ಸಾರಾಂಶ
ಜೇಸಿಐ ಪುಷ್ಪಗಿರಿ ಸೋಮವಾರಪೇಟೆಯ ನೂತನ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಇತ್ತೀಚೆಗೆ ಸ್ಥಳೀಯ ಸಂಕಪ್ಪ ಸಭಾಂಗಣದಲ್ಲಿ ನಡೆಯಿತು. ಪದಗ್ರಹಣ ಕಾರ್ಯಕ್ರಮದಲ್ಲಿ ನೂತನ ಸಾಲಿನ ಅಧ್ಯಕ್ಷೆ ಜಗದಾಂಬ ಗುರುಪ್ರಸಾದ್, ಕಾರ್ಯದರ್ಶಿ ವಿನುತಾ ಸುದೀಪ್ ಹಾಗೂ ಆಡಳಿತ ಮಂಡಳಿಗೆ ವಲಯಾಧ್ಯಕ್ಷ ವಿಜಯಕುಮಾರ್ ಪದಗ್ರಹಣ ನೆರವೇರಿಸಿದರು
ಕನ್ನಡಪ್ರಭ ವಾರ್ತೆ ಸೋಮವಾರಪೇಟೆ
ಇಲ್ಲಿನ ಜೇಸಿಐ ಪುಷ್ಪಗಿರಿ ಸೋಮವಾರಪೇಟೆಯ ನೂತನ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಇತ್ತೀಚೆಗೆ ಸ್ಥಳೀಯ ಸಂಕಪ್ಪ ಸಭಾಂಗಣದಲ್ಲಿ ನಡೆಯಿತು.ಪದಗ್ರಹಣ ಕಾರ್ಯಕ್ರಮದಲ್ಲಿ ನೂತನ ಸಾಲಿನ ಅಧ್ಯಕ್ಷೆ ಜಗದಾಂಬ ಗುರುಪ್ರಸಾದ್, ಕಾರ್ಯದರ್ಶಿ ವಿನುತಾ ಸುದೀಪ್ ಹಾಗೂ ಆಡಳಿತ ಮಂಡಳಿಗೆ ವಲಯಾಧ್ಯಕ್ಷ ವಿಜಯಕುಮಾರ್ ಪದಗ್ರಹಣ ನೆರವೇರಿಸಿದರು. ನಂತರ ಮಾತನಾಡಿದ ವಿಜಯಕುಮಾರ್, ಹಲವು ವರ್ಷಗಳಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸೇವಾ ಕೆಲಸಗಳನ್ನು ಮಾಡಿಕೊಂಡು ಬರುತ್ತಿದೆ. ಸಂಸ್ಥೆಯಲ್ಲಿ ಹಲವು ರಾಜ್ಯಮಟ್ಟದ ತರಬೇತಿಗಳನ್ನು ನೀಡುವ ಮೂಲಕ ಸಮಾಜಕ್ಕೆ ಹಲವು ಯುವ ನಾಯಕರನ್ನು ನೀಡುತ್ತಿದೆ. ಸಂಸ್ಥೆಯಲ್ಲಿ ಸದಸ್ಯರ ಜೀವನ ಭದ್ರತೆಗಾಗಿ ವಿಮಾ ಯೋಜನೆ ಜಾರಿಗೆ ತಂದಿದ್ದು, ೪೦ ವಯೋಮಾನದೊಳಗಿನ ಎಲ್ಲರೂ ಬಳಸಿಕೊಳ್ಳಬೇಕೆಂದು ಮನವಿ ಮಾಡಿದರು.
ಜೇಸಿ ವಲಯ ಉಪಾಧ್ಯಕ್ಷ ಜಗದೀಶ್ ಮಾತನಾಡಿ, ವ್ಯಕ್ತಿತ್ವ ವಿಕಸನಕ್ಕೆ ಸಮಾಜಕ್ಕೆ ತನ್ನದೇ ಆದ ಕೊಡುಗೆಗಳನ್ನು ನೀಡಿಕೊಂಡು ಬರುತ್ತಿರುವ ಸಂಸ್ಥೆ ಸೇವಾವಲಯದಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿದೆ. ಯುವಜನತೆಗೆ ವ್ಯಕ್ತಿತ್ವ ವಿಕಸನ, ಮಾರ್ಗದರ್ಶನ ಮಾಡುವ ಮೂಲಕ ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸ ಮಾಡಿಕೊಂಡು ಬರುತ್ತಿದೆ ಎಂದರು.ನಿಕಟಪೂರ್ವ ಅಧ್ಯಕ್ಷ ಎಸ್.ಆರ್. ವಸಂತ್, ಎಂ.ಎ. ರುಬೀನಾ, ಮಹಿಳಾ ಜೇಸಿ ಅಧ್ಯಕ್ಷೆ ಜ್ಯೋತಿ ರಾಜೇಶ್, ಜೆಜೆಸಿ ಅಧ್ಯಕ್ಷೆ ದಿಶಾ ಗಿರೀಶ್ ಇದ್ದರು.