ಯು.ಪಿ.ಎಂ.ಸಿ.ಯಲ್ಲಿ ವಿಶೇಷ ಉಪನ್ಯಾಸ

| Published : Apr 04 2024, 01:04 AM IST

ಸಾರಾಂಶ

ಉಡುಪಿ ಎ.ವಿ. ಬಾಳಿಗಾ ಮೆಮೋರಿಯಲ್ ಆಸ್ಪತ್ರೆಯ ಆಡಳಿತಾಧಿಕಾರಿ ಹಾಗೂ ಆಪ್ತ ಸಲಹೆಗಾರರಾದ ಸೌಜನ್ಯ ಶೆಟ್ಟಿ ಅವರು ಈ ಉಪನ್ಯಾಸ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಕನ್ನಡಪ್ರಭ ವಾರ್ತೆ ಉಡುಪಿ

ಇಲ್ಲಿನ ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಸಾಮಾಜಿಕ ಜಾಲತಾಣಗಳ ಬಗೆಗಿನ ಜಾಗೃತಿ ಹಾಗೂ ಮಾದಕ ದ್ರವ್ಯ ವ್ಯಸನಗಳ ದುಷ್ಪರಿಣಾಮಗಳ ಕುರಿತಾದ ವಿಶೇಷ ಉಪನ್ಯಾಸ ಕಾರ್ಯಕ್ರಮ ಮಂಗಳವಾರ ಕಾಲೇಜಿನ ಸಭಾಭವನದಲ್ಲಿ ಜರುಗಿತು.

ಉಡುಪಿ ಎ.ವಿ. ಬಾಳಿಗಾ ಮೆಮೋರಿಯಲ್ ಆಸ್ಪತ್ರೆಯ ಆಡಳಿತಾಧಿಕಾರಿ ಹಾಗೂ ಆಪ್ತ ಸಲಹೆಗಾರರಾದ ಸೌಜನ್ಯ ಶೆಟ್ಟಿ ಅವರು ಈ ಉಪನ್ಯಾಸ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಸಾಮಾಜಿಕ ಜಾಲತಾಣದ ಮೂಲಕ ತಪ್ಪು ಮಾಹಿತಿಯಿಂದ ಹದಿಹರೆಯದ ಮಕ್ಕಳು ಪ್ರೀತಿ ಪ್ರೇಮಗಳಿಗೆ ಬಲಿಯಾಗಿ ಅನುಭವಿಸುವ ತೊಂದರೆಗಳನ್ನು ವಿವರಿಸುವುದರ ಜೊತೆಗೆ ಕೃತಕ ಬುದ್ಧಿಮತ್ತೆಯನ್ನು ದುರ್ಬಳಕೆ ಮಾಡಿಕೊಳ್ಳುವುದರ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಸಲಹೆ ಮಾಡಿದರು. ಇಂದಿನ ಯುವಜನರ ಮೇಲೆ ಡ್ರಗ್ಸ್ ಮಾಫಿಯಾದಿಂದ ಆಗುತ್ತಿರುವ ಭಯಾನಕ ಪರಿಣಾಮಗಳನ್ನು ವಿವರಿಸಿ ಅದರಿಂದ ದೂರವಿರಲು ವಿದ್ಯಾರ್ಥಿಗಳಿಗೆ ಕರೆಯಿತ್ತರು. ಕಾಲೇಜಿನ ಪ್ರಾಚಾರ್ಯರಾದ ಆಶಾ ಕುಮಾರಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಎನ್.ಎಸ್.ಎಸ್. ಯೋಜನಾ ಅಧಿಕಾರಿ ರಾಜೇಶ್ ಕುಮಾರ್ ಪ್ರಾಸ್ತಾವಿಸಿ ಸ್ವಾಗತಿಸಿದರು. ಸಹ ಯೋಜನಾಧಿಕಾರಿ ಚಂದ್ರಶೇಖರ್ ವಂದಿಸಿದರು.