ಸಾರಾಂಶ
ದೊಡ್ಡಬಳ್ಳಾಪುರ: ತಾಲೂಕಿನ ಸುಪ್ರಸಿದ್ದ ಯಾತ್ರಾ ಸ್ಥಳವಾದ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ನವರಾತ್ರಿಯ 2ನೇ ದಿನದ ಅಂಗವಾಗಿ ಮಂಗಳವಾರ ವಿಶೇಷ ಅಲಂಕಾರ ಮಾಡಲಾಗಿತ್ತು.
ದೊಡ್ಡಬಳ್ಳಾಪುರ: ತಾಲೂಕಿನ ಸುಪ್ರಸಿದ್ದ ಯಾತ್ರಾ ಸ್ಥಳವಾದ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ನವರಾತ್ರಿಯ 2ನೇ ದಿನದ ಅಂಗವಾಗಿ ಮಂಗಳವಾರ ವಿಶೇಷ ಅಲಂಕಾರ ಮಾಡಲಾಗಿತ್ತು. ದೇವಾಲಯಕ್ಕೆ ಸಹಸ್ರಾರು ಭಕ್ತಾದಿಗಳು ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದರು. ನವರಾತ್ರಿಯ ಅಂಗವಾಗಿ ಪ್ರತಿದಿನ ದೇವರಿಗೆ ವಿವಿಧ ಬಗೆಯ ಅಲಂಕಾರಗಳನ್ನು ಮಾಡಲಾಗುತ್ತಿದೆ. ದೇವಾಲಯದ ಕಾರ್ಯದರ್ಶಿ ಪಿ ದಿನೇಶ್, ಪ್ರದಾನ ಅರ್ಚಕ ಶ್ರೀನಿಧಿ ಹಾಗೂ ದೇವಾಲಯದ ಸಿಬ್ಬಂದಿ ಭಾಗವಹಿಸಿದ್ದರು.