ಕೊಡಗಿನ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ

| Published : May 09 2025, 12:31 AM IST

ಸಾರಾಂಶ

ಹೆಮ್ಮೆಯ ಸೇನಾ ಯೋಧರಿಗೆ ಶಕ್ತಿ ತುಂಬಲೆಂದು, ಭಾರತೀಯ ಯೋಧರಿಗೆ ಶಕ್ತಿ ನೀಡುವಂತೆ ಪೂಜೆಗಳು ನೆರವೇರಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಆಪರೇಷನ್ ಸಿಂದೂರ್ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿರುವುದರಿಂದ ಭಾರತೀಯ ಸೇನೆಯ ಹೆಸರಿನಲ್ಲಿ ಹಾಗೂ ಭಾರತೀಯ ಯೋಧರಿಗೆ ಒಳಿತಾಗಲಿ, ಸೇನೆಗೆ ಮತ್ತಷ್ಟು ಶಕ್ತಿಯನ್ನು ಭಗವಂತನು ಅನುಗ್ರಹಿಸಿ ಕರುಣಿಸಲಿ ಎಂದು ಜಿಲ್ಲೆಯ ವಿವಿಧ ದೇವಾಲಯದಲ್ಲಿ ಗುರುವಾರ ವಿಶೇಷ ಪೂಜೆ ನೆರವೇರಿಸಲಾಯಿತು.

ಧಾರ್ಮಿಕ ದತ್ತಿ ಆಯುಕ್ತರ ಸುತ್ತೋಲೆಯಂತೆ ಮಡಿಕೇರಿ ತಾಲೂಕಿನ ಭಾಗಮಂಡಲ ದ ಶ್ರೀ ಭಗಂಡೇಶ್ವರ ದೇವಾಲಯ, ತಲಕಾವೇರಿ ದೇವಾಲಯದಲ್ಲಿ ಆಪರೇಷನ್ ಸಿಂದೂರ ಹೆಸರಿನಲ್ಲಿ ನಡೆದ ಯಶಸ್ವಿ ಸೇನಾ ಕಾರ್ಯಾಚರಣೆ ಹಿನ್ನೆಲೆ

ಹೆಮ್ಮೆಯ ಸೇನಾ ಯೋಧರಿಗೆ ಮತ್ತಷ್ಟು ಶಕ್ತಿ ತುಂಬಲೆಂದು ಪೂಜೆ ಭಾರತೀಯ ಯೋಧರಿಗೆ ಶಕ್ತಿ ನೀಡುವಂತೆ ಪೂಜೆ ನೆರವೇರಿಸಲಾಯಿತು.

ದೇಶದ ಸೈನಿಕರಿಗೆ ವಿಶೇಷ ಶಕ್ತಿ ತುಂಬಲಿ ಎಂದು ಪೂಜೆಯಲ್ಲಿ ಪ್ರಾರ್ಥನೆ ಹಾಗೂ ಸಂಕಲ್ಪ ಪೂಜೆಯನ್ನು ನೆರವೇರಿಸಲಾಯಿತು. ಕ್ಷೇತ್ರದ ಮುಖ್ಯ ಪುರೋಹಿತರಾದ ಹರೀಶ್ ಭಟ್, ಕಾರ್ಯನಿರ್ವಣಾಧಿಕಾರಿಗಳು, ಅರ್ಚಕ ವೃಂದ ಹಾಗೂ ಸಿಬ್ಬಂದಿ ಮತ್ತು ಹೆಚ್ಚಿನ ಭಕ್ತಾದಿಗಳು ಈ ಸಂದರ್ಭ ಹಾಜರಿದ್ದರು.

ಮಡಿಕೇರಿಯ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಕೂಡ ವಿಶೇಷ ಪೂಜೆ ನೆರವೇರಿತು. ವ್ಯವಸ್ಥಾಪದ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು, ಅರ್ಚಕ ವೃಂದ ಸಿಬ್ಬಂದಿ, ವಿವಿಧ ಸಂಘಟನೆಯ ಪ್ರಮುಖರು ಹಾಗೂ ಭಕ್ತಾದಿಗಳು ಈ ಸಂದರ್ಭ ಪಾಲ್ಗೊಂಡಿದ್ದರು.