ಸಾರಾಂಶ
ಭಾರತ-ಪಾಕಿಸ್ತಾನ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ಭಾರತೀಯ ಸೈನಿಕರಿಗಾಗಿ ಕರಾವಳಿಯಲ್ಲಿ ಮಂಗಳೂರು ಕೆಥೋಲಿಕ್ ಧರ್ಮಪ್ರಾಂತ್ಯದ ಚರ್ಚ್‌ಗಳಲ್ಲಿ ಭಾನುವಾರ ವಿಶೇಷ ಪ್ರಾರ್ಥನೆ ನೆರವೇರಿಸಲಾಯಿತು.
ಕನ್ನಡಪ್ರಭ ವಾರ್ತೆ ಮಂಗಳೂರು
ಭಾರತ-ಪಾಕಿಸ್ತಾನ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ಭಾರತೀಯ ಸೈನಿಕರಿಗಾಗಿ ಕರಾವಳಿಯಲ್ಲಿ ಮಂಗಳೂರು ಕೆಥೋಲಿಕ್ ಧರ್ಮಪ್ರಾಂತ್ಯದ ಚರ್ಚ್‌ಗಳಲ್ಲಿ ಭಾನುವಾರ ವಿಶೇಷ ಪ್ರಾರ್ಥನೆ ನೆರವೇರಿಸಲಾಯಿತು.ಕಾಶ್ಮೀರದ ಪೆಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರ ಮೇಲೆ ನಡೆದ ಕ್ರೂರ ಮತ್ತು ಹೇಡಿತನದ ಭಯೋತ್ಪಾದಕ ದಾಳಿಯಿಂದ ನಾವು ತೀವ್ರ ದುಃಖಿತರಾಗಿದ್ದೇವೆ ಮತ್ತು ಸಂಕಷ್ಟಕ್ಕೀಡಾಗಿದ್ದೇವೆ. ಅಮೂಲ್ಯ ಜೀವಗಳನ್ನು ಬಲಿ ತೆಗೆದುಕೊಂಡು, ಅನೇಕ ಜನರನ್ನು ಗಾಯಗೊಳಿಸಿದ ಈ ಘಟನೆ ದೇಶವನ್ನೇ ಬೆಚ್ಚಿಬೀಳಿಸಿದೆ. ಈ ದುಃಖದ ಸಮಯದಲ್ಲಿ ತಮ್ಮವರನ್ನು ಕಳೆದುಕೊಂಡು ಸಂತ್ರಸ್ತರಾದವರ ಮತ್ತು ಅವರ ಕುಟುಂಬಗಳೊಂದಿಗೆ ನಾವು ನಮ್ಮ ಒಗ್ಗಟ್ಟನ್ನು ಬಲವಾಗಿ ವ್ಯಕ್ತಪಡಿಸುತ್ತೇವೆ. ಒಂದು ವಿಶ್ವಾಸಾರ್ಹ ಸಮುದಾಯವಾಗಿ, ಈ ದಾಳಿಗಳಲ್ಲಿ ಸಾವನ್ನಪ್ಪಿದವರ ಆತ್ಮಗಳಿಗಾಗಿ ನಾವು ಪ್ರಾರ್ಥಿಸುತ್ತೇವೆ ಮತ್ತು ಗಾಯಗೊಂಡವರ ಶೀಘ್ರ ಚೇತರಿಕೆಗಾಗಿ ಪ್ರಾರ್ಥನೆ ಸಲ್ಲಿಸುತ್ತೇವೆ ಎಂದು ಕೆಥೋಲಿಕ್ ಧರ್ಮಪ್ರಾಂತ್ಯ ಪ್ರಕಟಣೆಯಲ್ಲಿ ತಿಳಿಸಿದೆ.
ಎಲ್ಲ ಚರ್ಚ್‌ಗಳಲ್ಲಿ ಧರ್ಮಗುರುಗಳು ಮತ್ತು ಚಾಪ್ಲಿನ್‌ಗಳು ಬಲಿ ಪೂಜೆ ಬಳಿಕ ಆರಾಧನೆ ನಡೆಸಿದರು.......................
ನಮ್ಮ ದೇಶದ ಗಡಿಗಳನ್ನು ಕಾಯುತ್ತಾ ನಮ್ಮ ಜನರನ್ನು ರಕ್ಷಣೆ ಮಾಡುತ್ತಿರುವ ನಮ್ಮ ಸಶಸ್ತ್ರ ಪಡೆಗಳ ಧೈರ್ಯ ಮತ್ತು ದಿಟ್ಟತನದ ಪ್ರಯತ್ನಗಳಿಗೆ ನಾವು ನಮ್ಮ ಪ್ರಾಮಾಣಿಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇವೆ. ನಾಗರಿಕರು ಮತ್ತು ಸೈನಿಕರ ಸುರಕ್ಷತೆಗಾಗಿಯೂ ನಾವು ಪ್ರಾರ್ಥನೆಗಳನ್ನು ಸಲ್ಲಿಸೋಣ.ಈ ಎರಡು ಮಹತ್ವದ ಬೆಳವಣಿಗೆಗಳು ಅಂದರೆ ಹೊಸ ಪೋಪ್ ಆಯ್ಕೆಯ ಹಿನ್ನೆಲೆಯಲ್ಲಿ ಕೃತಜ್ಞತೆ ಸಲ್ಲಿಕೆ ಮತ್ತು ಇನ್ನೊಂದು ರಾಷ್ಟ್ರೀಯ ಶೋಕಾಚರಣೆ ಈಗ ನಮ್ಮ ಮುಂದೆ ಇದೆ. ನಾವು ನೆರೆಯ ರಾಷ್ಟ್ರಗಳ ನಡುವೆ ಶಾಂತಿಗಾಗಿ ಪ್ರಾರ್ಥಿಸೋಣ.-ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ, ಧರ್ಮಾಧ್ಯಕ್ಷರು, ಮಂಗಳೂರು ಕೆಥೋಲಿಕ್ ಧರ್ಮಪ್ರಾಂತ್ಯ