ಯುವಕರ ಹೃದಯದಲ್ಲಿ ಉತ್ತಮ ಚಿಂತನೆ ಬಿತ್ತಿ: ನಿರಂಜನ ಪ್ರಭು ಸ್ವಾಮಿಗಳು

| Published : Jun 29 2025, 01:33 AM IST

ಯುವಕರ ಹೃದಯದಲ್ಲಿ ಉತ್ತಮ ಚಿಂತನೆ ಬಿತ್ತಿ: ನಿರಂಜನ ಪ್ರಭು ಸ್ವಾಮಿಗಳು
Share this Article
  • FB
  • TW
  • Linkdin
  • Email

ಸಾರಾಂಶ

ಇಲ್ಲಿನ ಪಟ್ಟಣದ ಪೊಲೀಸ್ ಇಲಾಖೆಯಿಂದ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಅಕ್ರಮ ಸಾಗಣೆ ವಿರೋಧ ಜಾಗೃತಿ ಜಾಥಾ ಶನಿವಾರ ಹಮ್ಮಿಕೊಳ್ಳಲಾಗಿತ್ತು.

ಕುರುಗೋಡು ಪೊಲೀಸ್ ಇಲಾಖೆಯಿಂದ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ, ಅಕ್ರಮ ಸಾಗಣೆ ವಿರೋಧ ಜಾಗೃತಿ ಜಾಥಾ

ಕನ್ನಡಪ್ರಭ ವಾರ್ತೆ ಕುರುಗೋಡು

ಇಲ್ಲಿನ ಪಟ್ಟಣದ ಪೊಲೀಸ್ ಇಲಾಖೆಯಿಂದ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಅಕ್ರಮ ಸಾಗಣೆ ವಿರೋಧ ಜಾಗೃತಿ ಜಾಥಾ ಶನಿವಾರ ಹಮ್ಮಿಕೊಳ್ಳಲಾಗಿತ್ತು.

ಬಾಲಕರ ಸರ್ಕಾರ ಪ್ರೌಢಶಾಲೆ ಕ್ರೀಡಾಂಗಣದಿಂದ ಆರಂಭಗೊಂಡ ಜಾಥಾ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.

ಜಾಥಾದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ಮಾದಕ ವಸ್ತು ಸೇವನೆ ಮತ್ತು ಅಕ್ರಮ ಸಾಗಣೆಯ ವಿರುದ್ಧ ಘೋಷಣೆ ಕೂಗಿ ಜಾಗೃತಿ ಮೂಡಿಸಿದರು.

ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ಕೊಟ್ಟೂರು ಸಂಸ್ಥಾನ ಶಾಖಾ ವಿರಕ್ತ ಮಠದ ನಿರಂಜನ ಪ್ರಭು ಸ್ವಾಮಿ ಮಾತನಾಡಿ, ಭವ್ಯ ಭಾರತದ ಯುವಶಕ್ತಿ ಪಾಶ್ಚಿಮಾತ್ಯ ಚಟಗಳಿಗೆ ಬಲಿಯಾಗಿ ದೇಶದ ಅಭಿವೃದ್ಧಿಗೆ ಮಾರಕವಾಗುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

ಬಿತ್ತಿದ ಬೀಜ ಲೋಪವಿಲ್ಲದೆ ಮೊಳಕೆಯೊಡೆಯುವ ಫಲವತ್ತಾದ ಯುವಕರ ಹೃದಯದಲ್ಲಿ ಉತ್ತಮ ಚಿಂತನೆಗಳನ್ನು ಬಿತ್ತಿ ಸನ್ಮಾರ್ಗದತ್ತ ಕೊಂಡೊಯ್ಯುವ ಅಗತ್ಯವಿದೆ. ಮನೆಯೇ ಮೊದಲ ಪಾಠ ಶಾಲೆಯಾಗಿದ್ದು, ಪೋಷಕರ ದುಶ್ಚಟವು ಮಕ್ಕಳ ಮನಸ್ಸಿನ ಮೇಲೆ ಪ್ರಭಾವ ಬೀರುವುದರಿಂದ ಕೆಲ ಅಪ್ರಾಪ್ತರು ದಾಸರಾಗುತ್ತಿದ್ದಾರೆ. ದೇಶದ ಭವಿಷ್ಯವಾಗಿರುವ ಯುವ ಸಮೂಹ ಉತ್ತಮ ಆಚಾರ, ವಿಚಾರದ ಕಡೆ ಗಮನಹರಿಸಬೇಕು ಎಂದರು.

ಜಾಥಾಕ್ಕೆ ಚಾಲನೆ ನೀಡಿದ ತೋರಣಗಲ್ಲು ಉಪವಿಭಾಗದ ಡಿವೈಎಸ್ಪಿ ಪ್ರಸಾದ್ ಗೋಖಲೆ ಮಾತನಾಡಿ, ದೇಶದ ಅಭಿವೃದ್ಧಿಯಲ್ಲಿ ಯುವಶಕ್ತಿಯ ಪಾತ್ರ ಮುಖ್ಯವಾಗಿದೆ. ಚಿಕ್ಕವಯಸ್ಸಿನಲ್ಲಿ ದುಶ್ಚಟಗಳಿಗೆ ಬಲಿಯಾಗಿ ಜೀವನ ಹಾಳುಮಾಡಿಕೊಳ್ಳದೆ ವಿದ್ಯಾವಂತರಾಗಿ ಸುಂದರ ಜೀವನಕಟ್ಟಿಕೊಳ್ಳಿ ಎಂದು ಸಲಹೆ ನೀಡಿದರು.

ತಹಶೀಲ್ದಾರ್ ನರಸಪ್ಪ ತಹಶೀಲ್ದಾರ್ ಮಾತನಾಡಿ, ಯುವ ಸಮೂಹದಿಂದ ದೇಶದ ಏಳಿಗೆ ಸಾಧ್ಯ. ಪ್ರತಿಯೊಬ್ಬರೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು. ಪೋಷಕರ ದುಶ್ಚಟವು ಮಕ್ಕಳ ಮನಸ್ಸಿನ ಮೇಲೆ ಪ್ರಭಾವ ಬೀರುವುದರಿಂದ ಕೆಲ ಅಪ್ರಾಪ್ತರು ದಾಸರಾಗುತ್ತಿದ್ದಾರೆ. ದೇಶದ ಭವಿಷ್ಯವಾಗಿರುವ ಯುವ ಸಮೂಹ ಉತ್ತಮ ಆಚಾರ, ವಿಚಾರದ ಕಡೆ ಗಮನಹರಿಸಬೇಕು ಎಂದರು.

ಸಿಪಿಐ ವಿಶ್ವನಾಥ ಕೆ.ಹಿರೇಗೌಡರ್ ಪ್ರಾಸ್ತಾವಿಕ ಮಾತನಾಡಿದರು.

ಪಿಎಸ್ಐ ಸುಪ್ರಿತ್ ವಿರೂಪಾಕ್ಷಪ್ಪ, ಪುರಸಭೆ ಅಧ್ಯಕ್ಷ ಟಿ.ಶೇಖಣ್ಣ, ಪುರಸಭೆ ಉಪಾಧ್ಯಕ್ಷ ಚನ್ನಪಟ್ಟಣ ಮಲ್ಲಿಕಾರ್ಜುನ, ಡಾ. ಗುರುರಾಜ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲೂಕು ಯೋಜನಾಧಿಕಾರಿ ರಾಘವೇಂದ್ರ, ಶಿಕ್ಷಕರು, ವಿದ್ಯಾರ್ಥಿಗಳು ಪೊಲೀಸ್, ಗೃಹರಕ್ಷಕ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರು ಇದ್ದರು.