ಮತದಾನದಿಂದ ವಿಶೇಷಚೇತನರು ಹೊರಗುಳಿಯಬಾರದು: ತಿಪ್ಪಣ್ಣ ಶಿರಸಗಿ

| Published : May 01 2024, 01:21 AM IST

ಮತದಾನದಿಂದ ವಿಶೇಷಚೇತನರು ಹೊರಗುಳಿಯಬಾರದು: ತಿಪ್ಪಣ್ಣ ಶಿರಸಗಿ
Share this Article
  • FB
  • TW
  • Linkdin
  • Email

ಸಾರಾಂಶ

ಗ್ರಾಪಂ ವ್ಯಾಪ್ತಿಯಲ್ಲಿ ಎಲ್ಲ ಹಿರಿಯ ನಾಗರಿಕರು ಹಾಗೂ ವಿಶೇಷಚೇತನರು ಮತದಾನದಿಂದ ಹೊರಗುಳಿಯದಂತೆ ವಿಶೇಷಚೇತನ ಕಾರ್ಯಕರ್ತರು ಕ್ರಮವಹಿಸಬೇಕು.

ಕಾರ್ಯಕರ್ತರ ಪೂರ್ವಭಾವಿ ಸಭೆ । ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಹೇಳಿಕೆ

ಕನ್ನಡಪ್ರಭ ವಾರ್ತೆ ಕೊಪ್ಪಳ

ವಿಶೇಷಚೇತನರು ಮತದಾನದಿಂದ ಹೊರಗುಳಿಯದಂತೆ ಕ್ರಮವಹಿಸಿರಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ತಿಪ್ಪಣ್ಣ ಶಿರಸಗಿ ಹೇಳಿದರು.

ನಗರದ ತಾಲೂಕು ಪಂಚಾಯಿತಿಯಲ್ಲಿ ಜರುಗಿದ ಗ್ರಾಪಂ ವಿಶೇಷಚೇತನ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಮೇ 7ರಂದು ಸಾರ್ವತ್ರಿಕ ಲೋಕಸಭಾ ಚುನಾವಣೆ ಜರುಗಲಿದ್ದು, ಗ್ರಾಪಂ ವ್ಯಾಪ್ತಿಯಲ್ಲಿ ಎಲ್ಲ ಹಿರಿಯ ನಾಗರಿಕರು ಹಾಗೂ ವಿಶೇಷಚೇತನರು ಮತದಾನದಿಂದ ಹೊರಗುಳಿಯದಂತೆ ವಿಶೇಷಚೇತನ ಕಾರ್ಯಕರ್ತರು ಕ್ರಮವಹಿಸಬೇಕು. ಮತದಾನ ದಿನದಂದು ವಿಲ್‌ ಚೇರ್‌ ವ್ಯವಸ್ಥೆ ಕಲ್ಪಿಸಿದ್ದು, ಮುಂಜಾನೆಯ ಅವಧಿಯೊಳಗಾಗಿ ಎಲ್ಲರೂ ಮತ ಚಲಾಯಿಸುವಂತೆ ಕ್ರಮವಹಿಸಬೇಕೆಂದರು. ಲೋಕಸಭಾ ಚುನಾವಣೆಯಲ್ಲಿ ಶೇ.100ರಷ್ಟು ವಿಶೇಷಚೇತನರು ಮತದಾನ ಮಾಡುವಂತೆ ಅದರ ಪೂರ್ವಭಾವಿಯಾಗಿ ಗ್ರಾಪಂ ವ್ಯಾಪ್ತಿಯಲ್ಲಿ ಸಭೆ ಜರುಗಿಸಬೇಕೆಂದರು. ಪ್ರತಿ ಮತ ಅಮೂಲ್ಯವಾದುದು. ಕೊಪ್ಪಳ ಜಿಲ್ಲೆಯಲ್ಲಿ ಎಲ್ಲ ವಿಶೇಷಚೇತನರು ಶೇ.100 ಮತ ಚಲಾಯಿಸಿ ರಾಜ್ಯಕ್ಕೆ ಉತ್ತಮ ಸಂದೇಶ ಸಾರೋಣ ಎಂದರು.

ವಿಕಲಚೇತನ ಮತದಾರರ ಜಿಲ್ಲಾ ಚುನಾವಣಾ ರಾಯಭಾರಿ ಪೂರ್ಣಿಮಾ ಯೋಳುಬಾವಿ ಮಾತನಾಡಿ, ಜಿಲ್ಲೆಯಲ್ಲಿ 16,000 ವಿಶೇಷಚೇತನ ಮತದಾರರಿದ್ದು, ಕಡ್ಡಾಯವಾಗಿ ಮತದಾನ ಮಾಡುವಂತೆ ಅರಿವು ಮೂಡಿಸಲಾಗುತ್ತಿದೆ. ಮೇ 7ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಎಲ್ಲ ವಿಶೇಷಚೇತನ ಮತದಾರರು ಮತದಾನದ ಹಕ್ಕನ್ನು ಚಲಾಯಿಸುತ್ತೇವೆ ಎಂದು ಹೇಳಿದರು.

ಪ್ರತಿಜ್ಞಾ ವಿಧಿ ಸ್ವೀಕಾರ:ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು. ಶಿಶು ಅಭಿವೃದ್ದಿ ಯೋಜನಾಧಿಕಾರಿ ಜಯಶ್ರೀ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಶರಣಪ್ಪ, ತಾಲೂಕು ಐಇಸಿ ಸಂಯೋಜಕ ದೇವರಾಜ ಪತ್ತಾರ, ತಾಲೂಕು ವಿಶೇಷಚೇತನರ ಕಾರ್ಯಕರ್ತೆ ಜಯಶ್ರೀ, ತಾಲೂಕಿನ ಎಲ್ಲ ಗ್ರಾಪಂಗಳ ವಿಶೇಷಚೇತನರ ಕಾರ್ಯಕರ್ತರು ಇತರರಿದ್ದರು.