ಯಾವುದೇ ಕಾರಣಕ್ಕೂ ಶಾಲೆಗೆ ಗೈರಾಗದಂತೆ ಗಮನಹರಿಸಬೇಕು ಎಂದು ಸಲಹೆ ನೀಡಿದರು. ಸಮುದಾಯದತ್ತ ಶಾಲಾ ಕಾರ್ಯಕ್ರಮವು ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳ ನಡುವೆ ಶೈಕ್ಷಣಿಕ ವಿಚಾರಗಳ ವಿನಿಮಯಕ್ಕೆ ಉತ್ತಮ ವೇದಿಕೆಯಾಗಿದೆ. ಪೋಷಕರು ಇಂತಹ ಸಭೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಕ್ಕಳ ಕಲಿಕಾ ಪ್ರಗತಿಯ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕು. ವಾರಕ್ಕೊಮ್ಮೆಯಾದರೂ ಶಾಲೆಗೆ ಭೇಟಿ ನೀಡಿ ವಿಷಯವಾರು ಶಿಕ್ಷಕರೊಂದಿಗೆ ಚರ್ಚಿಸಬೇಕು. ಈವರೆಗೆ ನಡೆದಿರುವ ಪರೀಕ್ಷೆಗಳ ಮೂಲಕ ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯವನ್ನು ಗುರುತಿಸಲಾಗಿದ್ದು, ಹಿಂದುಳಿದಿರುವ ಮಕ್ಕಳಿಗೆ ಹೆಚ್ಚಿನ ಅಭ್ಯಾಸದ ಅಗತ್ಯವಿದೆ ಎಂದರು.
ಕನ್ನಡಪ್ರಭ ವಾರ್ತೆ ಅರಸೀಕೆರೆಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡುವುದರ ಜೊತೆಗೆ ಗುಣಮಟ್ಟದ ಫಲಿತಾಂಶ ದಾಖಲಿಸುವ ಉದ್ದೇಶದಿಂದ ಈಗಾಗಲೇ ಶಾಲಾ ಹಂತದಲ್ಲಿ ಹಲವು ಶೈಕ್ಷಣಿಕ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಹಾಸನ ಡಯಟ್ ಉಪನ್ಯಾಸಕ ಪರಮಶಿವಪ್ಪ ತಿಳಿಸಿದರು.ನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಸಮುದಾಯದತ್ತ ಶಾಲಾ ಕಾರ್ಯಕ್ರಮದಲ್ಲಿ ಮಾರ್ಗದರ್ಶಕರಾಗಿ ಪಾಲ್ಗೊಂಡು ಮಾತನಾಡಿದ ಅವರು, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯಲ್ಲಿ ಪೋಷಕರು ಮತ್ತು ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಮಕ್ಕಳು ಮನೆಯಲ್ಲಿ ಪ್ರತಿನಿತ್ಯ ಓದುವ ಅಭ್ಯಾಸ ಬೆಳೆಸಿಕೊಳ್ಳುವಂತೆ ಪೋಷಕರು ಪ್ರೇರೇಪಿಸಬೇಕು. ಯಾವುದೇ ಕಾರಣಕ್ಕೂ ಶಾಲೆಗೆ ಗೈರಾಗದಂತೆ ಗಮನಹರಿಸಬೇಕು ಎಂದು ಸಲಹೆ ನೀಡಿದರು. ಸಮುದಾಯದತ್ತ ಶಾಲಾ ಕಾರ್ಯಕ್ರಮವು ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳ ನಡುವೆ ಶೈಕ್ಷಣಿಕ ವಿಚಾರಗಳ ವಿನಿಮಯಕ್ಕೆ ಉತ್ತಮ ವೇದಿಕೆಯಾಗಿದೆ. ಪೋಷಕರು ಇಂತಹ ಸಭೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಕ್ಕಳ ಕಲಿಕಾ ಪ್ರಗತಿಯ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕು. ವಾರಕ್ಕೊಮ್ಮೆಯಾದರೂ ಶಾಲೆಗೆ ಭೇಟಿ ನೀಡಿ ವಿಷಯವಾರು ಶಿಕ್ಷಕರೊಂದಿಗೆ ಚರ್ಚಿಸಬೇಕು. ಈವರೆಗೆ ನಡೆದಿರುವ ಪರೀಕ್ಷೆಗಳ ಮೂಲಕ ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯವನ್ನು ಗುರುತಿಸಲಾಗಿದ್ದು, ಹಿಂದುಳಿದಿರುವ ಮಕ್ಕಳಿಗೆ ಹೆಚ್ಚಿನ ಅಭ್ಯಾಸದ ಅಗತ್ಯವಿದೆ ಎಂದರು.ಶಾಲೆಯ ಉಪಪ್ರಾಂಶುಪಾಲೆ ಶೈಲಜಾ ಮಾತನಾಡಿ, ಎಸ್ಎಸ್ಎಲ್ಸಿ ಪರೀಕ್ಷೆಗೆ ಇನ್ನು ನಾಲ್ಕು ತಿಂಗಳಷ್ಟೇ ಬಾಕಿಯಿದ್ದು, ಪೋಷಕರು ತಮ್ಮ ಮಕ್ಕಳ ಓದಿನ ಬಗ್ಗೆ ವಿಶೇಷ ಗಮನಹರಿಸಬೇಕು. ಶಾಲೆಯಲ್ಲಿ ಕ್ರಿಯಾಶೀಲ ಶಿಕ್ಷಕರ ತಂಡವಿದ್ದು, ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಸಜ್ಜುಗೊಳಿಸಲು ಬೆಳಗ್ಗೆ ಮತ್ತು ಸಂಜೆ ತಲಾ ಒಂದು ಗಂಟೆ ವಿಶೇಷ ತರಗತಿ ನಡೆಸಲು ನಿರ್ಧರಿಸಲಾಗಿದೆ. ಬೆಳಗ್ಗೆ 8.30ರಿಂದಲೂ ಹೆಚ್ಚುವರಿ ತರಗತಿ ಆರಂಭಿಸುವ ಚಿಂತನೆಯಿದ್ದು, ಇದಕ್ಕೆ ಪೋಷಕರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ಶಿಕ್ಷಕಿ ನಯನ, ಪೋಷಕ ಶಿವಕುಮಾರ್ ಮಾತನಾಡಿದರು,ಸಭೆಯಲ್ಲಿ ವಿಷಯವಾರು ಶಿಕ್ಷಕರು ವಿದ್ಯಾರ್ಥಿಗಳ ಕಲಿಕಾ ಪ್ರಗತಿ, ಪರೀಕ್ಷಾ ಸಿದ್ಧತೆ ಹಾಗೂ ಉತ್ತಮ ಫಲಿತಾಂಶಕ್ಕಾಗಿ ಕೈಗೊಂಡಿರುವ ವಿಶೇಷ ಕ್ರಮಗಳ ಕುರಿತು ಪೋಷಕರಿಗೆ ಮಾಹಿತಿ ನೀಡಿದರು.=====
ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಸಮುದಾಯದತ್ತ ಶಾಲಾ ಕಾರ್ಯಕ್ರಮದ ನಡೆಯಿತು.