ಬೆಳ್ತಂಗಡಿ: ಎಸ್‌ಡಿಎಂ ಶಾಲೆಯಲ್ಲಿ ವಿಶೇಷ ಸಂವಾದ ಕಾರ್ಯಕ್ರಮ

| Published : Dec 26 2024, 01:05 AM IST

ಸಾರಾಂಶ

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಅವರು ಬಸವರಾಜ್ ಶಂಕರ್ ಉಮ್ರಾಣಿ ಅವರನ್ನು ಸಂಸ್ಥೆಯ ಪರವಾಗಿ ಸನ್ಮಾನಿಸಿ, ಗೌರವಿಸಿ, ಶುಭ ಹಾರೈಸಿದರು

ಕನ್ನಡಪ್ರಭ ವಾರ್ತೆ ಬೆಳ್ತಂಗಡಿ

ಉಜಿರೆಯ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆ, ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆ (ರಾಜ್ಯ ಪಠ್ಯಕ್ರಮ) ಹಾಗೂ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಸಿ.) ಶಾಲೆಗಳ ಸುಮಾರು 1,000 ವಿದ್ಯಾರ್ಥಿಗಳು ಡಿ. 17 ರಂದು ಎಸ್ ಡಿಎಂ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ‘ಮಾನವ ಕಂಪ್ಯೂಟರ್’, ‘ಗಣಿತ ಮಾಂತ್ರಿಕ’ ಖ್ಯಾತಿಯ ಬೆಳಗಾವಿಯ ಬಸವರಾಜ್ ಶಂಕರ್ ಉಮ್ರಾಣಿ ಅವರೊಂದಿಗೆ ವಿಶೇಷ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರ ಅನುಭವದ ಮಾತುಗಳಿಂದ ಪ್ರೇರಿತರಾದರು.

ದೃಷ್ಟಿಹೀನರಾಗಿದ್ದರೂ, ಗಣಿತದ ಮೂಲ ಕ್ರಿಯೆಗಳಾದ ಸಂಕಲನ, ವ್ಯವಕಲನ, ಗುಣಾಕಾರ, ಭಾಗಾಕಾರಗಳಲ್ಲಿ ಬರುವ ಸಮಸ್ಯೆಗಳನ್ನು ಕ್ಷಣಾರ್ಧದಲ್ಲಿ ಉತ್ತರಿಸುವ ವಿಶೇಷ ಕೌಶಲ, ಸ್ಮರಣಶಕ್ತಿಯನ್ನು ಪ್ರದರ್ಶಿಸಿದ ಬಸವರಾಜ್, ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವಂತೆ ಹಾಗೂ ಉತ್ತಮ ಮೌಲ್ಯಗಳನ್ನು ರೂಢಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಅವರು ಬಸವರಾಜ್ ಶಂಕರ್ ಉಮ್ರಾಣಿ ಅವರನ್ನು ಸಂಸ್ಥೆಯ ಪರವಾಗಿ ಸನ್ಮಾನಿಸಿ, ಗೌರವಿಸಿ, ಶುಭ ಹಾರೈಸಿದರು.ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಧನ್ಯಕುಮಾರ್, ಮೂರೂ ಶಾಲೆಗಳ ಮುಖ್ಯ ಶಿಕ್ಷಕರು,ಶಿಕ್ಷಕ ವೃಂದ ಹಾಗು ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದರು.

ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯ ಕನ್ನಡ ಅಧ್ಯಾಪಕ ರಾಧಾಕೃಷ್ಣ ಕೆ. ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಮುಖ್ಯೋಪಾಧ್ಯಾಯ ಸುರೇಶ್ ಕೆ. ವಂದಿಸಿದರು.