ಸಾರಾಂಶ
ದ.ಕ.ಜಿಲ್ಲೆಯಲ್ಲಿ ಗರಿಷ್ಠ ಪ್ರಮಾಣದ ಮತದಾನದೊಂದಿಗೆ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಇಬ್ಬರೂ ಅಭ್ಯರ್ಥಿಗಳ ಗೆಲುವು ನಮ್ಮದಾಗಬೇಕು ಎಂದು ಎಂಎಲ್‌ಸಿ ಪ್ರತಾಪ್ ಸಿಂಹ ನಾಯಕ್ ಹೇಳಿದರು.
ಕನ್ನಡಪ್ರಭವಾರ್ತೆ ಪುತ್ತೂರು
ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿ ಬಿಜೆಪಿ ಶಕ್ತಿ ಕೇಂದ್ರಗಳ ಮತ್ತು ಘಟ ನಾಯಕರ ಸಭೆಯು ಬುಧವಾರ ಪುತ್ತೂರಿನ ಕಲ್ಲೇಗ ಭಾರತ್ ಮಾತಾ ಸಮುದಾಯ ಭವನದಲ್ಲಿ ನಡೆಯಿತು. ಸಭೆಯಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಹಾಗೂ ಶಿಕ್ಷಕರ ಕ್ಷೇತ್ರದ ದ.ಕ. ಜಿಲ್ಲಾ ಚುನಾವಣಾ ಸಂಚಾಲಕ ಪ್ರತಾಪ್ ಸಿಂಹ ನಾಯಕ್ ಅವರು, ಚುನಾವಣೆಗೆ ಸಂಬಂಧಿಸಿ ಜಿಲ್ಲೆಯಲ್ಲಿ ವಿಶೇಷ ಗಮನ ಹರಿಸುವಂತೆ ಪಕ್ಷದ ರಾಜ್ಯಾಧ್ಯಕ್ಷರು ಸೂಚನೆ ನೀಡಿದ್ದಾರೆ. ದ.ಕ.ಜಿಲ್ಲೆಯಲ್ಲಿ ಗರಿಷ್ಠ ಪ್ರಮಾಣದ ಮತದಾನದೊಂದಿಗೆ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಇಬ್ಬರೂ ಅಭ್ಯರ್ಥಿಗಳ ಗೆಲುವು ನಮ್ಮದಾಗಬೇಕು ಎಂದು ಹೇಳಿದರು.ಪುತ್ತೂರು ಮಂಡಲ ಬಿಜೆಪಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಮಾತನಾಡಿದರು.ಪದವೀಧರ ಕ್ಷೇತ್ರದ ಜಿಲ್ಲಾ ಚುನಾವಣಾ ಸಂಚಾಲಕ ಹರೀಶ್ ಪೂಂಜಾ, ಸಹ ಸಂಚಾಲಕ ವಿಕಾಸ್ ಪುತ್ತೂರು, ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ನಗರ ಮಂಡಲ ಅಧ್ಯಕ್ಷ ಪಿ.ಜಿ. ಜಗನ್ನಿವಾಸ ರಾವ್, ಪಕ್ಷದ ಮುಖಂಡರಾದ ಅರುಣ್ ಕುಮಾರ್ ಪುತ್ತಿಲ, ಪುರುಷೋತ್ತಮ ಮುಂಗ್ಲಿಮನೆ, ಯುವರಾಜ್ ಪೆರಿಯತ್ತೋಡಿ ಉಪಸ್ಥಿತರಿದ್ದರು.