ಸಾರಾಂಶ
ಮಂಗಳೂರು: ನಗರದ ಕರಾವಳಿ ಉತ್ಸವ ಕ್ರೀಡಾಂಗಣದಲ್ಲಿ ನಡೆದ 76ನೇ ಅಖಿಲ ಭಾರತ ಸಹಕಾರಿ ಸಪ್ತಾಹದ ಸಂದರ್ಭ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರಿಂದ ‘ವಜ್ರಮಹೋತ್ಸವ ಪೂರೈಸಿದ ಸಹಕಾರಿ ಸಂಘ ವಿಶೇಷ ಪ್ರಶಸ್ತಿಯನ್ನು ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ- ಆಪರೇಟಿವ್ ಸೊಸೈಟಿ ಅಧ್ಯಕ್ಷ ಪಿ. ಉಪೇಂದ್ರ ಆಚಾರ್ಯ ಪಡೆದುಕೊಂಡರು.ರಾಜ್ಯ ಸಹಕಾರ ಮಹಾಮಂಡಳ ಅಧ್ಯಕ್ಷ ಜಿ.ಟಿ. ದೇವೇಗೌಡ, ವಿಧಾನ ಪರಿಷತ್ ಶಾಸಕರಾದ ಮಂಜುನಾಥ ಭಂಡಾರಿ, ಐವನ್ ಡಿಸೋಜ, ಕಿಶೋರ್ ಕುಮಾರ್ ಬೊಟ್ಯಾಡಿ, ನಬಾರ್ಡ್ ಬೆಂಗಳೂರು ಮುಖ್ಯ ಪ್ರಬಂಧಕ ಡಾ. ಸುರೇಂದ್ರ ಬಾಬು, ರಾಜ್ಯ ಸಹಕಾರ ಮಹಾಮಂಡಳ ನಿ. ವ್ಯವಸ್ಥಾಪಕ ನಿರ್ದೇಶಕ ಕೆ.ಎಸ್. ನವೀನ್, ಸಹಕಾರ ಸಂಘಗಳ ನಿಬಂಧಕ ಟಿ.ಎಚ್.ಎಂ. ಕುಮಾರ್, ಸಹಕಾರ ಸಂಘಗಳ ಜಂಟಿ ನಿಬಂಧಕ ಪ್ರಸಾದ್ ರೆಡ್ಡಿ ಪಿ., ಸಹಕಾರ ಸಂಘಗಳ ಉಪನಿಬಂಧಕ (ದ.ಕ. ಜಿಲ್ಲೆ) ಎಚ್.ಎನ್. ರಮೇಶ್, ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕಿ ಲಾವಣ್ಯ ಕೆ.ಆರ್., ಕೆ.ಎಂ.ಎಫ್. ಅಧ್ಯಕ್ಷ ರವಿರಾಜ್ ಹೆಗ್ಡೆ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸದಾಶಿವ ಉಳ್ಳಾಲ್, ಟಿಎಪಿಸಿಎಂಎಸ್ ಅಧ್ಯಕ್ಷ ಮೋನಪ್ಪ ಶೆಟ್ಟಿ ಎಕ್ಕಾರು, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಹಾಗೂ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ದೇವಿಪ್ರಸಾದ್ ಶೆಟ್ಟಿ ಬೆಳಪು, ಶಾಸಕ ಯಶ್‌ಪಾಲ್ ಎ. ಸುವರ್ಣ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಇದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))