ಸಾರಾಂಶ
ರಾಜ್ಯದ ಜನಪ್ರಿಯ ಮುಖ್ಯಮಂತ್ರಿ, ಅಹಿಂದ ವರ್ಗಗಳ ನಾಯಕ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಕ್ಷುಲ್ಲಕ ಕಾರಣ ನೀಡಿ, ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ.
ಕನ್ನಡಪ್ರಭ ವಾರ್ತೆ ನಂಜನಗೂಡು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ಪ್ರಶ್ನಿಸಿ ಸಲ್ಲಿಸಿರುವ ರಿಟ್ ಅರ್ಜಿ ಕುರಿತು ಹೈಕೋರ್ಟ್ ತೀರ್ಪು ಸಿದ್ದರಾಮಯ್ಯ ಅವರ ಪರ ಬರಲಿ ಎಂದು ಸಿದ್ದರಾಮಯ್ಯ ಅಭಿಮಾನಿಗಳು ಸೋಮವಾರ ತಾಲೂಕಿನ ತಾಂಡವಪುರ ಗ್ರಾಮದಲ್ಲಿ ಬೀರೇಶ್ವರ ಸ್ವಾಮಿ ದೇವಾಲಯಕ್ಕೆ ವಿಶೇಷ ಪೂಜೆ ಸಲ್ಲಿಸಿದರು.ಕಾಂಗ್ರೆಸ್ ಮುಖಂಡ ದಕ್ಷಿಣಮೂರ್ತಿ ಮಾತನಾಡಿ, ರಾಜ್ಯದ ಜನಪ್ರಿಯ ಮುಖ್ಯಮಂತ್ರಿ, ಅಹಿಂದ ವರ್ಗಗಳ ನಾಯಕ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಕ್ಷುಲ್ಲಕ ಕಾರಣ ನೀಡಿ, ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಈ ವಿಚಾರ ಕುರಿತು ಆ. 29ಕ್ಕೆ ಹೈಕೋರ್ಟ್ ತೀರ್ಪು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರ ಬರಲಿ, ಸತ್ಯ ಗೆಲ್ಲಲಿ ಎಂದು ಬೀರೇಶ್ವರ ಸ್ವಾಮಿ ದೇವಾಲಯಕ್ಕೆ ವಿಶೇಷ ಪೂಜೆ ಸಲ್ಲಿಸಲಾಗಿದೆ ಎಂದರು.
ಮುಖಂಡರಾದ ಅಂದಾನಿಗೌಡ, ಅರುಣಕುಮಾರ್, ಸಿದ್ದಪ್ಪ, ಅಹಲ್ಯ ಪ್ರಭು, ಮಾಲೇಗೌಡ, ಮಹದೇವ, ಗುರು, ಬೀರಲಿಂಗ, ರಾಕೇಶ್, ಚಂದ್ರು, ಚಿಕ್ಕಣ, ಮಹೇಶ, ಸಂಪತ್ ಕುಮಾರ್, ಮಂಜು, ತಮ್ಮಯ್ಯ ಇದ್ದರು.