ಸನಾತನ ಸಂಸ್ಕೃತಿಯಲ್ಲಿ ದೇಗುಲಗಳಿಗೆ ವಿಶೇಷ ಪ್ರಾಮುಖ್ಯತೆ: ವಿದ್ಯಾ ಶಂಕರ ದೇಶಿಕೇಂದ್ರ ಸ್ವಾಮೀಜಿ

| Published : Oct 28 2024, 01:16 AM IST

ಸನಾತನ ಸಂಸ್ಕೃತಿಯಲ್ಲಿ ದೇಗುಲಗಳಿಗೆ ವಿಶೇಷ ಪ್ರಾಮುಖ್ಯತೆ: ವಿದ್ಯಾ ಶಂಕರ ದೇಶಿಕೇಂದ್ರ ಸ್ವಾಮೀಜಿ
Share this Article
  • FB
  • TW
  • Linkdin
  • Email

ಸಾರಾಂಶ

ಸಮಾಜದಲ್ಲಿ ಯಾವುದೇ ಜಾತಿ, ಮತ, ಭೇದವಿಲ್ಲದೇ ಎಲ್ಲರೂ ಒಗ್ಗಟ್ಟಾದಾಗ ಮಾತ್ರ ಗ್ರಾಮಗಳಲ್ಲಿ ಶಾಂತಿ, ನೆಮ್ಮದಿ ಸಾಧ್ಯವಾಗುತ್ತದೆ.

ಗುಬ್ಬಿ: ಭಾರತೀಯ ಸಂಸ್ಕೃತಿಯಲ್ಲಿ ಸನಾತನ ಧರ್ಮದ ದೇವಾಲಯಗಳಿಗೆ ತನ್ನದೇ ಆದ ಪ್ರಾಮುಖ್ಯತೆಯಿದೆ. ಎಲ್ಲರೂ ಭಗವಂತನನ್ನು ಸ್ಮರಿಸಬೇಕು ಎಂದು ಗೊಲ್ಲಹಳ್ಳಿ ಮಠದ ಶ್ರೀ ವಿಭವಾ ವಿದ್ಯಾ ಶಂಕರ ದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು. ಗುಬ್ಬಿ ತಾಲೂಕಿನ ಸಾಗರನಹಳ್ಳಿಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಶ್ರೀ ಶರಣ ಕಲ್ಯಾಣದಯ್ಯ ಸ್ವಾಮಿ ದೇವಾಲಯದ ಎರಡನೇ ವರ್ಷದ ವಾರ್ಷಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದಲ್ಲಿ ಯಾವುದೇ ಜಾತಿ, ಮತ, ಭೇದವಿಲ್ಲದೇ ಎಲ್ಲರೂ ಒಗ್ಗಟ್ಟಾದಾಗ ಮಾತ್ರ ಗ್ರಾಮಗಳಲ್ಲಿ ಶಾಂತಿ, ನೆಮ್ಮದಿ ಸಾಧ್ಯವಾಗುತ್ತದೆ ಎಂದರು. ಗ್ರಾಮಗಳಲ್ಲಿ ವಾಸ ಮಾಡುವ ಎಲ್ಲ ವರ್ಗದ ಜನರು ನಾವೆಲ್ಲ ಒಂದೇ ಎಂಬ ಭಾವನೆಯಲ್ಲಿದ್ದಾರೆ. ಶ್ರೀ ಶರಣ ಕಲ್ಯಾಣದಯ್ಯ ಸ್ವಾಮಿ ದೇವಾಲಯ ಶಕ್ತಿ ಪೀಠವಾಗಲಿ. ಈ ದೇವಾಲಯಕ್ಕೆ ಭಕ್ತರ ಸಾಗರ ಹರಿದು ಬರಲಿ ಎಂದು ಶುಭ ಹಾರೈಸಿದರು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸಾಗರನಹಳ್ಳಿ ವಿಜಯ್ ಕುಮಾರ್ , ಗ್ರಾಮ ಪಂಚಾಯಿತಿ ಸದಸ್ಯ ಶಿವನಂಜಪ್ಪ ,ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಮಲ್ಲೇಶಯ್ಯ , ಮುಖಂಡರಾದ ಗಂಗಾಧರಪ್ಪ , ನಂದೀಶ್ , ಸಿದ್ದರಾಮಣ್ಣ , ಚನ್ನಬಸವಯ್ಯ , ಶಿವಣ್ಣ ,ಮಲ್ಲಿಕಾರ್ಜುನ್ ಭಾಗವಹಿಸಿದ್ದರು.