ಸಾರಾಂಶ
ಪಟ್ಟಣದ ಗಾಂಧಿ ವೃತ್ತದಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ ನಡೆಸಲಾಯಿತು. ಗಣ್ಯರು ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಕನ್ನಡಪ್ರಭವಾರ್ತೆ ಸೋಮವಾರಪೇಟೆ
ಇಲ್ಲಿನ ನಿವೃತ್ತ ಸರ್ಕಾರಿ ನೌಕರರ ಸಂಘ ಹಾಗೂ ಲಯನ್ಸ್ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ಗುರುವಾರ ಪಟ್ಟಣದ ಗಾಂಧಿ ವೃತ್ತದಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮವನ್ನು ನಡೆಸಲಾಯಿತು.ನಿವೃತ್ತ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಕೆ. ಮಲ್ಲಪ್ಪ ಹಾಗೂ ಲಯನ್ಸ್ ಅಧ್ಯಕ್ಷ ರಾಮಶೆಟ್ಟಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಈ ಸಂದರ್ಭ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜಯಂತಿ ಶಿವಕುಮಾರ್, ಸದಸ್ಯರಾದ ಮೃತ್ಯುಂಜಯ, ಶೀಲಾ ಡಿಸೋಜ, ಲಯನ್ಸ್ ಕಾರ್ಯದರ್ಶಿ ಮಂಜುನಾಥ ಚೌಟ, ಖಜಾಂಜಿ ಕೆ. ಎನ್. ತೇಜಸ್ವಿ ಹಾಗೂ ಸದಸ್ಯರು ಇದ್ದರು.