ಸಾರಾಂಶ
ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ಕೃಷ್ಣ ಮಠ, ಉಡುಪಿ ಇದರ ಆಶ್ರಯದಲ್ಲಿ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಕೇಂದ್ರ ಸಮಿತಿ, ಧರ್ಮಸ್ಥಳ ಇದರ ಸಹಯೋಗದೊಂದಿಗೆ ‘ಗುರು ಪೂರ್ಣಿಮಾ’ ಪ್ರಯುಕ್ತ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರು ಹಾಗೂ ಕಿರಿಯ ಯತಿವರ್ಯರಾದ ಶ್ರೀ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದಂಗಳವರಿಗೆ ‘ಗುರು ವಂದನೆ’ ಸಲ್ಲಿಸಲಾಯಿತು.
ಕನ್ನಡಪ್ರಭ ವಾರ್ತೆ ಉಡುಪಿ
ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ಕೃಷ್ಣ ಮಠ, ಉಡುಪಿ ಇದರ ಆಶ್ರಯದಲ್ಲಿ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಕೇಂದ್ರ ಸಮಿತಿ, ಧರ್ಮಸ್ಥಳ ಇದರ ಸಹಯೋಗದೊಂದಿಗೆ ‘ಗುರು ಪೂರ್ಣಿಮಾ’ ಪ್ರಯುಕ್ತ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರು ಹಾಗೂ ಕಿರಿಯ ಯತಿವರ್ಯರಾದ ಶ್ರೀ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದಂಗಳವರಿಗೆ ‘ಗುರು ವಂದನೆ’ ಸಲ್ಲಿಸಲಾಯಿತು.ಈ ಕಾರ್ಯಕ್ರಮದ ಅಂಗವಾಗಿ ಜು.10ರಂದು ಉಡುಪಿ ‘ರಾಜಾಂಗಣ’ದಲ್ಲಿ ನಡೆದ ವಿಶೇಷ ಭಜನಾ ಸೇವೆಗೆ ಶ್ರೀ ಮಠದ ಸಾಂಸ್ಕೃತಿಕ ಕಾರ್ಯದರ್ಶಿ ರಮೇಶ್ ಭಟ್ ಅವರು ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು.ಈ ಸಂದರ್ಭ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಕೇಂದ್ರ ಸಮಿತಿಯ ಭಜನಾ ತರಬೇತುದಾರೆ ಹಾಗೂ ಕಾರ್ಯಕ್ರಮದ ಸಂಯೋಜಕಿ ವಿದುಷಿ ಉಷಾ ಹೆಬ್ಬಾರ್, ಭಜನಾ ಪರಿಷತ್ ರಾಜ್ಯ ಉಪಾಧ್ಯಕ್ಷ ರಾಜೇಂದ್ರ ಕುಮಾರ್ ಬಸ್ರೂರು, ಉಡುಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ವಿದುಷಿ ಪರಿಮಳ ವ್ಯಾಸರಾವ್ ಬಳ್ಳಾರಿ, ಮಠದ ಪ್ರಮುಖರಾದ ರಘುಪತಿ ರಾವ್ ಕಿದಿಯೂರು, ಮಾಜಿ ನಗರಸಭಾ ಸದಸ್ಯ ನರಸಿಂಹ ನಾಯಕ್, ಗಾಯತ್ರಿ ಸುರೇಶ್ ಮಂಗಳೂರು ಹಾಗೂ ವಿವಿಧ ಭಜನಾ ಮಂಡಳಿಗಳ ಸದಸ್ಯರು ಉಪಸ್ಥಿತರಿದ್ದರು.