ಸಾರಾಂಶ
ಕಡಲ್ಕೊರೆತ ನಿಯಂತ್ರಿಸಲು ಪ್ರತಿಬಂಧಕ ಕ್ರಮಗಳನ್ನು ಕೈಗೊಳ್ಳಲು ಅವರು ಅಧಿಕಾರಿಗಳಿಗೆ ಸೂಚಿಸಿದರು.
ಕನ್ನಡಪ್ರಭ ವಾರ್ತೆ ಉಳ್ಳಾಲ
ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ಸೋಮವಾರ ಉಳ್ಳಾಲ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.ಉಳ್ಳಾಲದ ಕೋಟೆಪುರ, ಮೊಗವೀರಪಟ್ಣ ಮತ್ತಿತರ ಪ್ರದೇಶಗಳಿಗೆ ಭೇಟಿ ನೀಡಿದ ಅವರು, ಕಡಲ್ಕೊರೆತ ಹಾನಿಯನ್ನು ವೀಕ್ಷಿಸಿ ನಿಯಂತ್ರಣ ಕ್ರಮಗಳನ್ನು ಪರಿಶೀಲಿಸಿದರು.ಈ ವೇಳೆ ಸ್ಥಳೀಯರ ಅಹವಾಲುಗಳನ್ನು ಆಲಿಸಿದ ಅವರು, ಕಡಲ್ಕೊರೆತದಿಂದ ಆಗುವ ಹಾನಿಯನ್ನು ಕಡಿಮೆಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಕಡಲ್ಕೊರೆತ ನಿಯಂತ್ರಿಸಲು ಪ್ರತಿಬಂಧಕ ಕ್ರಮಗಳನ್ನು ಕೈಗೊಳ್ಳಲು ಅವರು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭ ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ್, ಉಳ್ಳಾಲ ತಹಸೀಲ್ದಾರ್ ಪುಟ್ಟರಾಜು ಮತ್ತಿತರರು ಇದ್ದರು.