ಶ್ರೀ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ

| Published : Dec 14 2024, 12:49 AM IST

ಸಾರಾಂಶ

ಹನುಮ ಜಯಂತಿ ಪ್ರಯುಕ್ತ ನಗರದ ರೈಲ್ವೆ ನಿಲ್ದಾಣದ ಎದುರು ಇರುವ ಶ್ರೀ ಆಂಜನೇಯ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶುಕ್ರವಾರ ಬೆಳಿಗ್ಗಿನಿಂದ ಸಂಜೆವರೆಗೂ ವಿವಿಧ ಸೇವಾ ಕಾರ್ಯಕ್ರಮ ಹಾಗೂ ಮಧ್ಯಾಹ್ನ ಅನ್ನಸಂತರ್ಪಣೆಯನ್ನು ಯಶಸ್ವಿಯಾಗಿ ನೆರವೇರಿಸಲಾಯಿತು. ಸಂಜೆ ೭:೩೦ಕ್ಕೆ ಮಾರುತಿ ಉತ್ಸವ ನಗರದಲ್ಲಿ ಸಾಗಿತು. ರಾತ್ರಿ ೯:೩೦ಕ್ಕೆ ಮಹಾಮಂಗಳಾರತಿ ಹಾಗೂ ಲಾಲಿ ಕಾರ್ಯಕ್ರಮ ನೆರವೇರಿಸಲಾಯಿತು.

ಕನ್ನಡಪ್ರಭ ವಾರ್ತೆ ಹಾಸನ

ಹನುಮ ಜಯಂತಿ ಪ್ರಯುಕ್ತ ನಗರದ ರೈಲ್ವೆ ನಿಲ್ದಾಣದ ಎದುರು ಇರುವ ಶ್ರೀ ಆಂಜನೇಯ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶುಕ್ರವಾರ ಬೆಳಿಗ್ಗಿನಿಂದ ಸಂಜೆವರೆಗೂ ವಿವಿಧ ಸೇವಾ ಕಾರ್ಯಕ್ರಮ ಹಾಗೂ ಮಧ್ಯಾಹ್ನ ಅನ್ನಸಂತರ್ಪಣೆಯನ್ನು ಯಶಸ್ವಿಯಾಗಿ ನೆರವೇರಿಸಲಾಯಿತು.

ಶುಕ್ರವಾರ ಬೆಳಿಗ್ಗೆ ಸುಪ್ರಭಾತ ಸೇವೆ, ಅಭಿಷೇಕ, ೮ ಗಂಟೆಗೆ ಮಹಾಮಂಗಳಾರತಿ, ೯ಕ್ಕೆ ಮಾರುತಿ ಹೋಮ, ಮಧ್ಯಾಹ್ನ ೧೨ ಗಂಟೆಗೆ ಪೂರ್ಣಾಹುತಿ ಇದಾದ ನಂತರ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನೆರವೇರಿತು. ಮಧ್ಯಾಹ್ನ ೧೨:೩೦ಕ್ಕೆ ಸಾವಿರಾರು ಜನರಿಗೆ ಅನ್ನಸಂತರ್ಪಣೆ ನೆರವೇರಿಸಿದರು. ಸಂಜೆ ೭:೩೦ಕ್ಕೆ ಮಾರುತಿ ಉತ್ಸವ ನಗರದಲ್ಲಿ ಸಾಗಿತು. ರಾತ್ರಿ ೯:೩೦ಕ್ಕೆ ಮಹಾಮಂಗಳಾರತಿ ಹಾಗೂ ಲಾಲಿ ಕಾರ್ಯಕ್ರಮ ನೆರವೇರಿಸಲಾಯಿತು.

ಇದೇ ವೇಳೆ ದೇವಾಲಯದ ಅರ್ಚಕರಾದ ರಕ್ಷಿತ್ ಭಾರಧ್ವಜ್ ಮಾರುತಿ ಜಯಂತಿ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ನಗರದ ಶ್ರೀ ನೀರುಬಾಗಿಲು ಆಂಜನೇಯ ದೇವಸ್ಥಾನ ಹಾಗೂ ಜವರಾಯಪಟ್ಟಣದ ದೇವಸ್ಥಾನ ಸೇರಿದಂತೆ ವಿವಿಧ ಭಾಗಗಳಲ್ಲಿ ದೇವರಿಗೆ ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿದವು.