ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ

| Published : Nov 04 2024, 12:37 AM IST

ಸಾರಾಂಶ

ಹೊಳೆನರಸೀಪುರ ಪಟ್ಟಣದ ಶ್ರೀ ಲಕ್ಷ್ಮಿನರಸಿಂಹಸ್ವಾಮಿ ದೇವಾಲಯ, ಶ್ರೀ ಕನ್ನಿಕಾ ಪರಮೇಶ್ವರಿ ದೇವಾಲಯ ಹಾಗೂ ಇತರೆ ದೇವಾಲಯಗಳಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಶನಿವಾರ ವಿಶೇಷ ಪೂಜಾ ಮಹೋತ್ಸವ ಮತ್ತು ವರ್ತಕರು ತಮ್ಮ ಅಂಗಡಿ ಮುಂಗಟ್ಟುಗಳಲ್ಲಿ ಶ್ರೀ ಧನಲಕ್ಷ್ಮಿ ಪೂಜಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು.ಶ್ರೀದೇವಿ ಹಾಗೂ ಗರ್ಭಗುಡಿಯನ್ನು ನೋಟುಗಳಿಂದ ಧನಲಕ್ಷ್ಮಿ ಪೂಜಾ ಮಹೋತ್ಸವವು ವೈಭವದಿಂದ ಕಂಗೊಳಿಸುವಂತೆ ವಿಶೇಷವಾಗಿ ಅಲಂಕರಿಸಿ ಪೂಜಿಸಲಾಯಿತು.

ಹೊಳೆನರಸೀಪುರ: ಪಟ್ಟಣದ ಶ್ರೀ ಲಕ್ಷ್ಮಿನರಸಿಂಹಸ್ವಾಮಿ ದೇವಾಲಯ, ಶ್ರೀ ಕನ್ನಿಕಾ ಪರಮೇಶ್ವರಿ ದೇವಾಲಯ ಹಾಗೂ ಇತರೆ ದೇವಾಲಯಗಳಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಶನಿವಾರ ವಿಶೇಷ ಪೂಜಾ ಮಹೋತ್ಸವ ಮತ್ತು ವರ್ತಕರು ತಮ್ಮ ಅಂಗಡಿ ಮುಂಗಟ್ಟುಗಳಲ್ಲಿ ಶ್ರೀ ಧನಲಕ್ಷ್ಮಿ ಪೂಜಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು.

ಪಟ್ಟಣದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ಶ್ರೀ ಸ್ವಾಮಿಯ ಮೂಲ ಮೂರ್ತಿ ಹಾಗೂ ಪ್ರಹಾಂಗಣದಲ್ಲಿರುವ ಶ್ರೀ ಲಕ್ಷ್ಮೀದೇವಿ ಅಮ್ಮನವರ ಮೂರ್ತಿಗೆ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ, ನೈವೇದ್ಯ, ತಥಿ ಆರಾಧನೆ ಸೇವೆ, ಸಹಸ್ರ ನಾಮಾರ್ಚನೆ, ಮಂಗಳಾರತಿ ನೆರವೇರಿಸಲಾಯಿತು. ಪಟ್ಟಣದ ಶ್ರೀ ಕನ್ನಿಕಾಪರಮೇಶ್ವರಿ ದೇವಾಲಯದಲ್ಲಿ ಅರ್ಚಕರಾದ ಲೋಕೇಶ್ ಭಟ್ಟರು ಹಾಗೂ ಎಸ್‌ವಿಸಿ ಬ್ಯಾಂಕ್ ಸಿಬ್ಬಂದಿ ದೀಪಾವಳಿ ಹಬ್ಬದ ಪ್ರಯುಕ್ತ ಶ್ರೀ ವಾಸವಾಂಬ ಕೋ. ಬ್ಯಾಂಕ್ ಸಹಕಾರದಲ್ಲಿ ಶ್ರೀದೇವಿ ಹಾಗೂ ಗರ್ಭಗುಡಿಯನ್ನು ನೋಟುಗಳಿಂದ ಧನಲಕ್ಷ್ಮಿ ಪೂಜಾ ಮಹೋತ್ಸವವು ವೈಭವದಿಂದ ಕಂಗೊಳಿಸುವಂತೆ ವಿಶೇಷವಾಗಿ ಅಲಂಕರಿಸಿ ಪೂಜಿಸಲಾಯಿತು.