ವಿಪ ಚುನಾವಣೆ: ಜೂ.3ರಂದು ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ

| Published : May 31 2024, 02:15 AM IST

ವಿಪ ಚುನಾವಣೆ: ಜೂ.3ರಂದು ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ
Share this Article
  • FB
  • TW
  • Linkdin
  • Email

ಸಾರಾಂಶ

ವಿಧಾನ ಪರಿಷತ್ತು ಆಗ್ನೆಯ ಶಿಕ್ಷಕರ ಕ್ಷೇತ್ರ ಹಾಗೂ ನೈಋತ್ಯ ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರರ ಕ್ಷೇತ್ರಗಳಿಗೆ ಜೂನ್ 3ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಮತದಾರ ಶಿಕ್ಷಕರಿಗೆ ಹಾಗೂ ಪದವೀಧರರಿಗೆ ಮತಹಕ್ಕು ಚಲಾಯಿಸಲು ವಿಶೇಷ ಸಾಂದರ್ಭಿಕ ರಜೆ ನೀಡಲಾಗಿದೆ.

ದಾವಣಗೆರೆ: ವಿಧಾನ ಪರಿಷತ್ತು ಆಗ್ನೆಯ ಶಿಕ್ಷಕರ ಕ್ಷೇತ್ರ ಹಾಗೂ ನೈಋತ್ಯ ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರರ ಕ್ಷೇತ್ರಗಳಿಗೆ ಜೂನ್ 3ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಮತದಾರ ಶಿಕ್ಷಕರಿಗೆ ಹಾಗೂ ಪದವೀಧರರಿಗೆ ಮತಹಕ್ಕು ಚಲಾಯಿಸಲು ವಿಶೇಷ ಸಾಂದರ್ಭಿಕ ರಜೆ ನೀಡಲಾಗಿದೆ.

ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾ ಸಂಸ್ಥೆಗಳು, ಎಲ್ಲ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು ಉಳಿದ ಕೈಗಾರಿಕೆ ಸಂಸ್ಥೆಗಳು ಹಾಗೂ ಸಹಕಾರ ರಂಗದ ಸಂಘ ಸಂಸ್ಥೆಗಳಲ್ಲಿ ಎಲ್ಲ ವ್ಯಾವಹಾರಿಕ ಸಂಸ್ಥೆಗಳಲ್ಲಿ ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇತರ ಸಂಸ್ಥೆಗಳಲ್ಲಿ ಕಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡುವವರಿದ್ದಾರೆ. ಅವರಿಗೆ ಅನುಕೂಲ ಆಗುವಂತೆ ಮತದಾನದ ದಿನವಾದ ಜೂ.3ರಂದು ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಲು ಆದೇಶಿಸಲಾಗಿದೆ.

ಮತದಾನ ಸಮಯದಲ್ಲಿ ಮತದಾರರು ತಮ್ಮ ಭಾವಚಿತ್ರವುಳ್ಳ ಗುರುತಿನ ಚೀಟಿ ಮುಖ್ಯ ದಾಖಲಾತಿಯಾಗಿ ಹಾಜರುಪಡಿಸಬೇಕು. ಮತದಾರರ ಪಟ್ಟಿಯಲ್ಲಿ ಹೆಸರಿದ್ದವರು ಗುರುತಿನ ಚೀಟಿ ಹೊಂದಿಲ್ಲದಿದ್ದಲ್ಲಿ ಅಂತಹವರು ಭಾರತ ಚುನಾವಣಾ ಆಯೋಗ ನಿರ್ಧರಿಸಿರುವ ಪೂರಕ ದಾಖಲಾತಿಗಳ ಪೈಕಿ ಒಂದನ್ನು ಹಾಜರುಪಡಿಸಿ, ಮತದಾನ ಮಾಡಲು ಅವಕಾಶವಿದೆ.

ಪೂರಕ ದಾಖಲಾತಿ:

ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪಾನ್‌ ಕಾರ್ಡ್, ಇಂಡಿಯಾನ್ ಪಾಸ್ ಪೋರ್ಟ್, ಕೇಂದ್ರ, ರಾಜ್ಯ ಸರ್ಕಾರದ ಅಡಿಯಲ್ಲಿ ಬರುವ ಸ್ಥಳೀಯ ಸಂಸ್ಥೆಗಳು ಅಥವಾ ಇತರ ಖಾಸಗಿ ಕೈಗಾರಿಕಾ ಮನೆಗಳಿಂದ ಅದರ ಉದ್ಯೋಗಿಗಳಿಗೆ ನೀಡಲಾದ ಸೇವಾ ಗುರುತಿನ ಕಾರ್ಡ್, ಸಂಸದರು, ಶಾಸಕರು, ಎಂಎಲ್‌ಸಿಗಳಿಗೆ ಅಧಿಕೃತ ಗುರುತಿನ ಚೀಟಿ, ಶಿಕ್ಷಣ ಸಂಸ್ಥೆಗಳಿಂದ ನೀಡಲಾದ ಸೇವಾ ಗುರುತಿನ ಕಾರ್ಡ್ಗಳು, ಇದರಲ್ಲಿ ಶಿಕ್ಷಕರು, ಪದವೀಧರರ ಕ್ಷೇತ್ರದ ಮತದಾರರನ್ನು ನೇಮಿಸಿಕೊಳ್ಳಬಹುದು. ವಿಶ್ವವಿದ್ಯಾಲಯವು ನೀಡಿದ ಪದವಿ, ಡಿಪ್ಲೊಮಾ ಮೂಲ ಪ್ರಮಾಣ ಪತ್ರ, ಸಕ್ಷಮ ಪ್ರಾಧಿಕಾರದಿಂದ ನೀಡಿದ ದೈಹಿಕನ್ಯೂನತೆಯ ಪ್ರಮಾಣ ಪತ್ರ, ವಿಶಿಷ್ಟ ಅಂಗವೈಕಲ್ಯ ಕಾರ್ಡ್ (ಯುಡಿಐಡಿ) ಮೂಲಕ ಮತದಾನ ಮಾಡಬಹುದು ಎಂದು ತಿಳಿಸಲಾಗಿದೆ.