ಇಂದಿನಿಂದ (ಏ.1) ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಬೆಲೆ ಏರಿಕೆ ಮೂಲಕ ಜನರನ್ನು ಸಂಕಷ್ಟಕ್ಕೆ ದೂಡಿರುವ ಬಿಜೆಪಿಯವರಿಗೆ ಜನರು ತಕ್ಕ ಪಾಠ ಕಲಿಸಬೇಕು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಇಂದಿನಿಂದ (ಏ.1) ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಬೆಲೆ ಏರಿಕೆ ಮೂಲಕ ಜನರನ್ನು ಸಂಕಷ್ಟಕ್ಕೆ ದೂಡಿರುವ ಬಿಜೆಪಿಯವರಿಗೆ ಜನರು ತಕ್ಕ ಪಾಠ ಕಲಿಸಬೇಕು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ನಗರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರ ಕಷ್ಟ ಕಾಲದಲ್ಲಿ ಜನರ ನೆರವಿಗೆ ನಿಲ್ಲಬೇಕಿತ್ತು. ನಮ್ಮ ಸರ್ಕಾರ ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ಆಗುತ್ತಿರುವ ಆರ್ಥಿಕ ಹೊರೆ ಇಳಿಸಲು ಗ್ಯಾರಂಟಿ ಯೋಜನೆ ಜಾರಿಗೆ ತಂದಿತು. ಇದರಿಂದ ಪ್ರತಿ ತಿಂಗಳು ಬಡ ಹಾಗೂ ಮಧ್ಯಮವರ್ಗದ ಕುಟುಂಬದವರಿಗೆ ₹4-5 ಸಾವಿರ ಹಣ ಉಳಿತಾಯವಾಗುವಂತೆ ಮಾಡಿದೆವು. ಆದರೆ, ಕೇಂದ್ರ ಬೆಲೆ ಏರಿಕೆ ಮಾಡಿದೆ. ಇದರಿಂದ ಕೇವಲ ಪೆಟ್ರೋಲ್, ಡೀಸೆಲ್, ಗ್ಯಾಸ್ ಮಾತ್ರವಲ್ಲ ಎಲ್ಲ ವಸ್ತುಗಳ ಬೆಲೆ ಹೆಚ್ಚಾಗಿದ್ದು ಮನೆ ಕಟ್ಟುವುದು ಕಷ್ಟವಾಗಿದೆ. ಗ್ಯಾಸ್ ಬದಲಾಗಿ ಸೀಮೆಎಣ್ಣೆ ಬಳಸುವ ಪರಿಸ್ಥಿತಿ ಬಂದಿದೆ. ಕೇಂದ್ರದ ಭರವಸೆ ನೀಡಿದ್ದ ಅಚ್ಛೇದಿನ ಹೋಗಿ, ಸೌದೆ ಭಾಗ್ಯ ಬಂದಿದೆ. ಕೇಂದ್ರ ಹೇಳಿದ್ದ ₹15 ಲಕ್ಷ ಕೂಡ ಬ್ಯಾಂಕ್ ಖಾತೆಗಳಿಗೆ ಬರಲಿಲ್ಲ. ಇದೆಲ್ಲದರ ಬಗ್ಗೆ ನಾವು ಬಿಜೆಪಿಯನ್ನು ಪ್ರಶ್ನಿಸಬೇಕು ಎಂದರು. ಮತ ಹಾಕುವಂತೆ ಬಿಜೆಪಿ ಬೆದರಿಕೆ:

ಬಾಗಲಕೋಟೆ ಕೆಲವು ವಾರ್ಡ್‌ಗಳಲ್ಲಿ ಹೊರಗಡೆಯಿಂದ ಬಂದಿರುವ ವಿದ್ಯಾರ್ಥಿಗಳಿದ್ದು, ಅವರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಲಾಗಿದೆ. ಅವರ ಊರಿನಲ್ಲೂ ಮತ ಇದೆ, ಇಲ್ಲೂ ಮತ ಇದೆ. ನಮ್ಮ ಅಭ್ಯರ್ಥಿ ಇಂತಹವರ ಮತದಾರರ ಗುರುತಿನ ಚೀಟಿ ಕಸಿದಿಟ್ಟುಕೊಂಡಿದ್ದಾರೆ. ಈ ವಿದ್ಯಾರ್ಥಿಗಳಿಗೆ ಮತಹಾಕಬೇಕು. ಇಲ್ಲದಿದ್ದರೆ ಫೇಲ್ ಮಾಡುತ್ತೇವೆಂದು ಬೆದರಿಕೆ ಹಾಕುತ್ತಿದ್ದಾರೆ. ಈ ವಿಚಾರವಾಗಿ ಡೀಸಿಗೆ ದೂರು ನೀಡುವಂತೆ ಸೂಚಿಸಿದ್ದೇನೆ ಎಂದು ತಿಳಿಸಿದರು.