ಮುಳ್ಳೂರಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಹಮ್ಮಿಕೊಂಡ ವಿಶೇಷ ಕಾರ್ಯಕ್ರಮವು ಸರ್ವಧರ್ಮ ಸಮನ್ವಯದ ಸಂದೇಶವನ್ನು ವಿದ್ಯಾರ್ಥಿಗಳಿಗೆ ನೀಡಲಾಯಿತು.

ಸೋಮವಾರಪೇಟೆ: ತಾಲೂಕಿನ ಮುಳ್ಳೂರಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಹಮ್ಮಿಕೊಂಡ ವಿಶೇಷ ಕಾರ್ಯಕ್ರಮವು ಸರ್ವಧರ್ಮ ಸಮನ್ವಯದ ಸಂದೇಶವನ್ನು ವಿದ್ಯಾರ್ಥಿಗಳಿಗೆ ನೀಡಲಾಯಿತು.

ವಿದ್ಯಾರ್ಥಿಗಳ ಆಸಕ್ತಿ ಮತ್ತು ಒತ್ತಾಯದ ಮೇರೆಗೆ ಆಯೋಜಿಸಲಾದ ಈ ಕಾರ್ಯಕ್ರಮವು ಶಿಕ್ಷಣದ ಜತೆಗೆ ಮಾನವೀಯ ಮೌಲ್ಯಗಳ ಪಾಠವನ್ನೂ ನೀಡಲಾಯಿತು. ಶಾಲಾ ಆವರಣದಲ್ಲಿ ಸಾಂತಾ ಕ್ಲಾಸ್ ಸೆಲ್ಫಿ ಮಾದರಿಯು ಪ್ರತಿ ವಿದ್ಯಾರ್ಥಿಗಳಿಗೆ ಒಂದೊಂದು ಕಾಣಿಕೆ ನೀಡುವಂತೆ ವ್ಯವಸ್ಥೆ ಮಾಡುವ ಮೂಲಕ ಎಲ್ಲಾ ವಿದ್ಯಾರ್ಥಿಗಳಿಗೂ ಉಡುಗೊರೆ ನೀಡಲಾಯಿತು. ಗೋಪಾಲಪುರ ಚರ್ಚಿಬ ಧರ್ಮಗುರು ಕೇಕ್ ಕತ್ತರಿಸಿ ವಿತರಿಸುವ ಮೂಲಕ ಮಕ್ಕಳ ಸಂಭ್ರಮದಲ್ಲಿ ಪಾಲ್ಗೊಂಡು, ವಿದ್ಯಾರ್ಥಿಗಳಿಗೆ ಹಿತವಚನ ನೀಡಿದರು.ಶಾಲಾ ಮುಖ್ಯ ಶಿಕ್ಷಕ ಸತೀಶ್ ಮಾತನಾಡಿ, ಕ್ರಿಸ್ಮಸ್ ಹಬ್ಬದ ಆಚರಣೆ ಹಿಂದಿರುವ ಪ್ರೀತಿ, ಶಾಂತಿ, ಹಂಚಿಕೆ ಮತ್ತು ಸಹಬಾಳ್ವೆಯಂತಹ ಮಾನವೀಯ ಮೌಲ್ಯಗಳನ್ನು ಮಕ್ಕಳಿಗೆ ಪರಿಚಯಿಸುವ ಜತೆಗೆ ಪಠ್ಯದಲ್ಲಿ ಬರುವ ಕ್ರಿಸ್ತಪೂರ್ವ ಕ್ರಿಸ್ತ ಶಕಗಳ ಪರಿಕಲ್ಪನೆ ಹೊಸ ಮತಗಳ ಉದಯದೊಂದಿಗೆ ಸಮಾಜದಲ್ಲಿ ಆದ ಬದಲಾವಣೆಗಳು ಮತ್ತು ಎಲ್ಲಾ ಧರ್ಮಗಳಲ್ಲಿರುವ ಮಾನವೀಯ ಮೌಲ್ಯಗಳು ವಿದ್ಯಾರ್ಥಿಗಳನ್ನು ತಲುಪಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು. ಶಿಕ್ಷಕರಾದ ಜಾನ್ ಪಾವ್ಲ್ ಡಿಸೋಜ, ಶಿಕ್ಷಕಿ ಶೀಲಾ ಗ್ರಾಮಸ್ಥರು ಉಪಸ್ಥಿತರಿದ್ದರು.