ಸಾರಾಂಶ
ಜಿಲ್ಲೆಯಲ್ಲಿ 74 ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಗಳಿದ್ದು, ಸೂಕ್ತ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ.
ಅಂಕೋಲಾ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ನಗರದ ಜೈಹಿಂದ್ ಹೈಸ್ಕೂಲಿಗೆ ಭೇಟಿ ನೀಡಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಆಗಮಿಸಿದ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ ಎಂದು ಆತ್ಮವಿಶ್ವಾಸ ತುಂಬಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಸ್ವಾತಂತ್ರ‍್ಯ ಹೋರಾಟದ ಹಿನ್ನೆಲೆಯ ಅಂಕೋಲಾದಲ್ಲಿ ಆ ಕಾಲದ ಜೈಹಿಂದ್ ಹೈಸ್ಕೂಲಿಗೆ ಮೊದಲ ಭೇಟಿ ನೀಡಲು ಹರ್ಷವಾಗುತ್ತಿದೆ. ಜಿಲ್ಲೆಯಲ್ಲಿ 74 ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಗಳಿದ್ದು, ಸೂಕ್ತ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ಯಾವುದೇ ಅಕ್ರಮ ನಡೆಸಲು ಅವಕಾಶ ಇಲ್ಲದಂತೆ ಕಲಂ ಜಾರಿ ಮಾಡಲಾಗಿದೆ.ಕೇಂದ್ರದ ಸುತ್ತಮುತ್ತ ಜೆರಾಕ್ಸ್ ಸೆಂಟರ್, ಸೈಬರ್ ಸೆಂಟರ್‌ಗಳನ್ನು ಮುಚ್ಚಲಾಗಿದೆ. ವಿದ್ಯಾರ್ಥಿಗಳು ಧೈರ್ಯದಿಂದ ಪರೀಕ್ಷೆ ಬರೆದು ಅಂಕೋಲೆಗೆ ರ‍್ಯಾಂಕ್ ತರಲಿ ಎಂದು ಹಾರೈಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ಪಿಎಸೈ ಉದ್ದಪ್ಪ ಧರೆಪ್ಪನವರ್ ಮತ್ತು ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.ತಾಲೂಕಿನಲ್ಲಿ ನಾಲ್ಕು ಪರೀಕ್ಷಾ ಕೇಂದ್ರಗಳನ್ನು ತೆರೆದಿದ್ದು ವಿಕೆ ಹೈಸ್ಕೂಲ್, ಜೈಹಿಂದ್ ಹೈಸ್ಕೂಲ್, ಪಿಎಂಎಚ್‌ಎಸ್ ಹೈ ಸ್ಕೂಲ್ ಅಂಕೋಲ ನಗರದ ಪ್ರೌಢಶಾಲೆ ಗಳಲ್ಲಿ ಕಟ್ಟುನಿಟ್ಟಿನ ಎಚ್ಚರ ವಹಿಸಲಾಗಿದೆ. ವೆಬ್ ಕ್ಯಾಮೆರಾಗಳನ್ನು ಪರೀಕ್ಷಾ ಕೇಂದ್ರದೊಳಕ್ಕೆ ಅಳವಡಿಸಲಾಗಿದೆ.