ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ ವಿಶೇಷ ಬಸ್ ವ್ಯವಸ್ಥೆ

| Published : Nov 20 2024, 12:31 AM IST

ಸಾರಾಂಶ

ಮಂಗಳವಾರ 18 ವಿಶೇಷ ಹೆಚ್ಚುವರಿ ಬಸ್ ಓಡಿಸಿದ್ದು ಶುಕ್ರವಾರ ಹಾಗೂ ಮಂಗಳವಾರ ಸಹ ಹುಬ್ಬಳ್ಳಿಯಿಂದ ಯಲ್ಲಮ್ಮನ ಗುಡ್ಡಕ್ಕೆ ವಿಶೇಷ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲಾಗುವುದು.

ಹುಬ್ಬಳ್ಳಿ:

ಸವದತ್ತಿಯ ಶ್ರೀರೇಣುಕಾ ದೇವಿಯ ದರ್ಶನಕ್ಕೆ ತೆರಳುವ ಭಕ್ತರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯಿಂದ ಕಲ್ಪಿಸಿದ್ದ ವಿಶೇಷ ಬಸ್‌ಗಳಿಗೆ ಉತ್ತಮ ಸ್ಪಂದನೆ ದೊರತ ಹಿನ್ನೆಲೆ ಛಟ್ಟಿ ಅಮಾವಾಸ್ಯೆಯ ವರೆಗೆ ಪ್ರತಿ ಮಂಗಳವಾರ ಹಾಗೂ ಶುಕ್ರವಾರ ಹುಬ್ಬಳ್ಳಿಯಿಂದ ಯಲ್ಲಮ್ಮನಗುಡ್ಡಕ್ಕೆ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಮಂಗಳವಾರ 18 ವಿಶೇಷ ಹೆಚ್ಚುವರಿ ಬಸ್ ಓಡಿಸಿದ್ದು ಶುಕ್ರವಾರ ಹಾಗೂ ಮಂಗಳವಾರ ಸಹ ಹುಬ್ಬಳ್ಳಿಯಿಂದ ಯಲ್ಲಮ್ಮನ ಗುಡ್ಡಕ್ಕೆ ವಿಶೇಷ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲಾಗುವುದು. ನ. 22, 26 ಹಾಗೂ 29ರಂದು ಹುಬ್ಬಳ್ಳಿ ಹೊಸೂರು ಬಸ್ ನಿಲ್ದಾಣದಿಂದ ವಿಶೇಷ ಬಸ್‌ಗಳು ಸಂಚರಿಸಲಿವೆ ಎಂದು ತಿಳಿಸಿದ್ದಾರೆ.