ಅ. 13, 14 ಮತ್ತು 15 ರಂದು ಗೋಣಿಕೊಪ್ಪಲು ಉಪ ವಿಭಾಗ ಕಚೇರಿಯ ಆವರಣದಲ್ಲಿ ‘ಪ್ರಧಾನಮಂತ್ರಿ ಸೂರ್ಯಘರ್ ಮುಫ್ತ್ ಬಿಜ್ಲಿ’ ಯೋಜನೆಯಡಿ ಮನೆಗಳ ಮೇಲ್ಚಾವಣಿಯಲ್ಲಿ ಸೌರ ವಿದ್ಯುತ್ ಘಟಕಗಳನ್ನು ಅಳವಡಿಸಿಕೊಂಡು ವಿದ್ಯುತ್ ಉತ್ಪಾದನೆ ಮಾಡುವ ಕುರಿತು ವಿಶೇಷ ಅಭಿಯಾನವನ್ನು ಆಯೋಜಿಸಲಾಗಿದೆ.
ಮಡಿಕೇರಿ: ಅ. 13, 14 ಮತ್ತು 15 ರಂದು ಗೋಣಿಕೊಪ್ಪಲು ಉಪ ವಿಭಾಗ ಕಚೇರಿಯ ಆವರಣದಲ್ಲಿ ‘ಪ್ರಧಾನಮಂತ್ರಿ ಸೂರ್ಯಘರ್ ಮುಫ್ತ್ ಬಿಜ್ಲಿ’ ಯೋಜನೆಯಡಿ ಮನೆಗಳ ಮೇಲ್ಚಾವಣಿಯಲ್ಲಿ ಸೌರ ವಿದ್ಯುತ್ ಘಟಕಗಳನ್ನು ಅಳವಡಿಸಿಕೊಂಡು ವಿದ್ಯುತ್ ಉತ್ಪಾದನೆ ಮಾಡುವ ಕುರಿತು ವಿಶೇಷ ಅಭಿಯಾನವನ್ನು ಆಯೋಜಿಸಲಾಗಿದೆ.
ಈ ಅಭಿಯಾನದಲ್ಲಿ ಅಧೀಕೃತ ಸೌರ ವಿದ್ಯುತ್ (ಎಸ್‌ಆರ್‌ಟಿಪಿವಿ) ವೆಂಡರ್‌ಗಳು ಹಾಗೂ ಬ್ಯಾಂಕ್ ಪ್ರತಿನಿಧಿಗಳು ಭಾಗವಹಿಸಲಿದ್ದು, ಯೋಜನೆಯ ಸೌಲಭ್ಯಗಳು, ಸಬ್ಸಿಡಿ, ಬ್ಯಾಂಕ್ ಸಾಲದ ಕುರಿತು ಮಾಹಿತಿ ಹಾಗೂ ಮಾರ್ಗದರ್ಶನ ನೀಡಿರುವುದರಿಂದ ಎಲ್ಲಾ ಗ್ರಾಹಕರು ಮತ್ತು ಸಾರ್ವಜನಿಕರು ಈ ಅಭಿಯಾನದಲ್ಲಿ ಭಾಗವಹಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ.