9ನೇ ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಫೆ.9ರಂದು ಐಗೂರಿನ ಕಾಜೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕ.ಸಾ.ಪ ಅಧ್ಯಕ್ಷರಾದ ಎಂ.ಪಿ.ಕೇಶವ್ ಕಾಮತ್ ತಿಳಿಸಿದರು.
ಮಡಿಕೇರಿ : 9ನೇ ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಫೆ.9ರಂದು ಐಗೂರಿನ ಕಾಜೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕ.ಸಾ.ಪ ಅಧ್ಯಕ್ಷರಾದ ಎಂ.ಪಿ.ಕೇಶವ್ ಕಾಮತ್ ತಿಳಿಸಿದರು.
9ರಂದು ಬೆಳಗ್ಗೆ 6.30 ಗಂಟೆಗೆ ಶ್ವಾರೋಹಣ ಕಾರ್ಯಕ್ರಮ ನಡೆಯಲಿದೆ. ಸೋಮವಾರಪೇಟೆ ತಾಲೂಕು ದಂಡಾಧಿಕಾರಿ ಮತ್ತು ತಹಸೀಲ್ದಾರ್ ಕೆ.ಕೆ.ಕೃಷ್ಣ ಮೂರ್ತಿ ರಾಷ್ಟ್ರ ಧ್ವಜಾರೋಹಣ ಮಾಡಲಿದ್ದಾರೆ. ಕ.ಸಾ.ಪ ಜಿಲ್ಲಾಧ್ಯಕ್ಷರಾದ ಎಂ.ಪಿ.ಕೇಶವ್ ಕಾಮತ್ ಅವರು ಕನ್ನಡ ಧ್ವಜಾರೋಹಣ ಮಾಡಲಿದ್ದಾರೆ. ನಂತರ 11 ದ್ವಾರಗಳ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. 8. 50 ಗಂಟೆಗೆ ಸಮ್ಮೇಳನಾಧ್ಯಕ್ಷೆ ಜಲಜಾಶೇಖರ್ ಅವರ ಮೆರವಣಿಗೆ ನಡೆಯಲಿದ್ದು, ಐಗೂರು ಕಬ್ಬಿಣ ಸೇತುವೆಯಿಂದ ಕಾಜೂರು ಅರಣ್ಯ ವಸತಿಗೃಹದ ಮೂಲಕ ಶಾಲಾ ಮೈದಾನಕ್ಕೆ ತಲುಪಲಿದೆ. ಈ ಸಂದರ್ಭ ಮಂಗಳವಾದ್ಯ, ಪೂರ್ಣಕುಂಭ, ಕಲಾತಂಡಗಳು, ಸ್ತಬ್ಧ ಚಿತ್ರಗಳು ಜತೆ ಕನ್ನಡಾಭಿಮಾನಿಗಳು ಪಾಲ್ಗೊಳ್ಳಲಿದ್ದಾರೆ ಎಂದು ವಿವರಿಸಿದರು.9. 45 ಗಂಟೆಗೆ ದಿ.ಸಾಕಮ್ಮನವರ ನೆನಪಿನ ಪ್ರವೇಶದ್ವಾರವನ್ನು ಕಾಫಿ ಬೆಳೆಗಾರರಾದ ಡಿ.ವಿನೋದ್ ಶಿವಪ್ಪ ಉದ್ಘಾಟಿಸಲಿದ್ದಾರೆ. 9. 55 ಗಂಟೆಗೆ ಸಮ್ಮೇಳನದ ಸಭಾಂಗಣದ ಉದ್ಘಾಟನೆಯನ್ನು ಡಿ.ಎಚ್.ವಿಶ್ವನಾಥ ರಾಜೇ ಅರಸ್ ನೆರವೇರಿಸಲಿದ್ದಾರೆ. ವಿವಿಧ ಮಳಿಗೆಗಳ ಉದ್ಘಾಟನೆಯನ್ನು ಐಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಜಿ.ಕೆ.ವಿನೋದ್ ಉದ್ಘಾಟಿಸಲಿದ್ದಾರೆ. ಸಮ್ಮೇಳನದ ವೇದಿಕೆಯನ್ನು ಕ.ಸಾ.ಪ ಐಗೂರು ಹೋಬಳಿ ಅಧ್ಯಕ್ಷ ನಂಗಾರು ಕೀರ್ತಿಪ್ರಸಾದ್ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.ಕ.ಸಾ.ಪ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ಬೆಳಗ್ಗೆ 10. 30 ಗಂಟೆಗೆ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಕಾರ್ಯಕ್ರಮವನ್ನು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು ಉದ್ಘಾಟಿಸಲಿದ್ದಾರೆ. ಶಾಸಕ ಡಾ.ಮಂತರ್‌ಗೌಡ ಅವರು ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್.ಎಸ್.ತಂಗಡಗಿ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಮತ್ತು ಶಾಸಕ ಎ.ಎಸ್.ಪೊನ್ನಣ್ಣ, ಸಂಸದ ಯಧುವೀರ್, ಎಂಎಲ್‌ಸಿ ಸುಜಾಕುಶಾಲಪ್ಪ ಅವರು ಕನ್ನಡ ಕೃತಿಗಳನ್ನು ಬಿಡುಗಡೆ ಮಾಡಲಿದ್ದಾರೆ. ಮುಖ್ಯ ಭಾಷಣಕಾರರಾಗಿ ಡಾ.ಜಯಪ್ಪ ಹೊನ್ನಾಳಿ, ಸಮ್ಮೇಳನಾಧ್ಯಕ್ಷೆ ಜಲಜಾಶೇಖರ್, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ವಿವರಿಸಿದರು.1. 30 ಗಂಟೆಗೆ ಗೀತಗಾಯನ ಕಾರ್ಯಕ್ರಮ, 2 ಗಂಟೆಗೆ ವಿಚಾರಗೋಷ್ಠಿ, 3 ಗಂಟೆಗೆ ಕವಿಗೋಷ್ಠಿ, 4. 30 ಗಂಟೆಗೆ ಬಹಿರಂಗ ಅಧಿವೇಶನ ನಡೆಯಲಿದೆ. 5 ಗಂಟೆಗೆ ನಡೆಯುವ ಸನ್ಮಾನ ಮತ್ತು ಸಮಾರೋಪ ಸಮಾರಂಭ ಅಧ್ಯಕ್ಷತೆಯನ್ನು ಕ.ಸಾ.ಪ ಸೋಮವಾರಪೇಟೆ ತಾಲೂಕು ಅಧ್ಯಕ್ಷ ಎಸ್.ಡಿ.ವಿಜೇತ್ ವಹಿಸಲಿದ್ದು, ಕಾರ್ಯಕ್ರಮದಲ್ಲಿ ಕ.ಸಾ.ಪ ಜಿಲ್ಲಾಧ್ಯಕ್ಷರಾದ ಎಂ.ಪಿ.ಕೇಶವ್ ಕಾಮತ್, ಶಾಸಕ ಡಾ.ಮಂತರ್‌ಗೌಡ, ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್, ಮಾಜಿ ಎಂಎಲ್‌ಸಿ ಎಸ್.ಜಿ.ಮೇದಪ್ಪ ಇತರರು ಪಾಲ್ಗೊಳ್ಳಲಿದ್ದಾರೆ. ವಿರಕ್ತಮಠದ ನಿಶ್ಚಲನಿರಂಜನ ದೇಶಿಕೇಂದ್ರ ಮಹಾಸ್ವಾಮಿಜಿ, ಫಾದರ್ ಸೂಸೈ, ಶಾಫಿ ಸಅದಿ ಅವರು ಸನ್ಮಾನಿತರು ಸನ್ಮಾನಿಸಲಿದ್ದಾರೆ ಎಂದು ಮಾಹಿತಿ ನೀಡಿದರು.ಕ.ಸಾ.ಪ ಸೋಮವಾರಪೇಟೆ ತಾಲೂಕು ಅಧ್ಯಕ್ಷ ಎಸ್.ಡಿ.ವಿಜೇತ್, ಗೌರವ ಕಾರ್ಯದರ್ಶಿ ಎ.ಪಿ.ವೀರರಾಜು, ಕ.ಸಾ.ಪ ಐಗೂರು ಹೋಬಳಿ ಅಧ್ಯಕ್ಷ ನಂಗಾರು ಕೀರ್ತಿಪ್ರಸಾದ್ ಸುದ್ದಿಗೋಷ್ಠಿಯಲ್ಲಿದ್ದರು.