ಸಾರಾಂಶ
ಬಸವನಬಾಗೇವಾಡಿ: ಪಟ್ಟಣದ ಬಸವ ಭವನದಲ್ಲಿ ತಾಜ್ ಸೋಸಿಯಲ್ ಗ್ರುಫ್ ಹಮ್ಮಿಕೊಂಡಿದ್ದ ಸೌಹಾರ್ದ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸಿದ್ದ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು ಪಟ್ಟಣದ ಆರಾಧ್ಯದೈವ ಮೂಲನಂದೀಶ್ವರ(ಬಸವೇಶ್ವರ) ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು.
ಈ ಸಂದರ್ಭದಲ್ಲಿ ನಂದಿ ಸಕ್ಕರೆ ಕಾರ್ಖಾನೆ ನಿರ್ದೇಶಕ ಸತ್ಯಜೀತ್ ಪಾಟೀಲ, ಕೆಪಿಸಿಸಿ ವಕ್ತಾರ ನಿಕಿತರಾಜ್ ಮೌರ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ, ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಐ.ಸಿ.ಪಟ್ಟಣಶೆಟ್ಟಿ, ಎಪಿಎಂಸಿ ಮಾಜಿ ಅಧ್ಯಕ್ಷ ಶೇಖರ ಗೊಳಸಂಗಿ, ಬಸವೇಶ್ವರ ಸೇವಾ ಸಮಿತಿ ಉಪಾಧ್ಯಕ್ಷ ಬಸವರಾಜ ಹಾರಿವಾಳ, ರಾಷ್ಟ್ರೀಯ ಬಸವಸೈನ್ಯ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ, ಕಾಂಗ್ರೆಸ್ ಎಸ್‌ಸಿ ಘಟಕದ ಅಧ್ಯಕ್ಷ ಪರಶುರಾಮ ಜಮಖಂಡಿ, ಪುರಸಭೆ ಸದಸ್ಯರಾದ ಜಗದೇವಿ ಗುಂಡಳ್ಳಿ, ಪ್ರವೀಣ ಪೂಜಾರಿ, ಮುಖಂಡರಾದ ಕಮಲಸಾಬ ಕೊರಬು, ಜಟ್ಟಿಂಗರಾಯ ಮಾಲಗಾರ, ಎಂ.ಜಿ.ಆದಿಗೊಂಡ, ಸಂಜೀವ ಕಲ್ಯಾಣಿ, ಶರಣಪ್ಪ ಬೆಲ್ಲದ, ರಮಜಾನ ಹೆಬ್ಬಾಳ, ಭದ್ರು ಮಣ್ಣೂರ ಇತರರು ಇದ್ದರು.