ಎತ್ತಿನಹೊಳೆ ಯೋಜನೆಯಲ್ಲಿ ಮೊದಲ ಭಾಗದಲ್ಲಿ ಕುಡಿಯುವ ನೀರು ಪೂರೈಸುವ ಉದ್ದೇಶದಿಂದ 14 ಟಿಎಂಸಿ ನೀರನ್ನು ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಇತರೆ ತಾಲೂಕಿಗೆ ನೀಡಲಾಗುತ್ತದೆ.

ದೊಡ್ಡಬಳ್ಳಾಪುರ: ತಾಲೂಕಿನ ಮಾಡೇಶ್ವರ ಗ್ರಾಮದ ಸಮೀಪ ನಿರ್ಮಿಸಿರುವ ಎತ್ತಿನಹೊಳೆ ಯೋಜನೆಯ ಜಲ ವಿತರಣಾ ತೊಟ್ಟಿ - ಪೈಪ್‌ ಕಾಮಗಾರಿಯನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಶನಿವಾರ ಪರಿವೀಕ್ಷಣೆ ನಡೆಸಿದರು. ಎತ್ತಿನಹೊಳೆ ಯೋಜನೆಯಲ್ಲಿ ಮೊದಲ ಭಾಗದಲ್ಲಿ ಕುಡಿಯುವ ನೀರು ಪೂರೈಸುವ ಉದ್ದೇಶದಿಂದ 14 ಟಿಎಂಸಿ ನೀರನ್ನು ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಇತರೆ ತಾಲೂಕಿಗೆ ನೀಡಲಾಗುತ್ತದೆ. ಇದಾದ ನಂತರ ವಿವಿಧ ತಾಲೂಕುಗಳ ವ್ಯಾಪ್ತಿಯಲ್ಲಿನ ಕೆರೆ ತುಂಬಿಸುವ ಕಾರ್ಯವನ್ನು ಮಾಡಲಾಗುವುದು ಎಂದರು. ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಈ ಸಮತೋಲಿತ ಜಲಾಶಯ ನಿರ್ಮಾಣವಾಗುತ್ತಿದೆ‌. ಎತ್ತಿನಹೊಳೆ ಯೋಜನೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿಗೆ ವಿಶೇಷ ಆದ್ಯತೆ ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ, ಶಾಸಕ ಧೀರಜ್‌ ಮುನಿರಾಜ್, ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ನೀರಾವರಿ ಇಲಾಖೆ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.