ಪ್ರಾಮಾಣಿಕತೆಯಿಂದ ಮತದಾನ ಮಾಡುವುದು ಕರ್ತವ್ಯ

| Published : Sep 20 2025, 01:00 AM IST

ಸಾರಾಂಶ

ಪ್ರಜೆಗಳಿಂದ, ಪ್ರಜೆಗಳಿಗಾಗಿ, ಪ್ರಜೆಗಳಿಗೋಸ್ಕರ ಇರುವ ಸರ್ಕಾರವೇ ಪ್ರಜಾಪ್ರಭುತ್ವ, ಪ್ರಜಾಪ್ರಭುತ್ವದ ಅರಿವು ಪ್ರತಿಯೊಬ್ಬ ಭಾರತೀಯನಿಗೂ ಕೂಡ ಇರಬೇಕು

ಕನ್ನಡಪ್ರಭ ವಾರ್ತೆ ಮೈಸೂರುಆಸೆ ಅಮಿಷೆಗಳಿಗೆ ಒಳಪಡದೆ ಪ್ರಾಮಾಣಿಕತೆಯಿಂದ ಮತದಾನ ಮಾಡುವುದು ಪ್ರತಿಯೊಬ್ಬ ಪ್ರಜೆಯ ಆದ್ಯ ಕರ್ತವ್ಯ ಎಂದು ಶ್ರೀ ನಟರಾಜ ಪ್ರತಿಷ್ಠಾನದ ವಿಶೇಷಾಧಿಕಾರಿ ಪ್ರೊ.ಎಸ್. ಶಿವರಾಜಪ್ಪ ಹೇಳಿದರು.ಶ್ರೀ ನಟರಾಜ ಮಹಿಳಾ ವಸತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಅವರು ಮಾತನಾಡಿದರು. ಪ್ರಜೆಗಳಿಂದ, ಪ್ರಜೆಗಳಿಗಾಗಿ, ಪ್ರಜೆಗಳಿಗೋಸ್ಕರ ಇರುವ ಸರ್ಕಾರವೇ ಪ್ರಜಾಪ್ರಭುತ್ವ, ಪ್ರಜಾಪ್ರಭುತ್ವದ ಅರಿವು ಪ್ರತಿಯೊಬ್ಬ ಭಾರತೀಯನಿಗೂ ಕೂಡ ಇರಬೇಕು. ಮತದಾನ ಸರಿಯಾದ ಕ್ರಮದಲ್ಲಿ ಆದರೆ ಬಲಿಷ್ಟ ಹಾಗೂ ಸೂಕ್ತ ಅಭ್ಯರ್ಥಿಯನ್ನು ನೇಮಿಸಬಹುದು. ಭವ್ಯ ಭಾರತದ ನಿರ್ಮಾಣವಾಗಬೇಕಾದರೆ ಅದರ ಜವಬ್ದಾರಿ ಪ್ರತಿಯೊಬ್ಬರದು ಎಂದು ತಿಳಿಸಿದರು.ಅಂತಿಮ ಬಿ.ಎ ವಿದ್ಯಾರ್ಥಿನಿ ಲಕ್ಷ್ಮೀ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ಬಗ್ಗೆ ಪ್ರಬಂಧ ಮಂಡಿಸಿದರು.ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಎಚ್‌.ಎ. ಪೂರ್ಣಿಮಾ ಪ್ರತಿಜ್ಞಾ ವಿಧಿ ಬೋಧಿಸಿದರು.ಪಲ್ಲವಿ ಪ್ರಾರ್ಥಿಸಿದರೆ, ಕುಸುಮಾ ಸ್ವಾಗತಿಸಿದರು, ಸ್ನೇಹ ನಿರೂಪಿಸಿದರು. ಅನ್ನಪೂರ್ಣ ವಂದಿಸಿದರು.