ಸೈನಿಕರಿಗೆ ಶಕ್ತಿ ತುಂಬಲು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ

| Published : May 10 2025, 01:07 AM IST

ಸೈನಿಕರಿಗೆ ಶಕ್ತಿ ತುಂಬಲು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ
Share this Article
  • FB
  • TW
  • Linkdin
  • Email

ಸಾರಾಂಶ

ಭಾರತೀಯ ಸೈನ್ಯ "ಅಪರೇಷನ್ ಸಿಂದೂರ " ಹೆಸರಿನಲ್ಲಿ ನಡೆಸಿದ ದಾಳಿಯಲ್ಲಿ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಕ್ಫ್ ಹಾಗೂ ಅಲ್ಪಸಂಖ್ಯಾತರ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆದೇಶದಂತೆ ಶುಕ್ರವಾರ ಎಂದಿನ ಸಾಮೂಹಿಕ ಪ್ರಾರ್ಥನೆ ಜತೆ ಮಸೀದಿಗಳಲ್ಲಿ ಭಾರತೀಯ ಸೈನ್ಯದ ಹಿತದೃಷ್ಟಿಯಿಂದ ಪ್ರಾರ್ಥನೆ ಸಲ್ಲಿಸಲಾಯಿತು.

ಧಾರವಾಡ: ಭಯೋತ್ಪಾದಕರನ್ನು ದಮನ ಮಾಡಿ ದೇಶದ ಶಾಂತಿಗೆ ಮುಂದಾಗುತ್ತಿರುವ ಹೆಮ್ಮೆಯ ದೇಶದ ಸೈನಿಕರಿಗೆ ಶಕ್ತಿ ತುಂಬಲು ಹಾಗೂ ಅವರ ಶ್ರೇಯಸ್ಸಿಗಾಗಿ ರಾಜ್ಯದ ಎಲ್ಲ ವಕ್ಫ್‌ಗೆ ಸೇರಿದ ಮಸೀದಿಗಳಲ್ಲಿ ಹಾಗೂ ಇತರೆ ಮಸೀದಿಗಳಲ್ಲಿ ಶುಕ್ರವಾರ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಕಾಶ್ಮೀರ ಕಣಿವೆಯ ಪೆಹಲ್ಗಂನಲ್ಲಿ ಉಗ್ರಗಾಮಿಗಳು 26 ಭಾರತೀಯ ಪ್ರವಾಸಿಗರನ್ನು ಹತ್ಯೆಗೈದ ಹಿನ್ನಲೆಯಲ್ಲಿ ಭಾರತೀಯ ಸೈನ್ಯ "ಅಪರೇಷನ್ ಸಿಂದೂರ " ಹೆಸರಿನಲ್ಲಿ ನಡೆಸಿದ ದಾಳಿಯಲ್ಲಿ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಕ್ಫ್ ಹಾಗೂ ಅಲ್ಪಸಂಖ್ಯಾತರ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆದೇಶದಂತೆ ಶುಕ್ರವಾರ ಎಂದಿನ ಸಾಮೂಹಿಕ ಪ್ರಾರ್ಥನೆ ಜತೆ ಮಸೀದಿಗಳಲ್ಲಿ ಭಾರತೀಯ ಸೈನ್ಯದ ಹಿತದೃಷ್ಟಿಯಿಂದ ಪ್ರಾರ್ಥನೆ ಸಲ್ಲಿಸಲಾಯಿತು.

ಹುಬ್ಬಳ್ಳಿಯಲ್ಲೂ ಪ್ರಾರ್ಥನೆ: ಭಾರತ ಮತ್ತು ಪಾಕಿಸ್ತಾನ ಮಧ್ಯೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿರುವ ಹಿನ್ನೆಲೆಯಲ್ಲಿ ನಗರದ ಎಲ್ಲ ಮಸೀದಿ ಹಾಗೂ ದರ್ಗಾಗಳಲ್ಲಿ ಶುಕ್ರವಾರ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.

ಇಲ್ಲಿನ ಪತೇಶಾ ವಲಿ ಸೇರಿದಂತೆ ವಿವಿಧ ಮಸೀದಿ ಹಾಗೂ ದರ್ಗಾಗಳಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ವಕ್ಫ್‌ ಇಲಾಖೆಯಿಂದ ಪ್ರಾರ್ಥನೆ ಸಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಎಲ್ಲ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಲಾಗಿದೆ. ಅಂಜುಮನ್‌ ಇಸ್ಲಾಂ ಸಂಸ್ಥೆಯ ಅಧ್ಯಕ್ಷ ಎ.ಎಂ. ಹಿಂಡಸಗೇರಿ, ಅಲ್ತಾಫ್‌ ಹಳ್ಳೂರ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.