ಪಟ್ಟಣ ಸೇರಿದಂತೆ ಸುತ್ತಮುತ್ತಲ ಗ್ರಾಮೀಣ ಭಾಗದಲ್ಲಿ ಆಯುಧ ಪೂಜೋತ್ಸವವನ್ನು ಮಂಗಳವಾರ ಆಚರಿಸಲಾಯಿತು.

ಸೋಮವಾರಪೇಟೆ: ಪಟ್ಟಣ ಸೇರಿದಂತೆ ಸುತ್ತಮುತ್ತಲ ಗ್ರಾಮೀಣ ಭಾಗದಲ್ಲಿ ಆಯುಧ ಪೂಜೋತ್ಸವವನ್ನು ಮಂಗಳವಾರ ಆಚರಿಸಲಾಯಿತು.ಹಬ್ಬದ ಪ್ರಯುಕ್ತ ಪಟ್ಟಣದಲ್ಲಿ ಪೂಜಾ ಸಾಮಾಗ್ರಿಗಳು, ಹೂವು, ಕುಂಬಳ ಕಾಯಿಗಳ ಭರ್ಜರಿ ವ್ಯಾಪಾರ ನಡೆಯಿತು. ಜನರು ತಮ್ಮ ಮನೆಗಳಲ್ಲಿ ವಾಹನಗಳು, ಕೃಷಿ ಯಂತ್ರೋಪಕರಣಗಳಿಗೆ ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯಗಳಲ್ಲೂ ಆಯುಧ ಪೂಜೋತ್ಸವ ಅಂಗವಾಗಿ ವಿಶೇಷ ಪೂಜೆಗಳನ್ನು ಏರ್ಪಡಿಸಲಾಗಿತ್ತು.

ಶಾಲಾ ಕಾಲೇಜುಗಳಿಗೆ ವಿದ್ಯಾರ್ಥಿಗಳನ್ನು ಕರೆತರುವ ವಾಹನಗಳಿಗೆ ಚಾಲಕರು, ಶಿಕ್ಷಕ ವೃಂದ, ಶಾಲಾಡಳಿತ ಮಂಡಳಿ ಪದಾಧಿಕಾರಿಗಳು ಸಾಮೂಹಿಕವಾಗಿ ವಿಶೇಷ ಪೂಜೆ ಸಲ್ಲಿಸಿದರು.