ಶೀಘ್ರ ಕಾರ್ಯನಿರತ ಪತ್ರಕರ್ತರ ಸಹಕಾರ ಸಂಘ ಸ್ಥಾಪನೆ: ಸುರೇಶ್ ಚಂದ್ರ

| Published : Sep 02 2024, 02:08 AM IST

ಶೀಘ್ರ ಕಾರ್ಯನಿರತ ಪತ್ರಕರ್ತರ ಸಹಕಾರ ಸಂಘ ಸ್ಥಾಪನೆ: ಸುರೇಶ್ ಚಂದ್ರ
Share this Article
  • FB
  • TW
  • Linkdin
  • Email

ಸಾರಾಂಶ

ತರೀಕೆರೆ ಮತ್ತು ಅಜ್ಜಂಪುರ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಹಕಾರ ಸಂಘ ಸ್ಥಾಪನೆ ಮಾಡಲಾಗುವುದು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಸುರೇಶ್ ಚಂದ್ರ ಹೇಳಿದ್ದಾರೆ.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಪೂರ್ವಬಾವಿ ಸಭೆ

ಕನ್ನಡಪ್ರಭ ವಾರ್ತೆ, ತರೀಕೆರೆ

ತರೀಕೆರೆ ಮತ್ತು ಅಜ್ಜಂಪುರ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಹಕಾರ ಸಂಘ ಸ್ಥಾಪನೆ ಮಾಡಲಾಗುವುದು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಸುರೇಶ್ ಚಂದ್ರ ಹೇಳಿದ್ದಾರೆ.ಯಲ್ಲಿ ಮಾತನಾಡಿ, ಸಂಘದ ಸ್ಥಾಪನೆಗೆ ಡಿಸಿಸಿ ಬ್ಯಾಂಕ್ ಹಾಗೂ ಅಪೆಕ್ಸ್ ಬ್ಯಾಂಕ್ ಅರ್ಥಿಕ ನೆರವು ಪಡೆಯಲಾಗುವುದು ಎಂದು ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ನಾಗೇಂದ್ರಪ್ಪ ಮಾತನಾಡಿ ಸಂಘ ಸದಸ್ಯರಿಗೆ ಸಾಲ ಸೌಲಭ್ಯ ಹಾಗೂ ವಿದ್ಯಾರ್ಥಿಗಳಿಗೆ ಹಾಗೂ ಸ್ವಸಹಾಯ ಸಂಘ ಸಾಲ ಸೌಲಭ್ಯ ನೀಡಲಾಗುವುದು ಎಂದು ಹೇಳಿದರು.ಅಜ್ಜಂಪುರ ತಾಲೂಕು ಅಧ್ಯಕ್ಷ ಹೆಬ್ಬೂರು ಶಿವಣ್ಣ ಮಾತನಾಡಿ ಸಂಘದಲ್ಲಿ ಅರ್ಥಿಕ ಸಹಾಯದ ಜೊತೆಗೆ ಸಮಾಜಮುಖಿ ಕೆಲಸಗಳು ನಡೆಯಬೇಕು ಎಂದು ಹೇಳಿದರು.ಪತ್ರಕರ್ತ ನಾಗರಾಜು ಮಾತನಾಡಿ ಸಂಘದಲ್ಲಿ ಸದಸ್ಯರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡಬೇಕು ಎಂದು ಹೇಳಿದರು.ಪತ್ರಕರ್ತ ಎಸ್.ಕೆ.ಸ್ವಾಮಿ ಮಾತನಾಡಿ ಪತ್ರಕರ್ತರ ನಿವೇಶನದ ಅಗತ್ಯತೆ, ನಿವೇಶನ ಗುರುತಿಸಿ ಪತ್ರಕರ್ತರಿಗೆ ನಿವೇಶನ ಒದಗಿಸಬೇಕು ಎಂದು ಹೇಳಿದರು.ಸಂಘದ ಪ್ರಧಾನ ಕಾರ್ಯದರ್ಶಿ ಗುರುಮೂರ್ತಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.31ಕೆಟಿಆರ್.ಕೆ.2ಃ

ತರೀಕೆರೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಏರ್ಪಡಿಸಿದ್ದ ಪೂರ್ವಬಾವಿ ಸಭೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಸುರೇಶ್ ಚಂದ್ರ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ನಾಗೇಂದ್ರಪ್ಪ ಮತ್ತಿತರರು ಭಾಗವಹಿಸಿದ್ದರು.