ಕಾಂಗ್ರೆಸ್ ತಾಯಿಯಿದ್ದಂತೆ , ಪಕ್ಷದಲ್ಲೇ ಇದ್ದುಕೊಂಡು ತಾಯಿಗೆ ದ್ರೋಹ ಮಾಡುವ ಕೆಲಸವನ್ನು ಕೆಲವರು ಮಾಡುತ್ತಿದ್ದಾರೆ.

ಶಶಿ ಹುಲಿಕುಂಟೆಮಠ್ ಪರ ಒಗ್ಗಟ್ಟಿನಿಂದ ಶ್ರಮಿಸಲು ರಾಜೀವ್ ಗೌಡ ಕರೆ

ಕನ್ನಡಪ್ರಭ ವಾರ್ತೆ ಶಿಡ್ಲಘಟ್ಟ

ಕಾಂಗ್ರೆಸ್‌ ಪಕ್ಷದಲ್ಲೇ ಇದ್ದುಕೊಂಡು ಕೆಲವರು ದ್ರೋಹ ಮಾಡುತ್ತಿದ್ದಾರೆ ಎಂಬ ಆರೋಪದ ಮೂಲಕ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಪರೋಕ್ಷವಾಗಿ ಪಕ್ಷದೊಳಗಿನ ತಮ್ಮ ರಾಜಕೀಯ ವಿರೋಧಿಗಳ ವಿರುದ್ಧ ವಾಗ್ದಾಳಿ ನಡೆಸಿದರು.ನಗರದ ಕಾಂಗ್ರೆಸ್ ಭವನದಲ್ಲಿ ಭಾನುವಾರ ಆಗ್ನೇಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಪರವಾಗಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿ, ಕಾಂಗ್ರೆಸ್ ತಾಯಿಯಿದ್ದಂತೆ , ಪಕ್ಷದಲ್ಲೇ ಇದ್ದುಕೊಂಡು ತಾಯಿಗೆ ದ್ರೋಹ ಮಾಡುವ ಕೆಲಸವನ್ನು ಕೆಲವರು ಮಾಡುತ್ತಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯ ವಿಚಾರ ಪ್ರಸ್ತಾಪಿಸಿದ ಅವರು, ಕೆಲವು ಕಿಡಿಗೇಡಿಗಳು ತಮ್ಮ ವಿರುದ್ಧ ಮತ ಹಾಕಿಸಿದ್ದಾರೆ ಎಂದು ಆರೋಪಿಸಿದರು.ನೌಕರರ ಸಮಸ್ಯೆಗಳಿಗೆ ಸ್ಪಂದಿಸುವೆ:

ವಿಧಾನಪರಿಷತ್ ಸದಸ್ಯ ಡಿ.ಟಿ. ಶ್ರೀನಿವಾಸ್ ಮಾತನಾಡಿ, ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಮತದಾರರು ಗೊಂದಲಕ್ಕೆ ಒಳಗಾಗದಂತೆ ಮೊದಲ ಪ್ರಾಶಸ್ತ್ಯದ ಮತವನ್ನು ಸರಿಯಾಗಿ ಚಲಾಯಿಸುವ ಕುರಿತು ಕಾರ್ಯಕರ್ತರು ಜಾಗೃತಿ ಮೂಡಿಸಬೇಕು ಎಂದರು. ಮತಪತ್ರದಲ್ಲಿ ‘1’ ಎಂಬ ಸಂಖ್ಯೆಯನ್ನು ಸ್ಪಷ್ಟವಾಗಿ ನಮೂದಿಸಬೇಕು. ಬೇರೆ ಗುರುತು, ಅಕ್ಷರ ಅಥವಾ ಸಹಿ ಮಾಡದಂತೆ ಮತದಾರರಿಗೆ ತಿಳಿವಳಿಕೆ ನೀಡಬೇಕು ಎಂದು ಹೇಳಿದರು.ನಿರಂತರವಾಗಿ ನಿಮ್ಮೊಂದಿಗಿರುವೆ:

ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಮಾತನಾಡಿ, ತಾನು ಮೂಲತಃ ತುಮಕೂರು ಜಿಲ್ಲೆಯವನಾಗಿದ್ದು, ಕಳೆದ 21 ವರ್ಷಗಳಿಂದ ಕಾಂಗ್ರೆಸ್‌ನಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ವಿದ್ಯಾರ್ಥಿ ಘಟಕದ ಮೂಲಕ ರಾಜಕೀಯ ಪ್ರವೇಶಿಸಿ, ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷನಾಗಿ ಸುಮಾರು 12 ವರ್ಷಗಳ ಕಾಲ ಚುನಾಯಿತ ಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ್ದೇನೆ ಎಂದರು.ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಕೇಶವರೆಡ್ಡಿ ಶಿಡ್ಲಘಟ್ಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಸಹನಾ ರಾಜೀವ್ ಗೌಡ_, ಚಿಲಕಲನೇರ್ಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಾರೆಡ್ಡಿ, ಮುಖಂಡರಾದ ಡಾಲ್ಫಿನ್ ನಾಗರಾಜ್, ಕೆ. ಗುಡಿಯಪ್ಪ, ಬೈಯಪ್ಪನಹಳ್ಳಿ ಗಣೇಶ್, ದೊಗರನಾಯಕನಹಳ್ಳಿ ವೆಂಕಟೇಶ್, ಅಪ್ಸರ್ ಪಾಷಾ, ತನ್ವೀರ್ ಪಾಷಾ , ಮುತ್ತೂರು ವೆಂಕಟೇಶ್‌ , ಕೆ.ನಾರಾಯಣಸ್ವಾಮಿ , ಮಧುಸೂಧನ್‌ , ಬಾಲಕೃಷ್ಣ , ಮಹಬೂಬ್‌ , ಹಾಗೂ ಹಿರಿಯ ಮುಖಂಡರು, ಕಾರ್ಯಕರ್ತರು ದೊಡ್ಡಮಟ್ಟದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿದರು.ಸುದ್ದಿ ಚಿತ್ರ ೧

ನಗರದ ಕಾಂಗ್ರೆಸ್‌ ಭವನದಲ್ಲಿ ಭಾನುವಾರ ಆಗ್ನೇಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಹಾಗೂ ವಿಧಾನಪರಿಷತ್ ಸದಸ್ಯ ಡಿ.ಟಿ. ಶ್ರೀನಿವಾಸ್ ರವರನ್ನು ಸನ್ಮಾನಿಸಿದ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡ