ಸಾರಾಂಶ
ಭಾರತೀಯ ಜನತಾ ಪಾರ್ಟಿಯ ಮುಖಂಡರು ಹಾಗೂ ಕಾರ್ಯಕರ್ತರು ಸಾಮೂಹಿಕವಾಗಿ ಪೂಜೆ ಸಲ್ಲಿಸಿದರು.
ಕನ್ನಡಪ್ರಭವಾರ್ತೆ ಸೋಮವಾರಪೇಟೆ
ಉಗ್ರವಾದಿಗಳ ವಿರುದ್ಧದ ಹೋರಾಟದಲ್ಲಿ ತೊಡಗಿಸಿಕೊಂಡಿರುವ ಭಾರತೀಯ ಸೇನೆಯ ಶ್ರೇಯಸ್ಸಿಗಾಗಿ ಮಂಡಲ ಬಿಜೆಪಿ ವತಿಯಿಂದ ಪಟ್ಟಣದ ಶ್ರೀ ವಿದ್ಯಾಗಣಪತಿ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಹಾಗೂ ಪೂಜೆ ಸಲ್ಲಿಸಲಾಯಿತು.ಭಾರತೀಯ ಜನತಾ ಪಾರ್ಟಿಯ ಮುಖಂಡರು ಹಾಗೂ ಕಾರ್ಯಕರ್ತರು ಸಾಮೂಹಿಕವಾಗಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ ಮಾಜಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು, ಪಹಲ್ಗಾಮ್‌ನಲ್ಲಿ ನಡೆದ ಅಮಾಯಕರ ಹತ್ಯೆಗೆ ಭಾರತ ಪ್ರತೀಕಾರ ತೀರಿಸಿಕೊಳ್ಳುತ್ತಿದ್ದು, ಆಪರೇಷನ್ ಸಿಂದೂರ್ ಹೆಸರಿನಲ್ಲಿ ಉಗ್ರರ ಹುಟ್ಟಡಗಿಸುತ್ತಿದೆ. ನಮ್ಮ ಸೈನ್ಯ ನಮ್ಮ ಹೆಮ್ಮೆಯಾಗಿದ್ದು, ಭಾರತೀಯ ಸೇನೆಗೆ ಸದಾ ಯಶಸ್ಸು ಸಿಗಲೆಂದು ವಿಶೇಷ ಪ್ರಾರ್ಥನೆ ಸಲ್ಲಿಸಲಾಗಿದೆ ಎಂದರು.
ಈ ಸಂದರ್ಭ ಮಂಡಲ ಬಿಜೆಪಿ ಅಧ್ಯಕ್ಷ ಗೌತಮ್ ಗೌಡ, ಮಾಜಿ ಎಂಎಲ್‌ಸಿ ಎಸ್.ಜಿ. ಮೇದಪ್ಪ, ಮಹಿಳಾ ಮೋರ್ಚಾ ಅಧ್ಯಕ್ಷೆ ಕವಿತ ವಿರೂಪಾಕ್ಷ, ಯುವ ಮೋರ್ಚಾ ಅಧ್ಯಕ್ಷ ಮಹೇಶ್ ತಿಮ್ಮಯ್ಯ, ದರ್ಶನ್ ಜೋಯಪ್ಪ, ಪಕ್ಷದ ಮುಖಂಡರಾದ ಮನುಕುಮಾರ್ ರೈ, ಹೆಚ್.ಕೆ. ಮಾದಪ್ಪ, ಎಸ್.ಆರ್. ಸೋಮೇಶ್, ಮೋಹನ್‌ದಾಸ್, ಶರತ್‌ಚಂದ್ರ, ನೇಗಳ್ಳೆ ಜೀವನ್, ಶ್ರೀನಿಧಿ ಲಿಂಗಪ್ಪ, ನತೀಶ್ ಮಂದಣ್ಣ, ಪೃಥ್ವಿ, ವರಲಕ್ಷ್ಮಿ ಸಿದ್ದೇಶ್ವರ್ ಸೇರಿದಂತೆ ಇತರರು ಇದ್ದರು.