ಸಾರಾಂಶ
ಗದಗ ಪ್ರಮುಖ ಬೀದಿ ಹಾಗೂ ವೃತ್ತಗಳಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯ ಶಹರ ಪೊಲೀಸ್ ಠಾಣೆ ವತಿಯಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳೊಂದಿಗೆ ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ವಿಶೇಷ ಅಭಿಯಾನ ಜರುಗಿತು.
ಗದಗ: ನಗರದ ಪ್ರಮುಖ ಬೀದಿ ಹಾಗೂ ವೃತ್ತಗಳಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯ ಶಹರ ಪೊಲೀಸ್ ಠಾಣೆ ವತಿಯಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳೊಂದಿಗೆ ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ವಿಶೇಷ ಅಭಿಯಾನ ಜರುಗಿತು.
ಅಭಿಯಾನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಜನ ಜಾಗೃತಿ ಜಾಥಾ ಹಳೆ ಬಸ್ ನಿಲ್ದಾಣ, ಶಹರ ಪೋಲಿಸ್ ಠಾಣೆ ವ್ಯಾಪ್ತಿಯ ಪ್ರಮುಖ ಬೀದಿ ಹಾಗೂ ವೃತ್ತಗಳಲ್ಲಿ ಸಂಚರಿಸಿತು. ಈ ಜಾಥಾದಲ್ಲಿ ನಗರದ ಆಂಗ್ಲೋ ಉರ್ದು ಶಾಲೆ ಮಕ್ಕಳ ಪಾಲ್ಗೊಂಡಿದ್ದರು. ಜನ ಜಾಗೃತಿ ಜಾಥಾದಲ್ಲಿ ಮಕ್ಕಳು ಮಾದಕ ದ್ರವ್ಯ ವಿರೋಧಿ ಘೋಷಣೆಗಳನ್ನು ಕೂಗುವ ಮೂಲಕ ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾದರು.ಈ ಸಂದರ್ಭದಲ್ಲಿ ಶಹರ ಪೊಲೀಸ್ ಠಾಣೆಯ ಇನ್ಸಪೆಕ್ಟರ ಸಿ.ಬಿ. ಪಾಟೀಲ, ಪಿಎಸ್‌ಐ ಗಳಾದ ಆರ್.ಆರ್.ಮುಂಡವಾಡಗಿ, ಭಾರತಿ ಬಂಕಾಪುರ, ಎಚ್.ಕೆ. ಪಾಟೀಲ ಸೇರಿದಂತೆ ಪೋಲಿಸ್ ಇಲಾಖೆಯ ಸಿಬ್ಬಂದಿಗಳು, ವಿದ್ಯಾರ್ಥಿಗಳು ಇದ್ದರು.