ಗಣೇಶನಿಗೆ ವಿಶೇಷ ಗಂಗಾರತಿ: ರಾಜ್ಯದಲ್ಲೇ ಮೊದಲು

| Published : Sep 13 2024, 01:32 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ: ನಗರದ ಶ್ರೀ ಛತ್ರಪತಿ ಶಿವಾಜಿ ಮಹಾರಾಜ ವೃತ್ತದಲ್ಲಿ ಗಜಾನನ ಮಹಾ ಮಂಡಳಿಯಿಂದ ಪ್ರತಿಷ್ಠಾಪಿಸಲಾಗಿರುವ ಗಣೇಶನಿಗೆ ಗಂಗಾ ಆರತಿ ಮೂಲಕ ವಿಶೇಷ ಪೂಜೆ ಸಲ್ಲಿಸಲಾಯಿತು. ವಾರಣಾಸಿಯಿಂದ ಆಗಮಿಸಿದ್ದ ಐವರು ಅರ್ಚಕರ ತಂಡ ಗಣೇಶನಿಗೆ ಒಂದುಗಂಟೆ ಕಾಲ ಗಂಗಾ ಆರತಿಯಿಂದ ವಿಶೇಷ ಪೂಜೆ ಸಲ್ಲಿಸಿದರು. ಗಣೇಶನಿಗೆ ಗಂಗಾ ಆರತಿ ಬೆಳಗಿ ವಿಶೇಷ ಪೂಜೆ ಸಲ್ಲಿಸಿರುವುದು ರಾಜ್ಯದಲ್ಲಿಯೇ ಇದೇ ಪ್ರಪ್ರಥಮ ಬಾರಿಗೆ ಎನ್ನಲಾಗುತ್ತಿದೆ.

ಕಾರ್ಯಕ್ರಮದ ಸಾನಿಧ್ಯವನ್ನು ಅರಿಕೆರಿಗುಡ್ಡದ ಅಭಿನವ ಶ್ರೀ ಅವಧೂತ ಸಿದ್ಧ ಮಹಾರಾಜರು ವಹಿಸಿದ್ದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ಹಾಗೂ ಮಾಜಿ ಸಚಿವ ಅಪ್ಪಾಸಾಹೇಬ್ ಪಟ್ಟಣಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಗಂಗಾ ಆರತಿ ಬಳಿಕ ಸಾವಿರಾರು ಭಕ್ತರಿಗೆ ಪ್ರಸಾದ ವ್ಯವಸ್ಥೆ ಹಮ್ಮಿಕೊಳ್ಳಲಾಗಿತ್ತು.