ಅಣ್ಣಾಸಾಹೇಬ ಜೊಲ್ಲೆ ಪರ ಮಗ, ಸೊಸೆ ಮತಯಾಚನೆ

| Published : Apr 27 2024, 01:16 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ಚಿಕ್ಕೋಡಿ: ನಿಪ್ಪಾಣಿ ವಿಧಾನಸಭೆ ಕ್ಷೇತ್ರದ ಭೀವಶಿ ಗ್ರಾಮದಲ್ಲಿ ಮನೆ ಮನೆಗೆ ತೆರಳಿ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಪರವಾಗಿ ಆಶಾಜ್ಯೋತಿ ವಿಶೇಷ ಮಕ್ಕಳ ಶಾಲೆಯ ಅಧ್ಯಕ್ಷೆ ಜ್ಯೋತಿಪ್ರಸಾದ ಜೊಲ್ಲೆ ಹಾಗೂ ಪ್ರಿಯಾ ಜೊಲ್ಲೆ ಮತಯಾಚಿಸಿ ಅಣ್ಣಾಸಾಹೇಬ ಜೊಲ್ಲೆ ಅವರನ್ನು ಬಹುಮತದಿಂದ ಗೆಲ್ಲಿಸುವಂತೆ ಮನವಿ ಮಾಡಿದರು.

ಕನ್ನಡಪ್ರಭ ವಾರ್ತೆ ಚಿಕ್ಕೋಡಿನಿಪ್ಪಾಣಿ ವಿಧಾನಸಭೆ ಕ್ಷೇತ್ರದ ಭೀವಶಿ ಗ್ರಾಮದಲ್ಲಿ ಮನೆ ಮನೆಗೆ ತೆರಳಿ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಪರವಾಗಿ ಆಶಾಜ್ಯೋತಿ ವಿಶೇಷ ಮಕ್ಕಳ ಶಾಲೆಯ ಅಧ್ಯಕ್ಷೆ ಜ್ಯೋತಿಪ್ರಸಾದ ಜೊಲ್ಲೆ ಹಾಗೂ ಪ್ರಿಯಾ ಜೊಲ್ಲೆ ಮತಯಾಚಿಸಿ ಅಣ್ಣಾಸಾಹೇಬ ಜೊಲ್ಲೆ ಅವರನ್ನು ಬಹುಮತದಿಂದ ಗೆಲ್ಲಿಸುವಂತೆ ಮನವಿ ಮಾಡಿದರು.

ಈ ವೇಳೆ ಪ್ರಿಯಾ ಜೊಲ್ಲೆ ಮಾತನಾಡಿ, ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲಿ ಮಾವ ಅಣ್ಣಾಸಾಹೇಬ ಜೊಲ್ಲೆ ಅವರು ಕಳೆದ 5 ವರ್ಷದಿಂದ ನಿರಂತರವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಕ್ಷೇತ್ರದ ವ್ಯಾಪ್ತಿಯಲ್ಲಿ 8 ಆಸ್ಪತ್ರೆಗಳನ್ನು ಜೊಲ್ಲೆ ಉದ್ಯೋಗ ಸಮೂಹದಿಂದ ಪ್ರಾರಂಭಿಸಿ ಉಚಿತವಾಗಿ ಚಿಕಿತ್ಸೆ ಹಾಗೂ ಔಷಧಗಳನ್ನು ನೀಡಿದ್ದಾರೆ. ಪ್ರವಾಹ ಸಂದರ್ಭದಲ್ಲಿ ಜನರ ಸೇವೆಗೆ ಧುಮುಕಿ ಕೆಲಸ ಮಾಡಿದ್ದಾರೆ. ಆದ್ದರಿಂದ ಮತ್ತೊಮ್ಮೆ ಅವರನ್ನೇ ಗೆಲ್ಲಿಸುವಂತೆ ಕೋರಿದರು.

ಕಿಶೋರ ಹರದಾರೆ, ಮಧುಕರ ಪಾಟೀಲ, ರೂಪಾಲಿ ಪಾಟೀಲ, ರಘುನಾಥ ಮಗದುಮ್ಮ, ನಿತಿನ್‌ ಪಾಟೀಲ್, ಸಚಿನ ಪಾಟೀಲ್, ವಿಶ್ವಾಸ ಮಗದುಮ್ಮ್, ವಿಠ್ಠಲ ಚೌಗಲೆ, ಶಶಿಕಾಂತ ಪಾಟೀಲ, ಪ್ರಕಾಶ ಕಾಂಬಳೆ ಸೇರಿದಂತೆ ಈ ವೇಳೆ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.

-------