ಸೋಮವಾರಪೇಟೆ: 29ರಿಂದ ಬೇಸಿಗೆ ಹಾಕಿ ತರಬೇತಿ ಶಿಬಿರ

| Published : Apr 26 2024, 12:57 AM IST

ಸಾರಾಂಶ

ಏ.29ರಿಂದ ಮೇ 18ರ ವರೆಗೆ ಬೇಸಿಗೆ ಹಾಕಿ ತರಬೇತಿ ಶಿಬಿರ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆ ಹಾಗು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಸೋಮವಾರಪೇಟೆ ಸಿಂಥೆಟಿಕ್ ಹಾಕಿ ಟರ್ಫ್ ಮೈದಾನದಲ್ಲಿ ನಡೆಯಲಿದೆ. 8 ವರ್ಷ ಮೇಲ್ಪಟ್ಟ 18 ವರ್ಷದೊಳಗಿನ ಬಾಲಕಿಯರು ಮತ್ತು ಬಾಲಕರು ಭಾಗವಹಿಸಬಹುದು.

ಕನ್ನಡಪ್ರಭ ವಾರ್ತೆ ಸೋಮವಾರಪೇಟೆ

ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆ ಹಾಗು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಏ.29ರಿಂದ ಮೇ 18ರ ವರೆಗೆ ಬೇಸಿಗೆ ಹಾಕಿ ತರಬೇತಿ ಶಿಬಿರ ಪಟ್ಟಣದ ಸಿಂಥೆಟಿಕ್ ಹಾಕಿ ಟರ್ಫ್ ಮೈದಾನದಲ್ಲಿ ನಡೆಯಲಿದೆ ಎಂದು ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್.ಮುತ್ತಣ್ಣ ಹೇಳಿದ್ದಾರೆ.

8 ವರ್ಷ ಮೇಲ್ಪಟ್ಟ 18 ವರ್ಷದೊಳಗಿನ ಬಾಲಕಿಯರು ಮತ್ತು ಬಾಲಕರು ತರಬೇತಿ ಶಿಬಿರದಲ್ಲಿ ಭಾಗವಹಿಸಬಹುದು. ಬೆಳಗ್ಗೆ 6ರಿಂದ 9ರ ವರಗೆ ತರಬೇತಿ ನಡೆಯಲಿದ್ದು, ಎನ್.ಐ.ಎಸ್. ತರಬೇತುದಾರರಾದ ಎಸ್.ಎಂ.ಪ್ರಕಾಶ್, ಅಂಥೋಣಿ ಡಿಸೋಜ, ಬಿ.ಎಸ್.ಸುರೇಶ್, ಬಿ.ಎಸ್.ವೆಂಕಟೇಶ್ ಅವರು ತರಬೇತಿ ನೀಡಲಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

1970ರ ದಶಕದಿಂದಲೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಾಕಿ ಕ್ರೀಡೆಗೆ ಸೋಮವಾರಪೇಟೆ ತಾಲೂಕಿನ ಕ್ರೀಡಾಪ್ರತಿಭೆಗಳ ಕೊಡುಗೆ ಅಪಾರವಾಗಿದೆ. ಇತ್ತೀಚಿನ ವರ್ಷಗಳಲ್ಲಿ ಹಾಕಿ ಪ್ರತಿಭೆಗಳ ಕೊರತೆಯಿದೆ ಎಂಬ ಮಾತುಗಳು ಕೇಳಿಬರುತ್ತಿದೆ. ಗ್ರಾಮೀಣ ಪ್ರತಿಭೆಗಳನ್ನು ಹಾಕಿ ಕ್ರೀಡೆಯತ್ತ ಆಸಕ್ತಿ ಮೂಡಿಸುವ ಪ್ರಯತ್ನ ಇದಾಗಿದೆ ಎಂದರು.

ತಾಲೂಕು ಒಕ್ಕಲಿಗರ ಸಂಘದ ವತಿಯಿಂದ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆ ಪ್ರಾರಂಭಿಸಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಆಂಗ್ಲಮಾಧ್ಯಮದಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಪ್ರಯತ್ನದಲ್ಲಿ ಯಶ ಕಂಡಿದ್ದೇವೆ ಎಂದು ಹೇಳಿದರು.

ಮಕ್ಕಳಿಗೆ ಹಾಕಿ ಕ್ರೀಡೆಯಲ್ಲಿ ತರಬೇತಿಗೊಳಿಸುವ ಪ್ರಯತ್ನದ ಫಲವಾಗಿ ಬೇಸಿಗೆ ಶಿಬಿರ ಏರ್ಪಡಿಸಲಾಗಿದೆ ಎಂದು ಹೇಳಿದರು. ಹೆಚ್ಚಿನ ಮಾಹಿತಿಗಾಗಿ 9663700081, 7483790557 ಸಂಪರ್ಕಿಸಲು ಕೋರಿದೆ.

ಗೋಷ್ಠಿಯಲ್ಲಿ ಶಾಲಾ ಭಾತ್ಮೀದಾರ ಕೆ.ಎಂ.ಜಗದೀಶ್, ಸಂಘದ ಖಜಾಂಚಿ ಜಿ.ಎಂ.ಲಿಂಗರಾಜು, ನಿರ್ದೇಶಕರಾದ ಕೆ.ಟಿ.ಪರಮೇಶ್, ನಂದಕುಮಾರ್ ಇದ್ದರು.