ಮಂಗಳೂರು ; ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) 2012ರಲ್ಲಿ ನಡೆದಿದ್ದ ಈ ಘಟನೆಯ ಆರಂಭಿಕ ಹಂತದಿಂದ ಹಿಡಿದು ಸಿಐಡಿ ಹಾಗೂ ಸಿಬಿಐ ವರೆಗಿನ ವಿವಿಧ ತನಿಖಾ ಹಂತಗಳಲ್ಲಿ ಭಾಗಿಯಾಗಿದ್ದ 15ಕ್ಕೂ ಹೆಚ್ಚು ತನಿಖಾ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ನೋಟಿಸ್ ಜಾರಿ ಮಾಡಿದೆ. ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ ಸೆಕ್ಷನ್ 160ರ ಅಡಿಯಲ್ಲಿ ವಿಚಾರಣೆಗೆ ಕಡ್ಡಾಯವಾಗಿ ಹಾಜರಾಗುವಂತೆ ಮಾಜಿ ತನಿಖಾಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ. ಅಂದಿನ ಬೆಳ್ತಂಗಡಿ ಠಾಣೆಯ ಇನ್ಸ್‌ಪೆಕ್ಟರ್ ಭಾಸ್ಕರ್ ರೈ, ಪ್ರಾಥಮಿಕ ಹಂತದ ತನಿಖಾಧಿಕಾರಿಯಾಗಿದ್ದ ಪಿಎಸ್‌ಐ ಯೋಗೀಶ್ ಮತ್ತು ಸಿಐಡಿ ತನಿಖಾಧಿಕಾರಿಯಾಗಿದ್ದ ಡಿವೈಎಸ್‌ಪಿ ರುದ್ರಮುನಿ ಸೇರಿದಂತೆ ಹಲವರಿಗೆ ನೋಟಿಸ್ ನೀಡಲಾಗಿದೆ.ಅಂದಿನ ಬೆಳ್ತಂಗಡಿ ಠಾಣೆಯ ಎಎಸ್‌ಐ ಆಗಿದ್ದ ಕಲೈಮಾರ್, ಮಹಿಳಾ ಹೆಡ್ ಕಾನ್‌ಸ್ಟೇಬಲ್ ಸವಿತಾ ಶೆಟ್ಟಿ ಹಾಗೂ ಸಿಬ್ಬಂದಿ ಸುಂದರ್ ಶೆಟ್ಟಿ, ಕೃಷ್ಣ, ರಿಷಬ್, ನವೀನ್ ಮತ್ತು ಭಾಸ್ಕರ್ ಅವರಿಗೂ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ.
ಮೊದಲ ಹಂತದ ತನಿಖೆ ನಡೆಸಿದ್ದ ಪಿಎಸ್‌ಐ ಯೋಗೀಶ್ ವಿರುದ್ಧ ಸೌಜನ್ಯ ಪೋಷಕರು ಸಾಕ್ಷಿ ನಾಶಪಡಿಸಿದ ಹಾಗೂ ತನಿಖಾ ಹಾದಿ ತಪ್ಪಿಸಿದ ಗುರುತರ ಆರೋಪಗಳನ್ನು ಹೊರಿಸಿದ್ದರು. ಈ ಹಿನ್ನೆಲೆಯಲ್ಲಿ ಈ ವಾರದೊಳಗಾಗಿ ವಿಚಾರಣೆಗೆ ಹಾಜರಾಗುವಂತೆ ಅವರಿಗೆ ಸೂಚನೆ ನೀಡಲಾಗಿದೆ.ಸೌಜನ್ಯಾ ಪ್ರಕರಣ: ಹಿಂದಿನ ತನಿಖಾಧಿಕಾರಿಗಳಿಗೆ ಎಸ್‌ಐಟಿ ನೋಟಿಸ್
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) 2012ರಲ್ಲಿ ನಡೆದಿದ್ದ ಈ ಘಟನೆಯ ಆರಂಭಿಕ ಹಂತದಿಂದ ಹಿಡಿದು ಸಿಐಡಿ ಹಾಗೂ ಸಿಬಿಐ ವರೆಗಿನ ವಿವಿಧ ತನಿಖಾ ಹಂತಗಳಲ್ಲಿ ಭಾಗಿಯಾಗಿದ್ದ 15ಕ್ಕೂ ಹೆಚ್ಚು ತನಿಖಾ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ನೋಟಿಸ್ ಜಾರಿ ಮಾಡಿದೆ. ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ ಸೆಕ್ಷನ್ 160ರ ಅಡಿಯಲ್ಲಿ ವಿಚಾರಣೆಗೆ ಕಡ್ಡಾಯವಾಗಿ ಹಾಜರಾಗುವಂತೆ ಮಾಜಿ ತನಿಖಾಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
