ಕನ್ನಡಪ್ರಭವಾರ್ತೆ ಸೋಮವಾರಪೇಟೆ
ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಅಧ್ಯಕ್ಷತೆಯಲ್ಲಿ ಕುಡಿಯುವ ನೀರಿನ ಬಗ್ಗೆ ಸಭೆ ನಡೆಸಲಾಯಿತು.ತಾಲೂಕಿನ ವ್ಯಾಪಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತಂತೆ ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯಿತಿಯ ಆಡಳಿತಾಧಿಕಾರಿಗಳು, ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮುಂದಿನ ದಿನಗಳಲ್ಲಿ ತಾಲೂಕು ವ್ಯಾಪ್ತಿಯಲ್ಲಿ ಉಂಟಾಗಬಹುದಾದ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಶಾಸಕರು ಸೂಚಿಸಿದರು. ಮುಂಜಾಗ್ರತಾ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಈ ಸಂದರ್ಭ ಕೊಡಗು ಜಿಲ್ಲಾ ಪಂಚಾಯಿತಿಯ ಮುಖ್ಯ ಯೋಜನಾಧಿಕಾರಿ ಅಬ್ದುಲ್‌ನಬಿ, ತಹಸೀಲ್ದಾರ್ ಕೃಷ್ಣಮೂರ್ತಿ, ತಾಲೂಕು ಪಂಚಾಯಿತಿಯ ಕಾರ್ಯನಿರ್ವಹಣಾಧಿಕಾರಿ ಪರಮೇಶಕುಮಾರ್ ಇದ್ದರು.ಸೋಮವಾರಪೇಟೆ: ಕುಡಿಯುವ ನೀರಿನ ಕುರಿತು ಸಭೆ
ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಅಧ್ಯಕ್ಷತೆಯಲ್ಲಿ ಕುಡಿಯುವ ನೀರಿನ ಬಗ್ಗೆ ಸಭೆ ನಡೆಸಲಾಯಿತು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.