ರಾಮನಗರ: ಶಾಸಕ ಇಕ್ಬಾಲ್ ಹುಸೇನ್ ಆರೋಗ್ಯ ಚೇತರಿಕೆಯಾಗಿ ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿ ಕಾಂಗ್ರೆಸ್ ಮುಖಂಡರು ನಗರದ ಪೀರನ್ ಶಾ ವಲಿ ದರ್ಗಾ ಹಾಗೂ ವಿವಿಧ ದೇವಾಲಯಗಳಲ್ಲಿ ಗುರುವಾರ ವಿಶೇಷ ಪೂಜೆ ಸಲ್ಲಿಸಿದರು

ರಾಮನಗರ: ಶಾಸಕ ಇಕ್ಬಾಲ್ ಹುಸೇನ್ ಆರೋಗ್ಯ ಚೇತರಿಕೆಯಾಗಿ ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿ ಕಾಂಗ್ರೆಸ್ ಮುಖಂಡರು ನಗರದ ಪೀರನ್ ಶಾ ವಲಿ ದರ್ಗಾ ಹಾಗೂ ವಿವಿಧ ದೇವಾಲಯಗಳಲ್ಲಿ ಗುರುವಾರ ವಿಶೇಷ ಪೂಜೆ ಸಲ್ಲಿಸಿದರು.

ಯುವ ಕಾಂಗ್ರೆಸ್ ಉಪಾಧ್ಯಕ್ಷ ತಬ್ರೇಜ್ ಖಾನ್ ನೇತೃತ್ವದಲ್ಲಿ ಪಕ್ಷದ ಮುಖಂಡರು ಹಾಗೂ ಮುಸ್ಲಿಂ ಬಾಂಧವರು ಪೀರನ್ ಷಾ ವಲಿ ದರ್ಗಾದಲ್ಲಿ ಗಲಫ್ ಹೊದಿಸಿ ಶಾಸಕ ಇಕ್ಬಾಲ್ ಹುಸೇನ್ ಆರೋಗ್ಯ ಸುಧಾರಣೆಗಾಗಿ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ತಬ್ರೇಜ್ ಖಾನ್, ಶಾಸಕ ಇಕ್ಬಾಲ್ ಹುಸೇನರ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ನೆರವೇರಿದ್ದು, ಅವರ ಬೇಗ ಚೇತರಿಸಿಕೊಂಡು ಜನಸೇವೆಗೆ ಮರಳುವಂತಾಗಲಿ ಎಂದು ಪ್ರಾರ್ಥಿಸಿದ್ದೇವೆ. ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳ ಮೂಲಕ ಇಕ್ಬಾಲ್ ಹುಸೇನ್ ಜನಪ್ರಿಯ ಶಾಸಕ ಎನಿಸಿಕೊಂಡಿದ್ದಾರೆ. ಇನ್ನೂ ಬೇಕಾದಷ್ಟು ಕೆಲಸಗಳು ಬಾಕಿ ಉಳಿದಿದ್ದು, ಜನಸೇವೆಗೆ ಅವರ ಅಗತ್ಯವಿದೆ ಎಂದರು.

ನಗರಸಭೆ ಸದಸ್ಯರಾದ ನಿಜಾಮುದ್ದೀನ್ ಷರೀಫ್, ಅಬ್ದುಲ್ ಸಮದ್, ಅಣ್ಣು, ನಾಗಮ್ಮ, ಮಾಜಿ ಸದಸ್ಯರಾದ ಬಾಸಿದ್, ದರ್ಗಾ ಹಜರತ್ ಪೀರನ್ ಷಾ ವಲಿ ಕಮಿಟಿ ಅಧ್ಯಕ್ಷ ಅಜ್ಮತುಲ್ಲಾ ಖಾನ್, ಕಾರ್ಯದರ್ಶಿ ಸೖಯದ್ ಲಿಯಾಕತ್, ಮುಖಂಡರಾದ ಕಾಶೀಫ್, ಶಫಿ, ಅಫು, ಆರೀಫ್ , ಅಮೀರ್ ಜಾನ್ , ಮೋಸಿನ್ , ನದೀಮ್, ರಶೀದ್ , ಎಕ್ಬಾಲ್, ವಾಹಿದ್ ಮತ್ತಿತರರು ಹಾಜರಿದ್ದರು.

ಮೃತ್ಯುಂಜಯ ಹೋಮ :

ರಾಮನಗರದ ಗಣಪತಿ ದೇವಾಲಯದಲ್ಲಿ ಬೆಳಗ್ಗೆ ಶಾಸಕ ಇಕ್ಬಾಲ್ ಹುಸೇನ್ ರವರ ಧೀರ್ಘಾಯುಷ್ಯ ಮತ್ತು ಶ್ರೇಯೋಭಿವೃದ್ಧಿಗಾಗಿ ಮೃತ್ಯಂಜಯ ಹೋಮ ನೆರವೇರಿಸಲಾಯಿತು. ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಕೆ.ರಾಜು, ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಚೇತನ್ ಕುಮಾರ್, ನಗರಸಭೆ ಸದಸ್ಯ ಸಮದ್ , ಯುವ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಗುರುಪ್ರಸಾದ್, ಮುಖಂಡರಾದ ಚನ್ನಮಾನಹಳ್ಳಿ ಶ್ರೀನಿವಾಸ್ ಮತ್ತಿತರರು ಪಾಲ್ಗೊಂಡಿದ್ದರು.

ಸಂಜೀವಿನಿ ಮೃತ್ಯುಂಜಯ ಹೋಮ:

ರಾಮನಗರದ ಶಕ್ತಿ ದೇವತೆ ಚಾಮುಂಡೇಶ್ವರಿ ದೇವಾಲಯದಲ್ಲಿ ಶಾಸಕ ಇಕ್ಬಾಲ್ ಹುಸೇನ್ ರವರ ಆರೋಗ್ಯ ಸುಧಾರಣೆಗಾಗಿ ಸಂಜೀವಿನಿ ಮೃತ್ಯುಂಜಯ ಹೋಮ ಹಾಗೂ ಚಂಡಿಕಾ ಹೋಮವನ್ನು ನೆರವೇರಿಸಲಾಯಿತು.

ಕಾಂಗ್ರೆಸ್ ಮುಖಂಡರಾದ ಕೆ.ರಮೇಶ್, ಜಗದೀಶ್ , ರೈಡ್ ನಾಗರಾಜ್ , ಲೋಹಿತ್ ಬಾಬು, ಗಿರೀಶ್ ಮತ್ತಿತರರು ಭಾಗವಹಿಸಿದ್ದರು.

25ಕೆಆರ್ ಎಂಎನ್ 4,5,6.ಜೆಪಿಜಿ

4.ರಾಮನಗರದ ಪೀರನ್ ಷಾ ವಲಿ ದರ್ಗಾದಲ್ಲಿ ಮುಸ್ಲಿ ಬಾಂಧವರು ವಿಶೇಷ ಪ್ರಾರ್ಥನೆ ಸಲ್ಲಿಸಿದರು.

5.ರಾಮನಗರದ ಗಣಪತಿ ದೇವಾಲಯಲದಲ್ಲಿ ಮೃತ್ಯಂಜಯ ಹೋಮ ನೆರವೇರಿಸಲಾಯಿತು.

6.ರಾಮನಗರದ ಚಾಮುಂಡೇಶ್ವರಿ ದೇವಾಲಯದಲ್ಲಿ ಸಂಜೀವಿನಿ ಮೃತ್ಯುಂಜಯ ಮತ್ತು ಚಂಡಿಕಾ ಹೋಮ ನೆರವೇರಿಸಲಾಯಿತು.