ಸಾರಾಂಶ
-ಅವಿರೋಧ ಆಯ್ಕೆ ಘೋಷಿಸಿದ ಜಿಲ್ಲಾ ಸಹ ಚುನಾವಣಾಧಿಕಾರಿ ಶಿವರಾಜ ಗಂದಗೆ
-----ಕನ್ನಡಪ್ರಭವಾರ್ತೆ ಬೀದರ್: ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷರಾಗಿ ಸೋಮನಾಥ ಪಾಟೀಲ್ ಹುಡಗಿ ಅವರು ಎರಡನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಮುಂದುವರೆದಿದ್ದಾರೆ.
ಪಕ್ಷದಿಂದ ರಾಜ್ಯಾದ್ಯಂದ ನಡೆದ ಪಕ್ಷದ ಸಂಘಟನಾ ಪರ್ವ ಪ್ರಯುಕ್ತ ನಗರದ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಚುನಾವಣೆ ಪ್ರಕ್ರಿಯೆ ನಡೆಯಿತು. ಸೋಮನಾಥ ಪಾಟೀಲ್ ಒಬ್ಬರು ಮಾತ್ರ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆಯನ್ನು ಜಿಲ್ಲಾ ಸಹ ಚುನಾವಣಾಧಿಕಾರಿ ಶಿವರಾಜ ಗಂದಗೆ ಘೋಷಣೆ ಮಾಡಿದರು.ಕಳೆದ ವರ್ಷ ಜನವರಿಯಲ್ಲಿ ಮೊದಲ ಬಾರಿಗೆ ಪಾಟೀಲ್ ಮಧ್ಯಂತರ ಜಿಲ್ಲಾಧ್ಯಕ್ಷರಾಗಿದ್ದು, ಒಂದು ವರ್ಷ ಪೂರ್ಣಗೊಳಿಸಿದ್ದಾರೆ. ರಾಜ್ಯಾದ್ಯಂತ ಇದೀಗ ಪಕ್ಷದ ಸಂಘಟನಾ ಪರ್ವ ನಡೆಯುತ್ತಿದೆ. ಬೀದರ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಸೋಮನಾಥ ಪಾಟೀಲ್ ಮತ್ತೆ ಅಧ್ಯಕ್ಷರಾಗಿ ಮುಂದುವರಿದಿದ್ದಾರೆ.
ಸನ್ಮಾನ ಸ್ವೀಕರಿಸಿ ಮಾತನಾಡಿದ ಪಾಟೀಲ್, ಕಾರ್ಯಕರ್ತರಿಂದ ಹಿಡಿದು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಸಮನ್ವಯ ಸಾಧಿಸಿ ಪಕ್ಷದ ಸಂಘಟನೆ ಮತ್ತಷ್ಟು ಬಲಿಷ್ಠ ಮಾಡಿ ಮುಂದಿನ ಎಲ್ಲ ಚುನಾವಣೆಗಳಲ್ಲಿ ಪಕ್ಷಕ್ಕೆ ಭರ್ಜರಿ ಜಯ ತಂದುಕೊಡುವುದೇ ನನ್ನ ಧ್ಯೇಯ. ವರಿಷ್ಠರು ಇಟ್ಟ ವಿಶ್ವಾಸಕ್ಕೆ ಚ್ಯುತಿ ಬರದಂತೆ ಹಗಲಿರುಳು ದುಡಿಯುವೆ ಎಂದು ಪಾಟೀಲ್ ಹೇಳಿದರು.ಶಾಸಕ ಪ್ರಭು ಚವ್ಹಾಣ್, ಡಾ.ಶೈಲೇಂದ್ರ ಬೆಲ್ದಾಳೆ, ವಿಧಾನ ಪರಿಷತ್ ಮಾಜಿ ಸದಸ್ಯ ರಘುನಾಥರಾವ ಮಲ್ಕಾಪುರೆ, ಮಾಜಿ ಶಾಸಕ ಗುಂಡಪ್ಪ ಬಿರಾದಾರ್, ಬಿಡಿಎ ಮಾಜಿ ಅಧ್ಯಕ್ಷ ಬಾಬು ವಾಲಿ, ಪ್ರಮುಖರಾದ ಈಶ್ವರಸಿಂಗ್ ಠಾಕೂರ್, ಗುರುನಾಥ ಜ್ಯಾಂತಿಕರ್, ವಿಜಯಕುಮಾರ ಪಾಟೀಲ್ ಗಾದಗಿ, ಪೀರಪ್ಪ ಯರನಳ್ಳಿ, ಕಿರಣ ಪಾಟೀಲ್, ಶಶಿ ಹೊಸಳ್ಳಿ, ಬಾಬುರಾವ ಕಾರಬಾರಿ ಇದ್ದರು.
--ಫೋಟೊ: ಚಿತ್ರ 29ಬಿಡಿಆರ್70