ಕಾಂಗ್ರೆಸ್‌ ಮಹಿಳಾ ಘಟಕಕ್ಕೆ ಸೌಮ್ಯಾರೆಡ್ಡಿ ನೇಮಕ : ಸನ್ಮಾನ

| Published : Aug 25 2024, 01:46 AM IST

ಕಾಂಗ್ರೆಸ್‌ ಮಹಿಳಾ ಘಟಕಕ್ಕೆ ಸೌಮ್ಯಾರೆಡ್ಡಿ ನೇಮಕ : ಸನ್ಮಾನ
Share this Article
  • FB
  • TW
  • Linkdin
  • Email

ಸಾರಾಂಶ

Soumya Reddy appointed to Congress Women's Unit: Hon

ಕನ್ನಡಪ್ರಭ ವಾರ್ತೆ ಯಾದಗಿರಿ

ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷರನ್ನಾಗಿ ಮಾಜಿ ಶಾಸಕಿ ಸೌಮ್ಯಾರೆಡ್ಡಿ ಅವರನ್ನು ನೇಮಕ ಮಾಡಿರುವುದರಿಂದ ಪಕ್ಷ ಸಂಘಟನೆಗೆ ಶಕ್ತಿ ತುಂಬಲಿದೆ ಎಂದು ರಾಜ್ಯ ರೆಡ್ಡಿ ಜನಸಂಘ ಯುವ ಬ್ರಿಗೇಡ್ ಅಧ್ಯಕ್ಷ ಹಾಗೂ ಕಾಂಗ್ರೆಸ್ ಯುವ ಮುಖಂಡ ಸಿದ್ದು ಪ್ರಕಾಶರೆಡ್ಡಿ ತಿಳಿಸಿದ್ದಾರೆ. ಬೆಂಗಳೂರಿನ ಜಯನಗರದ ಜನಸಂಪರ್ಕ ಕಚೇರಿಯಲ್ಲಿ ಅವರನ್ನು ಭೇಟಿಯಾಗಿ ಸನ್ಮಾನಿಸಿ ಮಾತನಾಡಿದ ಅವರು, ರಾಜಕೀಯ ಕುಟುಂಬದಿಂದ ಬಂದಿರುವ ಸೌಮ್ಯಾರೆಡ್ಡಿಯವರು ರಾಜ್ಯಕ್ಕೆ ಪರಿಚಿತರು. ಅವರ ತಂದೆಯವರು ಕೂಡ ಸಚಿವರಾಗಿದ್ದು, ಮಹಿಳಾ ಪಕ್ಷ ಸಂಘಟನೆಗೆ ಸಹಕಾರಿಯಾಗಲಿದೆ ಎಂದು ಹೇಳಿದರು.ಈಗಾಗಲೇ ರಾಜ್ಯ ಸರ್ಕಾರ ಮಹಿಳೆಯರಿಗಾಗಿ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ಕ್ರಿಯಾಶೀಲರಾಗಿರುವ ಸೌಮ್ಯಾರೆಡ್ಡಿಯವರು ರಾಜ್ಯ ಪ್ರವಾಸ ಕೈಗೊಂಡು ನೂತನ ಮಹಿಳಾ ತಂಡವನ್ನು ರಚಿಸಿ, ಪಕ್ಷಕ್ಕೆ ಹೆಚ್ಚಿನ ಶಕ್ತಿ ತುಂಬಲಿದ್ದಾರೆ ಎಂದು ತಿಳಿಸಿದ್ದಾರೆ.ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಗಿರೀಶಗೌಡ ಡೇರೆದ್ ನಾಲತವಾಡ ಸೇರಿದಂತೆ ಹಲವರಿದ್ದರು.

-----

ಫೋಟೊ: 24ವೈಡಿಆರ್6: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮಹಿಳಾ ಘಟಕದ ನೂತನ ರಾಜ್ಯಾಧ್ಯಕ್ಷೆ ಸೌಮ್ಯಾರೆಡ್ಡಿ ಅವರನ್ನು ಬೆಂಗಳೂರಿನ ಜಯನಗರದ ಅವರ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸಿದ್ದು ಪ್ರಕಾಶ್ ರೆಡ್ಡಿ ನೇತೃತ್ವದಲ್ಲಿ ಸನ್ಮಾನಿಸಲಾಯಿತು.