ಸಾರಾಂಶ
ತಾಲೂಕಿನ ಐಗೂರು ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಯ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.
ಕನ್ನಡಪ್ರಭ ವಾರ್ತೆ ಸೋಮವಾರಪೇಟೆ
ತಾಲೂಕಿನ ಐಗೂರು ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಯ ಆವರಣದಲ್ಲಿ ಶನಿವಾರ 70 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.ಕಸಬಾ ಹೋಬಳಿ ಘಟಕದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಂಗಾರು ಕೀರ್ತಿಪ್ರಸಾದ್ ಧ್ವಜಾರೋಹಣ ನೆರವೇರಿಸಿದರು. ನಂತರ ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಯುಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಖಜಾಂಚಿ ಕೆ.ಪಿ. ದಿನೇಶ್ ಉದ್ಘಾಟಿಸಿ, ಕನ್ನಡ ನಾಡು ನುಡಿಯ ಬಗ್ಗೆ ಮಾತನಾಡಿದರು.ಕಾರ್ಯಕ್ರಮದಲ್ಲಿ ಕಾಜೂರು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಕಾರ್ಯಕ್ರಮದಲ್ಲಿ ಸಾಹಿತ್ಯ ಪರಿಷತ್ ಹೋಬಳಿ ಘಟಕದ ಗೌರವ ಕಾರ್ಯದರ್ಶಿ ಸರಳ ಕುಮಾರಿ, ಪ್ರಮುಖರಾದ ಎಂ.ಪಿ. ಧರ್ಮಪ್ಪ, ವಿಶ್ವನಾಥ ರಾಜೇ ಅರಸ್, ಹೆಚ್.ಎಂ. ಸೋಮಪ್ಪ, ಸುಕುಮಾರ, ಮಚ್ಚಂಡ ಅಶೋಕ, ಸಬಿತಾ ಚೆನ್ನ ಕೇಶವ, ಆಶಾ, ಹೇಮಂತ್ ಪಾರೇರ, ತಿಮ್ಮಯ್ಯ, ಝೈನುದ್ದೀನ್ ಹೊಸತೋಟ ಪಾಲ್ಗೊಂಡಿದ್ದರು.;Resize=(128,128))
;Resize=(128,128))