ಸಾರಾಂಶ
ಮಕ್ಕಳ ಹಕ್ಕುಗಳ ಒಡಂಬಡಿಕೆಯ ಪರಿಚ್ಚೇದಗಳ ಪರಿಚಯ ಮತ್ತು ಮಕ್ಕಳ ಹಕ್ಕುಗಳು ಜಾಗೃತಿ ಕಾರ್ಯಕ್ರಮ ನಡೆಯಿತು.
ಕನ್ನಡಪ್ರಭವಾರ್ತೆ ಸೋಮವಾರಪೇಟೆ
ಚೈಲ್ಡ್ ರೈಟ್ಸ್ ಟ್ರಸ್ಟ್ ಬೆಂಗಳೂರು ಡಾ. ಪದ್ಮಿನಿ ಮಕ್ಕಳ ಹಕ್ಕುಗಳ ಫೆಲೋಶಿಪ್ ಮತ್ತು ನಾವು ಪ್ರತಿಷ್ಠಾನ ಇವರ ಸಹಯೋಗದೊಂದಿಗೆ ತಾಲೂಕಿನ ಹಾನಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾನಗಲ್ಲು ಶೆಟ್ಟಳ್ಳಿಯ ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಒಡಂಬಡಿಕೆಯ ಪರಿಚ್ಚೇದಗಳ ಪರಿಚಯ ಮತ್ತು ಮಕ್ಕಳ ಹಕ್ಕುಗಳ ಜಾಗೃತಿ ಕಾರ್ಯಕ್ರಮ ನಡೆಯಿತು.ಮಕ್ಕಳ ಹಕ್ಕುಗಳು ಮತ್ತು ಮಕ್ಕಳ ಹಕ್ಕುಗಳ ಒಡಂಬಡಿಕೆಯ ಪರಿಚ್ಚೇದಗಳ ಕುರಿತು ಪರಿಚಯಿಸುವ ಮೂಲಕ ಚೈಲ್ಡ್ ರೈಟ್ಸ್ ಟ್ರಸ್ಟ್ ನ ಸುಮನ್ ಮ್ಯಾಥ್ಯೂ ಅವರು ಮಕ್ಕಳೊಟ್ಟಿಗೆ ಸಂವಾದ ನಡೆಸಿದರು.
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯ ಬಿ.ಎಂ. ಸತೀಶ್, ಸಹ ಶಿಕ್ಷಕ ಸುಕುಮಾರ್ ಮತ್ತು ನಾವು ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಗೌತಮ್ ಕಿರಗಂದೂರು ಇದ್ದರು.