ಕಡೇ ಶ್ರಾವಣ ಶ್ರೀಹೊಳೆ ಆಂಜನೇಯಸ್ವಾಮಿಗೆ ವಿಶೇಷ ಹೂವಿನ ಅಲಂಕಾರ, ಪೂಜೆ

| Published : Sep 01 2024, 01:48 AM IST

ಕಡೇ ಶ್ರಾವಣ ಶ್ರೀಹೊಳೆ ಆಂಜನೇಯಸ್ವಾಮಿಗೆ ವಿಶೇಷ ಹೂವಿನ ಅಲಂಕಾರ, ಪೂಜೆ
Share this Article
  • FB
  • TW
  • Linkdin
  • Email

ಸಾರಾಂಶ

ಶ್ರಾವಣ ಮಾಸದ ಕಡೇ ಶನಿವಾರದ ಅಂಗವಾಗಿ ಪಟ್ಟಣದ ಪುರಾಣ ಪ್ರಸಿದ್ಧ ಶ್ರೀಹೊಳೆ ಆಂಜನೇಯಸ್ವಾಮಿ ಹಾಗೂ ಶ್ರೀಉಗ್ರ ನರಸಿಂಹಸ್ವಾಮಿ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು. ಸ್ಥಳೀಯರು ಸೇರಿದಂತೆ ಬೆಂಗಳೂರು, ಮೈಸೂರು, ಮಂಡ್ಯ ಒಳಗೊಂಡಂತೆ ವಿವಿಧ ಭಾಗಗಳಿಂದ ಆಗಮಿಸಿದ್ದ ಅಸಂಖ್ಯಾತ ಭಕ್ತರು ಗೋವಿಂದ ನಾಮಸ್ಮರಣೆಯೊಂದಿಗೆ ದೇವರ ದರ್ಶನ ಪಡೆದು ಧನ್ಯತಾ ಭಾವ ಮೆರೆದರು.

ಕನ್ನಡಪ್ರಭ ವಾರ್ತೆ ಮದ್ದೂರು

ಶ್ರಾವಣ ಮಾಸದ ಕಡೇ ಶನಿವಾರದ ಅಂಗವಾಗಿ ಪಟ್ಟಣದ ಪುರಾಣ ಪ್ರಸಿದ್ಧ ಶ್ರೀಹೊಳೆ ಆಂಜನೇಯಸ್ವಾಮಿ ಹಾಗೂ ಶ್ರೀಉಗ್ರ ನರಸಿಂಹಸ್ವಾಮಿ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು.

ಸ್ಥಳೀಯರು ಸೇರಿದಂತೆ ಬೆಂಗಳೂರು, ಮೈಸೂರು, ಮಂಡ್ಯ ಒಳಗೊಂಡಂತೆ ವಿವಿಧ ಭಾಗಗಳಿಂದ ಆಗಮಿಸಿದ್ದ ಅಸಂಖ್ಯಾತ ಭಕ್ತರು ಗೋವಿಂದ ನಾಮಸ್ಮರಣೆಯೊಂದಿಗೆ ದೇವರ ದರ್ಶನ ಪಡೆದು ಧನ್ಯತಾ ಭಾವ ಮೆರೆದರು.

ಪಟ್ಟಣದ ಹೊರವಲಯದ ಕದಂಬ ನದಿ ದಂಡೆಯ ಶ್ರೀಹೊಳೆಆಂಜನೇಯ ಸ್ವಾಮಿ ದೇಗುಲದಲ್ಲಿ ಮುಂಜಾನೆ ಮೂಲ ವಿಗ್ರಹಕ್ಕೆ ಮಧು ಮತ್ತು ಪಂಚಾಮೃತ ಅಭಿಷೇಕದ ನಂತರ ಪುಷ್ಪಾಲಂಕಾರದೊಂದಿಗೆ ವಿಶೇಷವಾಗಿಬೆಣ್ಣೆ ಅಲಂಕಾರ ಬಳಿಕ ಮಹಾಮಂಗಳಾರತಿ ನೆರವೇರಿಸಲಾಯಿತು.

ಮಧ್ಯಾಹ್ನ ಶ್ರೀನಿವಾಸ, ಶ್ರೀದೇವಿ, ಭೂದೇವಿ ಉತ್ಸವ ಮೂರ್ತಿಗಳನ್ನು ರಥದಲ್ಲಿ ಪ್ರತಿಷ್ಠಾಪನೆ ಮಾಡಿ ದೇಗುಲದ ಪ್ರಕಾರದಲ್ಲಿ ಮೆರವಣಿಗೆ ನಡೆಸಲಾಯಿತು. ಮನ್ಮುಲ್ ನಿರ್ದೇಶಕಿ ರೂಪ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಸಿ.ಜೋಗಿಗೌಡ ಹಾಗೂ ನಿರ್ದೇಶಕರುಗಳು ಉತ್ಸವದಲ್ಲಿ ಪಾಲ್ಗೊಂಡು ವಿಶೇಷ ಪೂಜೆ ನೆರವೇರಿಸಿದರು.

ಪಟ್ಟಣದ ಕೋಟೆ ಬೀದಿಯಪುರಾಣ ಪ್ರಸಿದ್ಧ ಶ್ರೀಉಗ್ರ ನರಸಿಂಹಸ್ವಾಮಿ ದೇವಾಲಯದಲ್ಲಿ ಶ್ರಾವಣ ಮಾಸದ ಕಡೇ ಶನಿವಾರದ ಅಂಗವಾಗಿ ವಿಶೇಷ ಧಾರ್ಮಿಕ ಕಾರ್ಯಗಳು ಜರುಗಿದವು. ಮುಂಜಾನೆ ಮೂಲ ವಿಗ್ರಹಕ್ಕೆ ಅಭಿಷೇಕದೊಂದಿಗೆ ಪುಷ್ಪಾಲಂಕಾರ ನಂತರ ಮಹಾಮಂಗಳಾರತಿ ನೆರವೇರಿಸಲಾಯಿತು.

ಕಡೇ ಶ್ರಾವಣ ಮಾಸದ ದಿನದಂದು ಮಾತ್ರವೇ ಶ್ರೀಉಗ್ರ ನರಸಿಂಹಸ್ವಾಮಿ ದೇವರಿಗೆ ಬೆಣ್ಣೆ ಅಲಂಕಾರ ಮಾಡಿರುವುದು ವಿಶೇಷವಾಗಿತ್ತು. ದೇಗುಲಕ್ಕೆ ಹೊಂದಿಕೊಂಡಿರುವ ಶ್ರೀ ವರದರಾಜ ಸ್ವಾಮಿ ದೇವಾಲಯದಲ್ಲೂ ಸಹ ಶ್ರಾವಣ ಮಾಸದ ಪ್ರಯುಕ್ತ ವಿಶೇಷ ಪೂಜಾ ಕಾರ್ಯಗಳನ್ನು ನಡೆದವು.

ದೇವರ ದರ್ಶನಕ್ಕೆ ಆಗಮಿಸಿದ್ದ ಅಸಂಖ್ಯಾತ ಭಕ್ತಾಧಿಗಳಿಗೆ ಜೈನ್ಯ ಸಮಾಜದ ವತಿಯಿಂದ ಪ್ರಸಾದ ರೂಪದಲ್ಲಿ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ತಾಲೂಕಿನ ಆತಗೂರು ಹೋಬಳಿ ಕದಲಿಪುರದ ಶ್ರೀ ಕದಲಿ ಲಕ್ಷ್ಮಿ ವೆಂಕಟೇಶ್ವರ ದೇವಾಲಯದಲ್ಲಿ ಕಡೆ ಶ್ರಾವಣ ಮಾಸದ ಪ್ರಯುಕ್ತ ವಿಶೇಷ ಪೂಜಾ ಕಾರ್ಯಗಳು ನಡೆದವು.

ಶ್ರೀ ಕದಲಿ ಲಕ್ಷ್ಮಿ ವೆಂಕಟೇಶ್ವರ ಸೇವಾ ಟ್ರಸ್ಟ್ ಅಧ್ಯಕ್ಷ ಕೆ.ಟಿ.ಶಿವರಾಂ ಹಾಗೂ ಪ್ರಧಾನ ಅರ್ಚಕ ಕೆ.ನಾರಾಯಣ್ ನೇತೃತ್ವದಲ್ಲಿ ಅಭಿಷೇಕದೊಂದಿಗೆ ವಿಶೇಷ ಪೂಜಾ ಕಾರ್ಯಗಳು ನಡೆದವು. ತಾಲೂಕಿನ ಕೊಪ್ಪ ಹೋಬಳಿ ಆಬಲವಾಡಿ ಗ್ರಾಮದ ತೋಪಿನ ತಿಮ್ಮಪ್ಪನ ದೇವಾಲಯದಲ್ಲೂ ಸಹ ಶ್ರಾವಣ ಮಾಸದ ಕೊನೆಯ ದಿನದ ಅಂಗವಾಗಿ ಅಭಿಷೇಕದೊಂದಿಗೆ ವಿಶೇಷ ಪೂಜಾ ಕಾರ್ಯಗಳು ನೆರವೇರಿದವು.