ಸಾರಾಂಶ
ಭಯೋತ್ಪಾದಕರ ವಿರುದ್ಧ ಸಮರ ಸಾರಿರುವ ಭಾರತೀಯ ಯೋಧರ ಶ್ರೇಯೋಭಿವೃದ್ಧಿಗೆ ಇಲ್ಲಿನ ಸೋಮೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಕನ್ನಡಪ್ರಭವಾರ್ತೆ ಸೋಮವಾರಪೇಟೆ
ಭಯೋತ್ಪಾದಕರ ವಿರುದ್ಧ ಸಮರ ಸಾರಿರುವ ಭಾರತೀಯ ಯೋಧರ ಶ್ರೇಯೋಭಿವೃದ್ಧಿಗೆ ಇಲ್ಲಿನ ಶ್ರೀ ಸೋಮೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ಅಧ್ಯಕ್ಷ ಶ್ರೀನಿಧಿ ಲಿಂಗಪ್ಪ, ಆಟೋ ಚಾಲಕರ ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿ ಜನಾರ್ದನ್, ಪಟ್ಟಣದ ವರ್ತಕ ಅರುಣ್ ಸೇರಿದಂತೆ ಇತರರು ಶ್ರೀ ಸೋಮೇಶ್ವರ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ, ಪೂಜೆ ಸಲ್ಲಿಸಿದರು.ಪಹಲ್ಗಾಮ್‌ನಲ್ಲಿ ಅಮಾಯಕರನ್ನು ಕೊಂದ ಪಾಕಿಸ್ತಾನಿ ಪೋಷಿತ ಉಗ್ರಗಾಮಿಗಳ ಹೆಡೆಮುರಿಕಟ್ಟಲು ಟೊಂಕಕಟ್ಟಿರುವ ಭಾರತೀಯ ಸೇನೆಗೆ ಜಯವಾಗಲಿ. ಭಾರತದ ಸೈನಿಕರಿಗೆ ಹೆಚ್ಚಿನ ಧೈರ್ಯ, ಸ್ಥೈರ್ಯ ಲಭಿಸಲಿ, ನಮ್ಮ ಸೇನೆ ಹಾಗೂ ಸೈನಿಕರಿಗೆ ಯಾವುದೇ ಆಪತ್ತು ಬಾರದಿರಲಿ ಎಂದು ಶ್ರೀ ಸೋಮೇಶ್ವರ ದೇವರಲ್ಲಿ ಪ್ರಾರ್ಥಿಸಿ, ವಿಶೇಷ ಪೂಜೆ ಸಲ್ಲಿಸಲಾಯಿತು.