇಂದ್ರದಲ್ಲಿ ಸಭೆ ನಡೆಸಲಾಗುವುದು ಎಂದರು.
ಪಂಚಗ್ಯಾರಂಟಿ ಯೋಜನೆಗಳ ಕುರಿತು ಆಯಾ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು. ಸಭೆಯಲ್ಲಿ ತಾಪಂ ಸಹಾಯಕ ಲೆಕ್ಕಾಧಿಕಾರಿ ಗಿರೀಶ್, ಸಮಿತಿ ಸದಸ್ಯರಾದ ವಿನಯ್‌ಗೌಡ, ತಮ್ಮಣ್ಣ, ರವಿಕಾಂತೇಗೌಡ, ನೀಲಾಮೂರ್ತಿ, ಗೀತಾ, ರಘು, ಶ್ರೀಧರ್, ನವೀನ ಸೇರಿದಂತೆ ಇತರರು ಇದ್ದರು.ಡೇರಿ ಅಧ್ಯಕ್ಷರಾಗಿ ಎಸ್.ಡಿ.ನಾಗರಾಜು ಆಯ್ಕೆ
ಮಂಡ್ಯ:ತಾಲೂಕಿನ ಸೂನಗಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಎಸ್.ಡಿ.ನಾಗರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಾಲೂಕಿನ ಸೂಗನಹಳ್ಳಿ ಡೇರಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದು ಎಸ್.ಡಿ.ನಾಗರಾಜು ಹೊರತು ಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಎಸ್.ಡಿ.ನಾಗರಾಜು ಅವಿರೋಧವಾಗಿ ಆಯ್ಕೆಗೆ ಸಹಕರಿಸಿದ ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಹಾಗೂ ಸದಸ್ಯರು, ಜೆಡಿಎಸ್ ಕಾರ್ಯಕರ್ತರು, ಮುಖಂಡರು, ಗ್ರಾಮಸ್ಥರಿಗೆ ಅಭಿನಂದನೆ ಸಲ್ಲಿಸಿದ್ದಾರೆ.