ವಿಶೇಷಚೇತನರು ತಪ್ಪದೇ ಮತದಾನದಲ್ಲಿ ಪಾಲ್ಗೊಳ್ಳಬೇಕು

| Published : Mar 28 2024, 12:50 AM IST

ವಿಶೇಷಚೇತನರು ತಪ್ಪದೇ ಮತದಾನದಲ್ಲಿ ಪಾಲ್ಗೊಳ್ಳಬೇಕು
Share this Article
  • FB
  • TW
  • Linkdin
  • Email

ಸಾರಾಂಶ

ಲೋಕಸಭಾ ಚುನಾವಣೆ ನಡೆಯುತ್ತಿದ್ದು, ಮೇ 7ರಂದು ನಡೆಯುವ ಮತದಾನದಲ್ಲಿ ಎಲ್ಲ ವಿಶೇಷಚೇತನರು ಶೇ.100ರಷ್ಟು ಮತದಾನ ಮಾಡಬೇಕು. ವಿಶೇಷಚೇತನರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶೇ.97ರಷ್ಟು ಮನತದಾನ ಮಾಡಿದ್ದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಶೇ.100ರಷ್ಟು ಮತದಾನ ಮಾಡುವ ವಿಶ್ವಾಸವಿದೆ ಕೆಂದು ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ್ ದಾವಣಗೆರೆಯಲ್ಲಿ ಹೇಳಿದ್ದಾರೆ.

- ಜಿಪಂ ಬಳಿ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ್ ಚಾಲನೆ

- - - ಕನ್ನಡ ಪ್ರಭ ವಾರ್ತೆ, ದಾವಣಗೆರೆ

ಲೋಕಸಭಾ ಚುನಾವಣೆ ನಡೆಯುತ್ತಿದ್ದು, ಮೇ 7ರಂದು ನಡೆಯುವ ಮತದಾನದಲ್ಲಿ ಎಲ್ಲ ವಿಶೇಷಚೇತನರು ಶೇ.100ರಷ್ಟು ಮತದಾನ ಮಾಡಬೇಕೆಂದು ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ್ ಹೇಳಿದರು.

ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಹಯೋಗದಲ್ಲಿ ಸಾರ್ವತ್ರಿಕ ಲೋಕಸಭಾ ಚುನಾವಣೆ ಅಂಗವಾಗಿ ಸ್ವೀಪ್ ಸಮಿತಿಯಿಂದ ಜಿಲ್ಲಾ ಪಂಚಾಯಿತಿ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಏರ್ಪಡಿಸಲಾದ ವಿಶೇಷಚೇತನರ ಬೈಕ್ ರ‍್ಯಾಲಿಗೆ ಹಸಿರು ನಿಶಾನೆ ನೀಡಿ ಅವರು ಮಾತನಾಡಿದರು. ವಿಶೇಷಚೇತನರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶೇ.97ರಷ್ಟು ಮನತದಾನ ಮಾಡಿದ್ದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಶೇ.100ರಷ್ಟು ಮತದಾನ ಮಾಡುವ ವಿಶ್ವಾಸವಿದೆ ಎಂದರು.

ರ‍್ಯಾಲಿಯು ಜಿಪಂ ಕಚೇರಿ ಆವರಣದಿಂದ ಹದಡಿ ರಸ್ತೆ, ಜಯದೇವ ಸರ್ಕಲ್, ಪಿ.ಬಿ. ರೋಡ್, ಮಹಾನಗರ ಪಾಲಿಕೆ, ಅಂತಿಮವಾಗಿ ಜಿಲ್ಲಾಧಿಕಾರಿ ಕಚೇರಿ ತಲುಪಿತು. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ರ‍್ಯಾಲಿ ಸಮಾರೋಪದಲ್ಲಿ ಪಾಲ್ಗೊಂಡರು. ಜಿಪಂ ಸಿಇಒ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ದ ಸುರೇಶ ಬಿ. ಇಟ್ನಾಳ್, ಪಾಲಿಕೆ ಆಯುಕ್ತರಾದ ರೇಣುಕಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ವಾಸಂತಿ ಉಪ್ಪಾರ್, ವಿಕಲಚೇತನರ ಕಲ್ಯಾಣಾಧಿಕಾರಿ ಕೆ.ಕೆ.ಪ್ರಕಾಶ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

- - - -27ಕೆಡಿವಿಜಿ38ಃ:

ದಾವಣಗೆರೆಯಲ್ಲಿ ಲೋಕಸಭಾ ಚುನಾವಣೆ ಮತದಾನ ಜಾಗೃತಿಗಾಗಿ ನಡೆದ ವಿಶೇಷಚೇತನರ ಬೈಕ್ ರ‍್ಯಾಲಿಗೆ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ್‌ ಚಾಲನೆ ನೀಡಿದರು.